Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Invest Karnataka Forumಗೆ ಸಜ್ಜನ್ ಜಿಂದಾಲ್ ನೇತೃತ್ವ
    Bengaluru

    Invest Karnataka Forumಗೆ ಸಜ್ಜನ್ ಜಿಂದಾಲ್ ನೇತೃತ್ವ

    vartha chakraBy vartha chakraOctober 17, 20234 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.17- ರಾಜ್ಯಕ್ಕೆ ಹೆಚ್ಚು ಬಂಡವಾಳ ಆಕರ್ಷಿಸುವ ಮತ್ತು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಮಾರುಕಟ್ಟೆ ದೃಷ್ಟಿಯಿಂದ ಸದೃಢವಾಗಿ ಪ್ರತಿಷ್ಠಾಪಿಸುವ ಗುರಿಯೊಂದಿಗೆ ಕೈಗಾರಿಕಾ ಇಲಾಖೆಯು ಖ್ಯಾತ ಉದ್ಯಮಿ ಸಜ್ಜನ್ ಜಿಂದಾಲ್ ನೇತೃತ್ವದಲ್ಲಿ `ಇನ್ವೆಸ್ಟ್ ಕರ್ನಾಟಕ ಫೋರಂ’ (ಐಕೆಎಫ್) ಅನ್ನು (Invest Karnataka Forum) ಪುನಾರಚಿಸಿದೆ.

    ಐಕೆಎಫ್ (Invest Karnataka Forum) ಪುನಾರಚನೆಗೆ ಸಂಬಂಧಿಸಿದಂತೆ ಅ.13ರಂದು ಆದೇಶ ಹೊರಡಿಸಲಾಗಿದೆ. ಜಿಂದಾಲ್ ಸ್ಟೀಲ್ ವರ್ಕ್ಸ್ ಉದ್ಯಮದ ಮಾಲೀಕರಾಗಿರುವ ಜಿಂದಾಲ್ ಅವರನ್ನು ಉಕ್ಕು ವಲಯದಿಂದ ಆಯ್ಕೆ ಮಾಡಲಾಗಿದ್ದು, ಇವರು ಫೋರಂನ ನಿರ್ದೇಶಕ ಮತ್ತು ಕೋ-ಚೇರ್ ಪರ್ಸನ್ ಆಗಿ ಕೆಲಸ ಮಾಡಲಿದ್ದಾರೆ ಎಂದು ಐಕೆಎಫ್ ಅಧ್ಯಕ್ಷರೂ ಆದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
    ಉಳಿದಂತೆ,ಆಟೋಮೊಬೈಲ್ ಕ್ಷೇತ್ರದಿಂದ ಕಿರ್ಲೋಸ್ಕರ್ ಸಿಸ್ಟಮ್ಸ್ ನ ಅಧ್ಯಕ್ಷೆ ಗೀತಾಂಜಲಿ ಕಿರ್ಲೋಸ್ಕರ್, ಏರೋಸ್ಪೇಸ್ ಮತ್ತು ರಕ್ಷಣಾ ವಲಯದಿಂದ ಏಕಸ್ ಇಂಕ್ ಸಮೂಹದ ಅಧ್ಯಕ್ಷ ಅರವಿಂದ್ ಮೆಳ್ಳಿಗೇರಿ, ಉತ್ಪಾದನಾ ಸೇವೆಗಳ ವಲಯದಿಂದ ಜೆಟ್ವರ್ಕ್ಸ್ ಕಂಪನಿಯ ಸಹಸಂಸ್ಥಾಪಕ ಅಂಕಿತ್ ಫತೇಪುರಿಯಾ ಮತ್ತು ಮಶೀನ್ ಟೂಲ್ಸ್ ವಲಯದಿಂದ ಕೆನ್ನಮೆಟಲ್ ವ್ಯವಸ್ಥಾಪಕ ನಿರ್ದೇಶಕ ವಿಜಯಕೃಷ್ಣನ್ ವೆಂಕಟೇಶನ್ ಅವರನ್ನು ಇನ್ವೆಸ್ಟ್ ಕರ್ನಾಟಕ ಫೋರಂನ ನಿರ್ದೇಶಕರುಗಳನ್ನಾಗಿ ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಇದರ ಜತೆಯಲ್ಲೇ ಇನ್ವೆಸ್ಟ್ ಕರ್ನಾಟಕ ಫೋರಂ ಅಡಿಯಲ್ಲಿ ಹೂಡಿಕೆ ಆಕರ್ಷಣೆಗೆ ಅಗತ್ಯ ಮಾರ್ಗದರ್ಶನ ನೀಡುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಕಾರ್ಯತಂತ್ರ ಹೂಡಿಕೆ ಸಮಿತಿಯನ್ನು (Strategic Investment Committee- ಎಸ್ಐಸಿ) ಕೂಡ ರಚಿಸಲಾಗಿದೆ. ಇದಕ್ಕೆ ನಾನಾ ಉದ್ಯಮ ವಲಯಗಳಿಂದ ಎಂಟು ಖ್ಯಾತನಾಮರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
    ತಾವು ಅಧ್ಯಕ್ಷರಾಗಿರುವ ಈ ಸಮಿತಿಗೆ ಸರಕಾರವು ಮೆಸರ್ಸ್ ಎಎಂಡಿ ಇಂಕ್ ನಿರ್ದೇಶಕ ಮೃತ್ಯುಂಜಯ ಹಿರೇಮಠ, ಸಿಬಿಆರ್ ಇ ಸೌತ್ ಏಷ್ಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಮ್ ಟಿ ಚಂದನಾನಿ, ಆ್ಯಕ್ಸೆಲ್ ಪಾರ್ಟನರ್ಸ್ ಸಂಸ್ಥೆಯ ಪ್ರಶಾಂತ್ ಪ್ರಕಾಶ್, ಜೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್, ಪೆಪ್ಪರ್ ಗ್ಲೋಬಲ್ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ನಿರ್ದೇಶಕ ರವಿ ಮಾನಚಂದ್, ಮೆರಿಕಾ ಗ್ರೂಪ್ ನ ಹೂಡಿಕೆ ನಿರ್ದೇಶಕ ಅಶ್ವಿನ್ ಕೃಷ್ಣಸ್ವಾಮಿ, ಕ್ಯಾಪಿಟಾಲ್ಯಾಂಡ್ ಸಿಇಒ ಗೌರೀಶಂಕರ್ ನಾಗಭೂಷಣಂ ಮತ್ತು ಖ್ಯಾತ ಉದ್ಯಮಿ ಕಾಸರಗೋಡು ಉಲ್ಲಾಸ್ ಕಾರಂತ್ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

    ಈ ಸಮಿತಿಯು ಅಮೆರಿಕ, ಜರ್ಮನಿ, ಫ್ರಾನ್ಸ್, ನೆದರ್ಲೆಂಡ್ಸ್, ಜಪಾನ್, ದಕ್ಷಿಣ ಕೊರಿಯಾ ಮತ್ತು ತೈವಾನ್ ದೇಶದ ಕಂಪನಿಗಳೊಂದಿಗೆ ವ್ಯವಹರಿಸಲಿದ್ದು, ಹೆಚ್ಚಿನ ಹೂಡಿಕೆಯನ್ನು ಸೆಳೆಯಲು ಶ್ರಮಿಸಲಿದೆ. ಇದರ ಜತೆಗೆ ಸುಗಮ ವಾಣಿಜ್ಯ ಸಂಸ್ಕೃತಿಯನ್ನು ರೂಢಿಸಲು ನೆರವು ನೀಡಲಿದೆ ಎಂದು ಹೇಳಿದ್ದಾರೆ.
    ಈ ಸಮಿತಿಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಕೂಡ ಸದಸ್ಯರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    Verbattle
    Verbattle
    Verbattle
    Congress Government Invest Karnataka Forum Investment Karnataka m mi News Politics Varthachakra ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ | Green Crackers
    Next Article IED Trail Blast ಬೆನ್ನು ಹತ್ತಿದ NIA
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Scyocv on ಕುಡಿದು ಮಾಡಿದ ರಂಪಾಟ.
    • LinwoodGah on ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Scyocv on ಕುಡಿದು ಮಾಡಿದ ರಂಪಾಟ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.