Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಯಕತ್ವ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದು ಹೀಗೆ
    Viral

    ನಾಯಕತ್ವ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದು ಹೀಗೆ

    vartha chakraBy vartha chakraFebruary 17, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.17- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್ ನಲ್ಲಿ ತಣ್ಣಗಾಗಿದ್ದ ನಾಯಕತ್ವ ಬದಲಾವಣೆ ವಿಚಾರ ಇದೀಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ನಾಯಕತ್ವದ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲೋಕಸಭೆ ಚುನಾವಣೆ ಬಳಿಕವೂ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರಲಿದೆ. ಸರ್ಕಾರವನ್ನು ಅಭದ್ರ ಗೊಳಿಸುವ ಪ್ರಯತ್ನಗಳು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಯಶಸ್ವಿಯಾಗುವುದಿಲ್ಲ ಎಂದು ಭವಿಷ್ಯ ನುಡಿದರು.
    ಮಹಾರಾಷ್ಟ್ರದಂತೆ ಇಲ್ಲಿ ಅಜಿತ್ ಪವಾರ್ ಆಗಲಿ, ಅಶೋಕ್ ಚೌವ್ಹಾಣ್ ಆಗಲಿ ಕಂಡುಬರುವುದಿಲ್ಲ, ಅಂತಹ ಸಾಧ್ಯತೆಯೂ ಇಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷ ಅವಧಿಯನ್ನು ಪೂರ್ಣಗೊಳಿಸುತ್ತದೆ. ಮತ್ತೆ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

    ರಾಜ್ಯದ ಜನ ಕಾಂಗ್ರೆಸ್‍ಗೆ 135 ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದಾರೆ. ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದೇವೆ. ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಮುಖರಾದ ರಾಹುಲ್‍ಗಾಂಧಿ, ಸೋನಿಯಾಗಾಂಧಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
    ವಿರೋಧಪಕ್ಷಗಳ ನಾಯಕರಿಗೆ ಅಧಿಕಾರ ಕಳೆದುಕೊಂಡು ನಿದ್ರೆ ಬರುತ್ತಿಲ್ಲ. ಅದಕ್ಕಾಗಿ ದಿನ ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ, ಸಿಡಿ ಬಿಡುಗಡೆ ಎಂದೆಲ್ಲಾ ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ, ಸರ್ಕಾರ ಪತನವಾಗಲಿದೆ ಎಂಬ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಜೆಡಿಎಸ್-ಬಿಜೆಪಿಯಲ್ಲಿ ಚಲನಚಿತ್ರ ನಿರ್ಮಾಪಕರು ಹೆಚ್ಚಾಗಿದ್ದಾರೆ. ನಿರ್ದೇಶಕರು, ಕಥೆ ಬರೆಯುವವರ ಪ್ರಮಾಣವೂ ಹೆಚ್ಚಾಗಿದೆ. ಅದಕ್ಕಾಗಿ ರಾಜಕೀಯವಾಗಿ ದಿನಕ್ಕೊಂದು ಹೊಸಹೊಸ ಕಥೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸ್ರ್ಪಧಿಸುವುದಾದರೆ ಸ್ವಾಗತಿಸುತ್ತೇನೆ. ಈ ಹಿಂದೆ ಅವರು ಎರಡು ಬಾರಿ ಸಂಸದರಾಗಿದ್ದರು. ಅವರ ನಿರ್ಗಮನದ ಬಳಿಕ ನಾನು ಆಯ್ಕೆಯಾಗಿದ್ದೇನೆ. ನಮ್ಮ ಪಕ್ಷ ನನಗೆ ಮರಳಿ ಸ್ಪರ್ಧಿಸಲು ಸೂಚನೆ ನೀಡಿದರೆ ನಾನು ಚುನಾವಣೆಯನ್ನು ಎದುರಿಸಲು ಬೇಕಾದ ತಂತ್ರಗಾರಿಕೆಯನ್ನು ಸಿದ್ಧಮಾಡಿಕೊಳ್ಳುತ್ತೇನೆ. ಕುಮಾರಸ್ವಾಮಿಯವರ ಸ್ಪರ್ಧೆಯನ್ನು ನಾನು ಸವಾಲು ಎಂದು ಸ್ವೀಕರಿಸುತ್ತಿಲ್ಲ. ರಾಜಕೀಯ ಹೋರಾಟ ಎಂದು ಪರಿಗಣಿಸುವುದಾಗಿ ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ ಚಲನಚಿತ್ರ Election ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಖರ್ಗೆ ಅವರಿಗೆ ಝೆಡ್ ಮಾದರಿಯ ಭದ್ರತೆ | Kharge
    Next Article ಆನೆಯಿಂದ ಸಿಕ್ಕಿಬಿದ್ದ ಮೋಸ್ಟ್ ವಾಂಟೆಡ್ ನಕ್ಸಲ್
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    2 Comments

    1. Fqdzxf on February 17, 2026 11:32 pm

      wow vegas casino online combines massive bonuses, calm mobile play, and a gargantuan classification of notch titles in a authorized social casino format. It’s acme for anyone wanting authoritative casino festivity with the unpremeditated to come in redeemable prizes without risking bona fide cash.

      Reply
    2. Bufzij on February 19, 2026 12:52 am

      Illuminate your evenings with glowing jackpots and bonuses. In crowns coins casino, referral bonuses multiply the fun. Invite friends and amplify your rewards!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on May 3, 2023 51st Year Free Mass Marriage at Sri Kshetra Dharmasthala
    • LarryCax on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Yqeumx on ಶಾರ್ಪ್ ಶೂಟರ್ ಬಂಧನ.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.