ಲಕ್ನೋ(ಉತ್ತರಪ್ರದೇಶ),ಆ.7-ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿ, ಅದನ್ನು ವೀಡಿಯೋ ಮಾಡಿರುವ ಹೀನ ಕೃತ್ಯ ಮಥುರಾದಲ್ಲಿ ನಡೆದಿದೆ.
ಮಹಿಳೆಯೊಬ್ಬಳು ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ತುಂಬಲು ಸಾರ್ವಜನಿಕ ಸೇವಾ ಕೇಂದ್ರಕ್ಕೆ ಹೋಗುತ್ತಿದ್ದಾಗ ಕೇಂದ್ರದ ನಿರ್ವಾಹಕರು, ಕಂಪ್ಯೂಟರ್ ಆಪರೇಟರ್, ಅಂಗಡಿ ಮಾಲೀಕರು ಹಾಗು ಮತ್ತೊಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರ ಮಾಡಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವೀಡಿಯೋವನ್ನು ಮಾಡಿಕೊಂಡಿದ್ದು, ಆರೋಪಿಗಳಲ್ಲಿ ಒಬ್ಬಾತ ಆ ವೀಡಿಯೋವನ್ನು ಆಕೆಯ ಅತ್ತೆಗೆ ಕಳುಹಿಸಿದ್ದಾನೆ. ಆಗ ಈ ವಿಷಯ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆ ಸಂಬಂಧಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ನಾಲ್ವರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ತನಿಖೆ ವೇಳೆ ಘಟನೆಯಲ್ಲಿ ಭಾಗಿಯಾಗಿದ್ದ ಆರೋಪಿಗಳೆಲ್ಲರೂ ಮಹಿಳೆಯ ಪೋಷಕರು ವಾಸಿಸುತ್ತಿದ್ದ ಅಲಿಗಢ ಜಿಲ್ಲೆಗೆ ಸೇರಿದ ಹಳ್ಳಿಯವರಾಗಿದ್ದು, ಮಹಿಳೆ ಹಾಗು ಆರೋಪಿಗಳು ಒಟ್ಟಿಗೆ ಓದಿದ್ದರು ಎಂಬುದು ಬೆಳಕಿಗೆ ಬಂದಿದೆ.
Previous Articleನನ್ನ ಹೆಂಡತಿಗೆ ಶುಚಿತ್ವದ ಕೊರತೆ ಇದೆ ಎಂದ ರಿಷಿ ಸುನಾಕ್
Next Article ಕಾರು ಡಿಕ್ಕಿ ಮೂವರು ದಾರುಣ ಸಾವು