Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಬ್ಬಾಳ್ಕರ್ ಪುತ್ರ, ಜಾರಕಿಹೊಳಿ ಪುತ್ರಿ ಅಖಾಡಕ್ಕೆ | Satish Jarkiholi
    Viral

    ಹೆಬ್ಬಾಳ್ಕರ್ ಪುತ್ರ, ಜಾರಕಿಹೊಳಿ ಪುತ್ರಿ ಅಖಾಡಕ್ಕೆ | Satish Jarkiholi

    vartha chakraBy vartha chakraFebruary 22, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.22- ಈ ಬಾರಿ ರಾಜ್ಯದಲ್ಲಿ ಅತ್ಯಧಿಕ ಸಂಸದರನ್ನು ಆಯ್ಕೆ ಮಾಡಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ಪಕ್ಷ ಇದೀಗ ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮಋಣಆಲ್ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ.
    ಬೆಳಗಾವಿಯ ಎರಡು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಮಂತ್ರಿಗಳು ಒಟ್ಟಾಗಿ ಕುಳಿತು ಒಮ್ಮತದ ನಿರ್ಧಾರ ಕೈಗೊಂಡು ತಮಗೆ ತಿಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದರು.

    ಈ ಹಿನ್ನಲೆಯಲ್ಲಿ ಕಳೆದ ರಾತ್ರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ಸೇರಿದ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತು ಪ್ರಮುಖ ನಾಯಕರು ಚಿಕ್ಕೋಡಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕಾದರೆ ಯಾವ ರೀತಿಯ ರಣತಂತ್ರ ರೂಪಿಸಬೇಕು ಎಂದು ಚರ್ಚಿಸಿದ್ದಾರೆ.
    ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ನಡೆಸಿರುವ ಎರಡು ಸಮೀಕ್ಷಾ ವರದಿಗಳ ವಿವರಗಳ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಸಲಾಗಿದೆ.
    ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ ಆದರೆ ಇದಕ್ಕಾಗಿ ಜಿಲ್ಲೆಯ ಪಕ್ಷದ ಎಲ್ಲ ಜನಪ್ರತಿನಿಧಿಗಳು ಮತ್ತು ಪ್ರಮುಖ ನಾಯಕರು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಸಮೀಕ್ಷಾ ವರದಿಗಳು ತಿಳಿಸಿವೆ.
    ಈ ವರದಿಗಳನ್ನು ಉಲ್ಲೇಖಿಸಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಎರಡು ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಾಗಿದೆ. ಆಗ ಮಾತ್ರ ಬಿಜೆಪಿಯನ್ನು ಹಿಮ್ಮಟ್ಟಿಸಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ವಿವರಿಸಿರುವದಾಗಿ ಗೊತ್ತಾಗಿದೆ.

    ಬೆಳಗಾವಿಯಲ್ಲಿ ವೀರಶೈವ ಪಂಚಮಸಾಲಿ ಸಮುದಾಯಕ್ಕೆ ಸೇರಿದವರಿಗೆ ಟಿಕೆಟ್ ನೀಡಬೇಕು ಅದೇ ರೀತಿ ಚಿಕ್ಕೋಡಿ ಕ್ಷೇತ್ರದಲ್ಲಿ ವೀರಶೈವರಿಗೆ ಟಿಕೆಟ್ ನೀಡಿದರೆ ಅನುಕೂಲವಾಗಲಿದೆ ಆದರೂ ಕೂಡ ಈ ಕ್ಷೇತ್ರದಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಕಣಕ್ಕಿಳಿದರೆ ಗೆಲುವು ಸುಲಭವಾಗಿದೆ ಎಂದು ಚರ್ಚಿಸಲಾಗಿದೆ.
    ಈ ಕ್ಷೇತ್ರವನ್ನು ಹಿಂದುಳಿದ ಕುರುಬ ಸಮುದಾಯಕ್ಕೆ ಬಿಟ್ಟುಕೊಡಬೇಕು ಈ ನಿಟ್ಟಿನಲ್ಲಿ ಸಮುದಾಯದ ಪ್ರಮುಖ ನಾಯಕರಾದ ಚಿಂಗಳೆ ಅವರನ್ನು ಕಣಕ್ಕಿಳಿಸಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದರಾದರು ಅದಕ್ಕೆ ಲಕ್ಷ್ಮಣ ಸವದಿ ಅವರು ವಿರೋಧ ವ್ಯಕ್ತಪಡಿಸಿದ್ದಾರೆ ಈ ಸಭೆಯಲ್ಲಿ ಹಾಜರಿದ್ದ ಚಿಂಗಳೆ ಅವರ ಸಮ್ಮುಖದಲ್ಲಿಯೇ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ ಸವದಿ ಅವರು ಬಿಜೆಪಿಗೆ ತಕ್ಕ ಎದುರಾಳಿ ಕಣಕ್ಕಿಳಿಯಬೇಕು ಈ ನಿಟ್ಟಿನಲ್ಲಿ ಜಾರಕಿಹೊಳಿ ಅವರ ಪುತ್ರಿ ಸೂಕ್ತ ಅಭ್ಯರ್ಥಿ ಚಿಂಗಳೇ ಅವರಿಗೆ ಪಕ್ಷ ಉನ್ನತ ಸ್ಥಾನಮಾನ ನೀಡಿ ಗೌರವಿಸಬೇಕು ಎಂದು ಹೇಳಿದ್ದಾರೆ.
    ಅದೇ ರೀತಿ ಬೆಳಗಾವಿ ಕ್ಷೇತ್ರಕ್ಕೆ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಕಣಕ್ಕಿಳಿದರೆ ಮಾತ್ರ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಲಿದೆ ಇದು ಜಿಲ್ಲೆಯ ಎಲ್ಲ ಶಾಸಕರ ಒಮ್ಮತದ ಅಭಿಪ್ರಾಯವಾಗಿದ್ದು ಇಬ್ಬರು ಮಂತ್ರಿಗಳು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಸವದಿ ಸಭೆಗೆ ತಿಳಿಸಿದರು ಎನ್ನಲಾಗಿದೆ.

    ಇದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕ್ಷೇತ್ರ ವ್ಯಾಪ್ತಿಗೆ ಬರುವ ಅರಭಾವಿ ಮತ್ತು ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮತ ತಂದು ಕೊಡುವುದಾಗಿ ಸತೀಶ್ ಜಾರಕಿಹೊಳಿಯವರು ಭರವಸೆ ನೀಡಿದರೆ ತಮ್ಮ ಪುತ್ರನನ್ನು ಕಣಕ್ಕಿಳಿಸಲು ಸಿದ್ಧ ಎಂದು ಹೇಳಿದರೆನ್ನಲಾಗಿದೆ.
    ಇದಕ್ಕೆ ಸತೀಶ್ ಜಾರಕಿಹೊಳಿ ಅವರು ಸಹಮತ ವ್ಯಕ್ತಪಡಿಸಿದ್ದು ಕ್ಷೇತ್ರದ ಎಲ್ಲ ಮುಖಂಡರು ಕಾಂಗ್ರೆಸ್ ಅಭ್ಯರ್ಥಿಯ ಪರ ಕೆಲಸ ಮಾಡಲಿದ್ದಾರೆ ಎಂಬ ಭರವಸೆ ನೀಡಿದ್ದಾರೆ ಆದರೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರಿ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಕುರಿತಂತೆ ಸ್ವಲ್ಪ ಸಮಯದ ನಂತರ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು ಎಂದು ಉನ್ನತ ಮೂಲಗಳು ತಿಳಿಸಿವೆ.
    ಈ ಸಂಬಂಧ ಸೋಮವಾರ ಮತ್ತೊಮ್ಮೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತು ಪ್ರಮುಖ ನಾಯಕರು ಸಭೆ ಸೇರಿ ತಮ್ಮ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ತಿಳಿಸಲಿದ್ದಾರೆ ಎಂದು ಗೊತ್ತಾಗಿದೆ.

    Verbattle
    Verbattle
    Verbattle
    Jarkiholi Satish Jarkiholi ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇಂಟರ್ನೆಟ್ ಹಾಗೂ ಮೊಬೈಲ್ ನೆಟ್ವರ್ಕ್ಸ್ ಗಾಗಿ ಪರದಾಟ | Mobile Network
    Next Article ರೆಸಾರ್ಟ್ ರಾಜಕಾರಣಕ್ಕೆ ಸಜ್ಜಾದ ವೇದಿಕೆ | Resort Politics
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    1 Comment

    1. Yoioih on March 22, 2026 9:43 am

      Mostbet – cassino feito para quem quer sentir a emoГ§ГЈo de verdade – https://mostbetpt.pro/mostbet-app/ , No Mostbet cada novo dia traz mais emoГ§ГЈo e mais recompensas .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola on ಹೀಗೂ ಸುದ್ದಿಯಾದ ನಳಪಾಡ್.
    • Rickytug on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • jasminsideenreich.de on ಸಾಲು ಮರದ ತಿಮ್ಮಕ್ಕನನ್ನು ಬಿಡಲಿಲ್ಲ ಚೈತ್ರಾ ಕುಂದಾಪುರ | Saalumarada Thimmakka
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.