Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನರೇಂದ್ರ ಮೋದಿ ವೀಕ್ ಪಿಎಂ? | Narendra Modi
    Trending

    ನರೇಂದ್ರ ಮೋದಿ ವೀಕ್ ಪಿಎಂ? | Narendra Modi

    vartha chakraBy vartha chakraMarch 19, 202428 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.19- ಪ್ರಧಾನಿ ಮೋದಿಯವರೇ (Narendra Modi) ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು  ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘ವೀಕ್ ಪಿಎಂ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
    ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಹಾಲಿ ಸಿಎಂ ಸೂಪರ್ ಸಿಎಂ ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅವರು ನರೇಂದ್ರ ಮೋದಿ ಒಬ್ಬ ವೀಕ್ ಪಿಎಂ ಎಂದು ಟೀಕಿಸಿದ್ದಾರೆ.

    ನೀವು ಅತ್ಯಂತ ದುರ್ಬಲ ಪ್ರಧಾನಿ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ. ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘ವೀಕ್ ಪಿಎಂ’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ? ಎಂದು ಟೀಕೆ ಮಾಡಿದ್ದಾರೆ.
    ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ಬಿಜೆಪಿ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ ನರೇಂದ್ರ ಮೋದಿ? ಎಂದು ಪ್ರಶ್ನೆ ಮಾಡಿದ್ದಾರೆ.

    ನಮ್ಮಲ್ಲಿ ಶ್ಯಾಡೋ, ಸೂಪರ್ ಸಿಎಂ ಯಾರೂ ಇಲ್ಲ. ನಿಮ್ಮನ್ನು ಯಡಿಯೂರಪ್ಪ ಟೀಕೆ ಮಾಡಿದರೂ ಅವರ ಕಾಲಿಗೆ ಬಿದ್ದು ಪಕ್ಷಕ್ಕೆ ಕರೆದುಕೊಂಡ ನೀವೇ ವೀಕ್ ಪಿಎಂ ಎಂದು ಟೀಕೆ ಮಾಡಿದ್ದಾರೆ.
    ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ಬಿಜೆಪಿ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ ನರೇಂದ್ರ ಮೋದಿ? ಎಂದು ಪ್ರಶ್ನೆ ಮಾಡಿದ್ದಾರೆ.

    ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಕರ್ನಾಟಕ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ  ಕ್ರಮಕೈಗೊಳ್ಳಲಾಗದ ನೀವು ‘ವೀಕ್ ಪಿಎಂ’ ಅಲ್ಲದೆ ಮತ್ತೇನು? ಎಂದು ಪ್ರಶ್ನಿಸಿದ್ದಾರೆ.
    ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಬಿಜೆಪಿ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ… ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ ನರೇಂದ್ರ ಮೋದಿ ಅವರೇ? ಎಂದು ಹೇಳಿದ್ದಾರೆ.

    Verbattle
    Verbattle
    Verbattle
    Government Karnataka m modi narendra modi News ಈಶ್ವರಪ್ಪ ಕಾರು ನರೇಂದ್ರ ಮೋದಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ ಮತ್ತೆ ಪ್ರಧಾನಿ ಆದ್ರೆ ಇವೆಲ್ಲಾ ಮಾಡಬೇಕಂತೆ | Modi
    Next Article ತಪ್ಪು ಗ್ರಹಿಕೆಯಿಂದ ನೂರಾರು ಕೋಟಿ ನಷ್ಟ | Bengaluru
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelAffew on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • 777bet_xtpr on ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • StevenCaf on ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.