ಬೆಂಗಳೂರು, ಡಿ.24- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ದ ಇದೀಗ ಮತ್ತೊಂದು ಆರೋಪ ಕೇಳಿಬಂದಿದೆ.ಸಂಸದರ ಸೋದರ ವಿಕ್ರಮ್ ಸಿಂಹ ಅಕ್ರಮವಾಗಿ ಅರಣ್ಯದಲ್ಲಿ ಮರ ಕಡಿದು ಸಾಗಿಸಿದ ಆರೋಪ ಎದುರಿಸುತ್ತಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮರಗಳ್ಳತನ ನಡೆಯುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತಹಸೀಲ್ದಾರ್ ಮಮತಾ ಅವರು ದಿಢೀರ್ ದಾಳಿ ನಡೆಸಿದ್ದರು.
ಈ ವೇಳೆ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸುಇ ಇಲ್ಲಿನ ಈ ಪ್ರಕರಣ ಬೆಳಕಿಗೆ ಬಂದಿತ್ತು.
ಇದನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಉಲ್ಲೇಖಿಸಿರುವ ಕಾಂಗ್ರೆಸ್ ಸಂಸದ ಪ್ರತಾಪ್ ಸಿಂಹ ಅವರು ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಮರಗಳ್ಳತನದಲ್ಲಿ ತೊಡಗಿದ್ದಾನೆ ಎಂದು ಹೇಳಿದೆ.
ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುದ್ದಾರೆ. ಇಲ್ಲಿನ ತಹಸೀಲ್ದಾರ್ ಮಮತಾ ಅವರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದೆ.
ಈ ಪ್ರಕರಣದಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಘಟನೆ ಬಗ್ಗೆ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದೆ.
ಬಿಜೆಪಿಯ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ? ಎಂದು ಪ್ರಶ್ನಿಸಿದೆ.