Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗನ್ ಮ್ಯಾನ್ ಹುಚ್ಚಾಟ-ಪಿಸ್ತೂಲ್ ನಿಂದ ಹಾರಿದ ಗುಂಡು | Chandrababu Naidu
    Viral

    ಗನ್ ಮ್ಯಾನ್ ಹುಚ್ಚಾಟ-ಪಿಸ್ತೂಲ್ ನಿಂದ ಹಾರಿದ ಗುಂಡು | Chandrababu Naidu

    vartha chakraBy vartha chakraAugust 31, 202327 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.31 – ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರನ ಗನ್ ಮ್ಯಾನ್ ಆಗಿದ್ದ ನಿವೃತ್ತ ಯೋಧ ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಗುಂಡು ಹಾರಿಸಿರುವ ಘಟನೆ ತಿಲಕ್ ನಗರದಲ್ಲಿ ನಡೆದಿದೆ.
    ಭಾರತೀಯ ಸೇನೆಯಲ್ಲಿ 21 ವರ್ಷ ಸೇವೆ ಸಲ್ಲಿಸಿ ಸದ್ಯ ಕರ್ನಾಟಕದ ಕಾಂಗ್ರೆಸ್ ಮುಖಂಡ ಉಮಾಪತಿ ಗೌಡ ಅವರ ಸಹೋದರನ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿರುವ ಪ್ರಶಾಂತ್ ಎಂಬ ಗನ್ ಮ್ಯಾನ್ ಕುಡಿದ ಅಮಲಿನಲ್ಲಿ ಅನಿಲ್ ಕುಮಾರ್ ಎಂಬ ಮತ್ತೊಬ್ಬ ಗನ್ ಮ್ಯಾನ್ ಮೇಲೆಯೇ ಗುಂಡು ಹಾರಿಸಿದ್ದಾನೆ.

    ಅದೃಷ್ಟವಶಾತ್ ಅನಿಲ್ ಕುಮಾರ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಗುಂಡು ತಲೆಯ ಸಮೀಪಿಸಿ ಪಾಸ್ ಆಗಿದ್ದರಿಂದ ಅನಿಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ ಕಳೆದ ಆಗಸ್ಟ್ 27 ರ ರಾತ್ರಿ‌ 12 ಗಂಟೆಗೆ ಜಯನಗರ 4ನೇ ಬ್ಲಾಕ್ನಲ್ಲಿರುವ ಪಿಜಿಯಲ್ಲಿ ಕುಡಿದ ಅಮಲಿನಲ್ಲಿದ್ದ ಗನ್ ಮ್ಯಾನ್ ಪ್ರಶಾಂತ್ ಅವರು, ಮತ್ತೊಬ್ಬ ಗನ್ ಮ್ಯಾನ್ ಅನಿಲ್ ಕುಮಾರ್ ಅವರ ಮೇಲೆ ಗುಂಡು ಹಾರಿಸಿದ್ದಾರೆ.
    ಘಟನೆಗೂ ಮುನ್ನ ಬಾರ್ ಗೆ ಹೋಗಿ ಪ್ರಶಾಂತ್ ಮತ್ತು ಅನಿಲ್ ಮದ್ಯ ಖರೀದಿಸಿ ಇಬ್ಬರು ಪಿಜಿ ರೂಮ್ನಲ್ಲೇ ಕುಡಿದು ಪಾರ್ಟಿ ಮಾಡಿದ್ದರು. ರಾತ್ರಿ 10.30ಕ್ಕೆ ಊರಿನ ಗೆಳೆಯ ಅಮಿತ್ ಎಂಬಾತ ಇವರ ರೂಮ್ಗೆ ಬಂದಿದ್ದರು.

    ಅಮಿತ್ ಪಿಜಿ ಹೊರಗೆ ಮಾತಾಡಿಕೊಂಡು ನಿಂತಿದ್ದಾಗ ಪ್ರಶಾಂತ್ ಪಿಜಿಯಲ್ಲಿ ಊಟ ಮಾಡಿಕೊಂಡಿದ್ದರು. ಈ ವೇಳೆ ತನ್ನ ಪತ್ನಿ ಜೊತೆಗೆ ಫೋನ್ ನಲ್ಲಿ ಕಿರುಚಾಡುತ್ತಾ ಮಾತನಾಡುತ್ತಿದ್ದರು. ಆಗ ಕಿರುಚಾಟ ಕೇಳಿ ಬಂದ ಅನಿಲ್ ಅವರು ಯಾಕೆ ಕಿರುಚಾಡ್ತಿಯ ನಿಧಾನವಾಗಿ ಮಾತನಾಡು ಎಂದು ಹೇಳಿದ್ದಾರೆ.
    ಇಷ್ಟಕ್ಕೆ ಕೋಪಗೊಂಡ ಪ್ರಶಾಂತ್ ಅವರು ತಮ್ಮ ಬೀರುವಿನಲ್ಲಿದ್ದ ಪಿಸ್ತೂಲ್ ತೆಗೆದು ಅನಿಲ್ ಮೇಲೆ ಗುಂಡು ಹಾರಿಸಿದ್ದಾರೆ. ಅದೃಷ್ಟವಶಾತ್ ಅನಿಲ್ ಕುಮಾರ್ಗೆ ಸಮೀಪಿಸಿ ಗುಂಡು ಪಾಸ್ ಆಗಿದೆ. ಅಷ್ಟೇ ಅಲ್ಲದೆ ಕರೆಂಟ್ ಸ್ವಿಚ್ ಬಾಕ್ಸ್ ಮತ್ತು ಬಾತ್ ರೂಮ್ ಕನ್ನಡಿ ಒಡೆದು ಪ್ರಶಾಂತ್ ಹುಚ್ಚಾಟ ನಡೆಸಿದ್ದಾರೆ.

    ಪಿಜಿಯಲ್ಲಿ ನಡೆದ ಘಟನೆ ಬಗ್ಗೆ ಅನಿಲ್ ಅವರು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಆಧಾರ ಮೇಲೆ ಗುಂಡು ಹಾರಿಸಿದ್ದ ಪ್ರಶಾಂತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿ ಕಳಿಸಿದ್ದಾರೆ.
    ಗನ್ ಮ್ಯಾನ್ ಪ್ರಶಾಂತ್, 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ 2015ರಲ್ಲಿ ನಿವೃತ್ತಿಯಾಗಿ ವಾಪಸ್ಸಾಗಿದ್ದರು. ನಂತರ ವಿವಿಐಪಿಗಳಿಗೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮಗ ನಾ.ರಾ ಲೋಕೇಶ್ ಅವರ ಗನ್ ಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ಟಿಡಿಪಿ ಪಕ್ಷದ ಹಾಲಿ ಯುವ ನಾಯಕ ನಾರಾ ಲೋಕೇಶ್ ಅವರಿಗೆ ಗನ್ ಮ್ಯಾನ್ ಆಗಿದ್ದರು. ನಂತರ ಈಗ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ, ನಿರ್ಮಾಪಕ ಉಮಾಪತಿ ಗೌಡ ಸಹೋದರ ದೀಪಕ್ ಗೌಡರಿಗೆ ಗನ್ ಮ್ಯಾನ್ ಆಗಿದ್ದಾರೆ.

    Verbattle
    Verbattle
    Verbattle
    Bangalore Chandrababu Naidu Government News Politics Trending ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಗೃಹ ಲಕ್ಷ್ಮಿಗೆ ಅದ್ದೂರಿ ಚಾಲನೆ ನೀಡಿದ ಬಿಜೆಪಿ ಶಾಸಕ | Gruha Lakshmi
    Next Article ತೆಂಡೂಲ್ಕರ್ ಯಾಕೆ ಹೀಗೆ ಮಾಡಿದರು? | Sachin Tendulkar
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • CarrieMes on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Tracymix on ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    • Gwyetm on ಬಿಜೆಪಿ ಎಸ್.ಟಿ. ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.