ಬೆಂಗಳೂರು,ಸೆ.9-
ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಗಳು ಹಾಳಾದ ಹಿನ್ನೆಲೆಯಲ್ಲಿಬರಾಜ್ಯದ ಎಲ್ಲ ಹೆದ್ದಾರಿಗಳು ಹಾಗೂ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಗಳ ಉನ್ನತೀಕರಣಕ್ಕೆ ನೀಲಿ ನಕ್ಷೆ ಸಿದ್ಧಪಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯನ್ನು ತಪ್ಪಿಸುವ ಸಲುವಾಗಿ ಹೊಸ ಪ್ರಾಧಿಕಾರವನ್ನೇ ರಚಿಸಲು ನಿರ್ಧರಿಸಲಾಗಿದೆ.ಇದಕ್ಕಾಗಿ ಮುಂದಿನ ಅvವೇಶನದಲ್ಲಿ ಮಸೂದೆ ಮಂಡಿಸಿ ಜಾರಿಗೆ ತರಲಾಗುವುದು ಎಂದು ಹೇಳಿದರು.
ಈಗಾಗಲೇ ಬೆಂಗಳೂರು ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕೂಡ ನಿರ್ಧರಿಸಲಾಗಿದೆ. ಹಲವು ರಸ್ತೆಗಳ ನಿರ್ಮಾಣ ಕಾಮಗಾರಿ ಇನ್ನೂ ನಡೆಯುತ್ತಿದ್ದು, ಈ ವರ್ಷದಲ್ಲೇ ಎಲ್ಲವನ್ನೂ ಪೂರ್ಣಗೊಳಿಸುವ ಸಂಕಲ್ಪ ತೊಡಲಾಗಿದೆ ಎಂದರು.
ಬೆಂಗಳೂರು-ತುಮಕೂರು ಎಲಿವೇಟೆಡ್ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮುಂದಿನ ದಿನಗಳಲ್ಲಿ ಕೇಬಲ್ ದುರಸ್ತಿಪಡಿಸಿ ಎಲ್ಲ ವಾಹನಗಳು ಚಲಿಸುವಂತೆ ಮಾಡಲು ಯಾವ ಸಂಸ್ಥೆಗೆ ಕಾಮಗಾರಿ ಜವಾಬ್ದಾರಿ ನೀಡಬೇಕು ಎಂಬುದರ ಬಗ್ಗೆಯೂ ಕೂಡ ನಿರ್ಧರಿಸಲಾಗಿದೆ ಎಂದು ಹೇಳಿದರು.
ಕೇಂದ್ರವಹೆದ್ದಾರಿ ಖಾತೆ ರಾಜ್ಯ ಸಚಿವ ಜನರಲ್ ವಿ.ಕೆ.ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತಂತೆ ವಿಸ್ತೃತವಾಗಿ ಮಾಹಿತಿ ವಿನಿಮಯ ನಡೆದಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಅವರು ಮಾಹಿತಿ ನೀಡಿದರು.