Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ
    ರಾಜ್ಯ

    ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ

    vartha chakraBy vartha chakraMarch 18, 2023Updated:March 19, 2023923 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಭರ್ಜರಿ ರಂಗು ಬಂದಿದೆ.ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಜಿಲ್ಲೆಯಲ್ಲಿ ಚಳ್ಳಕೆರೆ ಹೊರತುಪಡಿಸಿ ಉಳಿದೆಲ್ಲಾ ಕಡೆ ಕಮಲ ಅರಳಿತ್ತು.
    ಮಧ್ಯ ಕರ್ನಾಟಕದ ಪ್ರಮುಖ ಜಿಲ್ಲೆಯ ಈ ಬದಲಾವಣೆ ರಾಜ್ಯದ 25 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪರಿಣಾಮ ಬೀರಿತ್ತು.
    ಪ್ರಮುಖವಾಗಿ ಕೋಟೆನಾಡಿಗೆ ಹೊಂದಿಕೊಂಡ ಮಧುಗಿರಿ, ಶಿರಾ,ಚಿಕ್ಕನಾಯಕನಹಳ್ಳಿ, ತುಮಕೂರು, ಚನ್ನಗಿರಿ, ಮಾಯಕೊಂಡ,ಪಾವಗಡ ಸೇರಿದಂತೆ 25 ಕ್ಷೇತ್ರಗಳಲ್ಲಿ ಯಾದವ ಸಮುದಾಯದ ಮತದಾರರು ನಿರ್ಣಾಯಕ ಪಾತ್ರವಹಿಸುತ್ತಾರೆ.
    ಬಹು ಕಾಲದಿಂದ ಈ ಸಮುದಾಯ ಕಾಂಗ್ರೆಸ್ ಮತ ಬ್ಯಾಂಕ್ ಆಗಿತ್ತು. ಅದಕ್ಕೆ ಪ್ರಮುಖ ಕಾರಣ ಈ ಸಮುದಾಯದ ಪ್ರಮುಖ ನಾಯಕ ವರ್ತೂರು ಕೃಷ್ಣಪ್ಪ ಸೇರಿದಂತೆ ಹಲವರು ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು.

    ಕಾಂಗ್ರೆಸ್ ನಿಂದ ಹೊರ ನಡೆದ ಅವರು ವಿಧಿವಶರಾದ ಬಳಿಕ ಅವರ ಮಗಳು ಪೂರ್ಣಿಮಾ ಶ್ರೀನಿವಾಸ್ ಈ ಸಮುದಾಯದ ಪ್ರಮುಖ ನಾಯಕರಾದರು.ಇವರಿಗೆ ಕಾಂಗ್ರೆಸ್ ವಿಧಾನಸಭೆ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಅವರು ಬಿಜೆಪಿ ಸೇರಿದ್ದರು ಇದರಿಂದ ಆ ಸಮುದಾಯ ಬಿಜೆಪಿಗೆ ಒಲಿದಿತ್ತು.
    ಈ ಬಗ್ಗೆ ಸಾಕಷ್ಟು ಮಾಹಿತಿಯಿರುವ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಈ ಸಮುದಾಯಕ್ಕೆ ಸೇರಿದ ಪೂರ್ಣಿಮಾ ಅವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳಲು ಪ್ರಯತ್ನ ನಡೆಸಿದ್ದಾರೆ ಅಲ್ಲದೆ ದಿವಂಗತ ಕೃಷ್ಣಪ್ಪ ಅವರೊಂದಿಗೆ ಖರ್ಗೆ ಉತ್ತಮ ಒಡನಾಟ ಹೊಂದಿದ್ದರು. ಖರ್ಗೆ ಅವರ ಆಪ್ತ ವಲಯದಲ್ಲಿ ಕೃಷ್ಣಪ್ಪ ಗುರುತಿಸಿಕೊಂಡಿದ್ದರು.
    ಈ ಹಿನ್ನೆಲೆಯಲ್ಲಿ ಕಳೆದ ಚುನಾವಣೆ ಸಮಯದಲ್ಲೇ ಖರ್ಗೆ ಪೂರ್ಣಿಮಾ ಅವರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದರು.ಆದರೆ ಈ ಪ್ರಕ್ರಿಯೆ ‌ಅಂತಿಮ ಹಂತ ತಲುಪುವ ಮುನ್ನವೇ ಅವರು ಬಿಜೆಪಿ ಸೇರಿದ್ದರು.
    ಇದೀಗ ಮತ್ತೆ ಖರ್ಗೆ ಅವರೇ ಈ ವಿಷಯವಾಗಿ ಹೆಚ್ಚು ಆಸಕ್ತಿವಹಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಪೂರ್ಣಿಮಾ ಮತ್ತು ಅವರ ಪತಿ ಶ್ರೀನಿವಾಸ್ ಜೊತೆ ಮಾತುಕತೆ ನಡೆಸಿದರು. ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸ್ಥಿತಿಯಲ್ಲಿ ಇಲ್ಲ.ಅಲ್ಲದೆ ಆ ಪಕ್ಷದಲ್ಲಿ ಪೂರ್ಣಿಮಾ ಅವರಿಗೆ ಉನ್ನತ ಸ್ಥಾನ ಸಿಗುವುದಿಲ್ಲ. ಅದರೆ ಕಾಂಗ್ರೆಸ್ ನಲ್ಲಿ ಹೀಗಾಗುವುದಿಲ್ಲ.ಇಲ್ಲಿ ಸಾಮಾಜಿಕ ನ್ಯಾಯಕ್ಕೆ ಹೆಚ್ಚಿನ ಮಾನ್ಯತೆ ಇದೆ ತಮ್ಮ ತಂದೆ ಕಾಂಗ್ರೆಸ್ ನಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದರು. ಅಲ್ಲದೆ ತಾವು ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ತಮಗೆ ಬಿಬಿಎಂಪಿ ಚುನಾವಣೆ ಸ್ಪರ್ಧಿಸಲು ಅವಕಾಶ ನೀಡಿ ಗೆಲ್ಲಿಸಲಾಗಿತ್ತು.ಕಾಂಗ್ರೆಸ್ ನಲ್ಲಿ ತಮಗೆ ಸಾಕಷ್ಟು ಗೌರವ ನೀಡಲಾಗಿತ್ತು ಎಂಬುದನ್ನು ಗಮನಕ್ಕೆ ತಂದರು ಎನ್ನಲಾಗಿದೆ.
    ಖರ್ಗೆ ಅವರ ಬಗ್ಗೆ ಮೊದಲಿನಿಂದಲೂ ಪೂರ್ಣಿಮಾ ಅವರಿಗೆ ಗೌರವದ ಭಾವನೆಯಿದ್ದು,ಅವರು ಪಕ್ಷ ಸೇರುವಂತೆ ಮಾಡಿದ ಸಲಹೆಗೆ ಆ ಕ್ಷಣವೇ ಸಮ್ಮತಿ ವ್ಯಕ್ತಪಡಿಸಿದರು ಎಂದು ಉನ್ನತ ಮೂಲಗಳು ತಿಳಿಸಿವೆ
    ಈ ನಡುವೆ ಚುನಾವಣೆಗೆ ಸ್ಪರ್ಧೆ ಮಾಡುವ ವಿಷಯವಾಗಿ ಪೂರ್ಣಿಮಾ ಅವರ ಕುಟುಂಬದಲ್ಲೂ ಗೊಂದಲ ಉಂಟಾಗಿತ್ತು. ಈ ಬಾರಿ ಪೂರ್ಣಿಮಾ ಅವರ ಬದಲಾಗಿ ಅವರ ಪತಿ ಶ್ರೀನಿವಾಸ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ದತೆ ನಡೆಸಿದ್ದರು ಇದು ಅವರ ಕುಟುಂಬದಲ್ಲಿ ಗೊಂದಲಕ್ಕೂ‌ ಕಾರಣವಾಗಿತ್ತು ಎನ್ನಲಾಗಿದೆ.
    ಈ ವಿಷಯವಾಗಿಯೂ‌ ಖರ್ಗೆ ಅವರೆ‌ ರಾಜಿ ಸಂಧಾನ ನಡೆಸಿದರು ಎನ್ನಲಾಗಿದೆ. ವಿಧಾನಸಭೆ ಚುನಾವಣೆಗೆ ಪೂರ್ಣಿಮಾ ಬದಲಾಗಿ ಶ್ರೀನಿವಾಸ್ ಸ್ಪರ್ಧೆ ಮಾಡಿದರೆ ಸಮುದಾಯದ ಮೇಲೆ ಅಂತಹ ಪರಿಣಾಮ ಬೀರುವುದಿಲ್ಲ ಎಂಬ ಸಮೀಕ್ಷಾ ವರದಿಗಳನ್ನು ಗಮನಕ್ಕೆ ತಂದ ಅವರು ಶ್ರೀನಿವಾಸ್ ಅವರಿಗೆ ವಿಮಾನ ಪರಿಷತ್ ಇಲ್ಲವೇ ಮುಂಬರುವ ಲೋಕಸಭಾ ಚುನಾವಣೆ ಯಲ್ಲಿ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿಯವಂತೆ ಸಲಹೆ ಮಾಡುವ ಮೂಲಕ ಗೊಂದಲ ಬಗೆಹರಿಸಿದರೆನ್ನಲಾಗಿದೆ.
    ಇದರೊಂದಿಗೆ ಇದೀಗ ಪೂರ್ಣಿಮಾ ಹಿರಿಯೂರು ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
    ಈ‌ ನಡುವೆ ಈ ಬೆಳವಣಿಗೆಗೆ ತೀವ್ರ ಆತಂಕ ವ್ಯಕ್ತಪಡಿಸಿ ಪಕ್ಷ ತೊರೆಯುವ ಬೆದರಿಕೆ ಹಾಕಿದ ಸೋಮಶೇಖರ್ ಅವರೊಂದಿಗೂ ಖರ್ಗೆ ಮಾತುಕತೆ ನಡೆಸಿ ಪೂರ್ಣಿಮಾ ಪರವಾಗಿ ಕೆಲಸ ಮಾಡಲು ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
    ಆದರೆ ಈ ಕ್ಷೇತ್ರದಿಂದ ಈ ಹಿಂದೆ ಆಯ್ಕೆಯಾಗಿದ್ದ ಮಾಜಿ ಸಚಿವ ಡಿ.ಸುಧಾಕರ್ ಪೂರ್ಣಿಮಾ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಜೆಡಿಎಸ್ ಸೇರಲು ಸಜ್ಜಾಗಿದ್ದರೆನ್ನಲಾಗಿದೆ.ಖರ್ಗೆ ಅವರ ಸೂಚನೆ ಮೇರೆಗೆ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಧಾನ ನಡೆಸಿದ್ದಾರೆ. ಡಿ.ಸುಧಾಕರ್ ಅವರು ಶಿವಕುಮಾರ್ ಅವರ ಆಪ್ತರಾಗಿದ್ದು ಅವರೊಂದಿಗೆ ಮಾತನಾಡಿದ ಶಿವಕುಮಾರ್ ಹಿರಿಯೂರು ಕ್ಷೇತ್ರದಿಂದ ಮಾಜಿ ಸಚಿವ ರೇವಣ್ಣ ಅವರ ಆಪ್ತ ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರಪ್ಪ ಜೆಡಿಎಸ್ ಅಭ್ಯರ್ಥಿ ಈಗಾಗಲೇ ಈ ವಿಷಯ ಅಂತಿಮಗೊಂಡಿದೆ.ಇದನ್ನು ಅರ್ಥ ಮಾಡಿಕೊಂಡು ಕಾಂಗ್ರೆಸ್ ನಲ್ಲಿ ‌ಮುಂದುವರೆಯುವುದು ಸೂಕ್ತ ವಿಧಾನಸಭೆ ಚುನಾವಣೆಗೆ ತಾವು ಸ್ಪರ್ಧಿಸಲೇ ಬೇಕು ಎನ್ನುವಂತಿದ್ದರೆ, ನೆರೆಯ ಚಿತ್ರದುರ್ಗ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂದು ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
    ಡಿ.ಸುಧಾಕರ್ ಪಕ್ಷದ ಅಧ್ಯಕ್ಷ ಶಿವಕುಮಾರ್ ಮಾಡಿದ ಸಲಹೆಗೆ ಬಹುತೇಕ ಸಮ್ಮತಿಸಿದ್ದಾರೆ ಎನ್ನಲಾಗಿದೆ ಆದರೂ ಈ ವಿಷಯವಾಗಿ ತಮ್ಮ ಬೆಂಬಲಿಗರು ಮತ್ತು ಆಪ್ತರೊಂದಿಗೆ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    #chitradurga Hiriyur poornima ಕಾಂಗ್ರೆಸ್ Election ತುಮಕೂರು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge
    Next Article ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • моды к играм на андроид on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • RichardLorum on ಯಡಿಯೂರಪ್ಪ ವಿಚಾರಣೆಗೆ ಬಂದರೆ ಸರಿ,ಇಲ್ಲವಾದರೆ..?
    • RicardoCor on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.