Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    ಚುನಾವಣೆ 2024

    ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil

    vartha chakraBy vartha chakraMarch 27, 2024Updated:March 28, 2024591 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಕ್ಕರೆ ಸಚಿವರಾಗಿ ಕೆಲಸ ಮಾಡುತ್ತಿರುವ ಶಿವಾನಂದ ಪಾಟೀಲ್ ಹಲವಾರು ಕಾರಣಗಳಿಗಾಗಿ ರಾಜ್ಯದ ರಾಜಕೀಯ ಆಸಕ್ತರ ಗಮನಸೆಳೆಯುತ್ತಾರೆ.
    ಇದರಲ್ಲಿ ಮೊದಲನೇಯ ಕಾರಣ ಅವರ ಸಹಕಾರ ಚಳುವಳಿ ಎರಡನೆಯ ಹಾಗೂ ಅತಿ ಮುಖ್ಯ ಕಾರಣ ಒಳಸಂಚು ಮತ್ತು ರಂಗೋಲಿ ಕೆಳಗೆ ನುಸುಳುವ ರಾಜಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.
    ದ್ರಾಕ್ಷಿ ನಾಡು ಬಿಜಾಪುರ ಸಹಕಾರ ಚಳುವಳಿಗೆ ಹೆಸರುವಾಸಿಯಾದ ಜಿಲ್ಲೆ ಇಂತಹ ಜಿಲ್ಲೆಯ ಸಹಕಾರ ಚಳುವಳಿಯ ಮೂಲಕವೇ ರಾಜಕಾರಣಕ್ಕೆ ಬಂದ ಶಿವಾನಂದ ಪಾಟೀಲ್ ,ಬಿ ಎಲ್ ಡಿ ಶಿಕ್ಷಣ ಸಂಸ್ಥೆಯ ಎಂ ಬಿ ಪಾಟೀಲ್ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಮೊದಲಾದವರನ್ನು ವಿರೋಧಿಸುತ್ತಲೇ ರಾಜಕೀಯವಾಗಿ ನೆಲೆ ಕಂಡುಕೊಂಡವರು.
    ಜನತಾ ಪರಿವಾರದ ಮೂಲಕ ರಾಜಕಾರಣಕ್ಕೆ ಬಂದ ಅವರು ಮುಂದಿನ ಪ್ರಭಾವಿ ನಾಯಕ ರಾಮಕೃಷ್ಣ ಹೆಗಡೆಯವರ ಗರಡಿಯಲ್ಲಿ ಪಳಗಿ ಅವರ ಜೊತೆಗೆ ಗುರುತಿಸಿಕೊಂಡಿದ್ದ ರಮೇಶ್ ಜಿಗಜಿಣಗಿ ಎಂಬಿ ಪಾಟೀಲ್ ಅಪ್ಪು ಪಟ್ಟಣಶೆಟ್ಟಿ ಮೊದಲಾದವರನ್ನು ವಿರೋಧಿಸುತ್ತಾ ತಿಕೋಟಾ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸು ಬೆಳೆಸಿಕೊಂಡರು.

    ಬದಲಾದ ಕಾಲಮಾನದಲ್ಲಿ ಬಿಜೆಪಿ ಸೇರಿ ಶಾಸಕರಾದ ಅವರು ಅಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯ ವಿರುದ್ಧ ಮತ ಚಲಾಯಿಸುವ ಮೂಲಕ ತಾವು ಎಂತಹ ರಾಜಕಾರಣಿ ಎಂಬುದನ್ನ ನಾಡಿಗೆ ಪರಿಚಯ ಮಾಡಿಕೊಟ್ಟರು. ಇವರು ಅಂದು ತೋರಿದ ರಾಜಕೀಯ ಜಾಣ್ಮೆ ಅಥವಾ ಒಳಸಂಚಿನ ಪರಿಣಾಮ ಸುಲಭವಾಗಿ ಗೆಲ್ಲಬಹುದಾಗಿದ್ದ ಬಿಜೆಪಿ ಅಭ್ಯರ್ಥಿ ಸೋಲು ಅನುಭವಿಸಬೇಕಾಯಿತು‌ ಎಂಬ ಆರೋಪವಿದೆ. ಇದರಿಂದ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿ ಕಾಂಗ್ರೆಸ್ ಸೇರಿ ಕ್ಷೇತ್ರದ ಹುಡುಕಾಟದಲ್ಲಿ ತೊಡಗಿದರು.
    ಇಂತಹ ಒಳ ಸಂಚಿನ ರಾಜಕಾರಣಿಗೆ ಅದೃಷ್ಟವೂ ಒಲಿದು ಬಂದಿತ್ತು ಎಂದು ಹೇಳಲಾಗುತ್ತದೆ. ಕಾಂಗ್ರೆಸ್ ಸೇರಿ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಿದವರಿಗೆ ಅಂದು ನಡೆದ ಕ್ಷೇತ್ರ ಪುನರ್ ವಿಂಗಡಣೆ ವರದಾನವಾಯಿತು. ತಿಕೋಟ ವಿಧಾನಸಭಾ ಕ್ಷೇತ್ರದ ಕೆಲ ಪ್ರದೇಶಗಳನ್ನೊಳಗೊಂಡ ಬಸವನ ಬಾಗೇವಾಡಿ ಕ್ಷೇತ್ರಕ್ಕೆ ಬಂದಿತು. ಅಲ್ಲಿಂದ ಹೊಸದಾಗಿ ರಾಜಕಾರಣ ಆರಂಭಿಸಿದ ಶಿವಾನಂದ ಪಾಟೀಲ್ ವಿಜಾಪುರ ಜಿಲ್ಲೆಯಲ್ಲಿ ತಮ್ಮದೇ ಆದ ಪಡೆ ಕಟ್ಟಿಕೊಂಡರು ಕಳೆದ ಲೋಕಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಇವರನ್ನು ಬಾಗಲಕೋಟೆಯ ಉಸ್ತುವಾರಿ ಯನ್ನಾಗಿ ನೇಮಿಸಿತು. ಅದನ್ನೇ ಚಿಮ್ಮುಹಲಗೆಯಾಗಿ ಮಾಡಿಕೊಂಡ ಶಿವಾನಂದ ಪಾಟೀಲ್ ಬಾಗಲಕೋಟೆ ಜಿಲ್ಲಾ ಸಹಕಾರ ಬ್ಯಾಂಕಿಗೆ ತಮ್ಮ ಪುತ್ರಿ ಸಂಯುಕ್ತ ಪಾಟೀಲ್ ಅವರನ್ನು ನಿರ್ದೇಶಕಿಯಾಗಿ ಆಯ್ಕೆಯಾಗುವಂತೆ ನೋಡಿಕೊಂಡರು. ಅಂದಿನಿಂದ ತಮ್ಮ ಪುತ್ರಿ ಸಂಯುಕ್ತ ಪಾಟೀಲ್ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗುವಂತೆ ಮಾಡುವಲ್ಲಿ ಯಶಸ್ವಿಯಾದರು.ನಂತರ ಕಾಂಗ್ರೆಸ್‌ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆದ ಸಂಯುಕ್ತಾ ಪಾಟೀಲ್ ಅವರನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಮಾಡುವ ಲೆಕ್ಕಾಚಾರ ಹಾಕಿದರು.

    ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ಅಜಯ್ ಕುಮಾರ್ ಸರ್ ನಾಯಕ್, ಆನಂದ ನ್ಯಾಮಗೌಡ, ವೀಣಾ ಕಾಶಪ್ಪನವರ್ ಪ್ರಯತ್ನ ನಡೆಸುತ್ತಿರುವಾಗಲೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಂಜಯ್ಯನ ಮಠ ಹಾಗೂ ಇತರೆ ಮುಖಂಡರ ವಿಶ್ವಾಸ ಗಿಟ್ಟಿಸಿದರು. ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಹೊರತಪಡಿಸಿ ಉಳಿದ ಎಲ್ಲಾ ಕಾಂಗ್ರೆಸ್ ಶಾಸಕರನ್ನು ತಮ್ಮ ಪರವಾಗಿರುವಂತೆ ನೋಡಿಕೊಂಡ ಅವರು ಅಭ್ಯರ್ಥಿ ಆಯ್ಕೆಗಾಗಿ ಅಭಿಪ್ರಾಯ ಆಲಿಸಲು ಬಂದ ಸಚಿವ ಪ್ರಿಯಾಂಕ ಖರ್ಗೆ ನೇತೃತ್ವದ ತಂಡಕ್ಕೆ ಎಲ್ಲ ಶಾಸಕರು ಮತ್ತು ಮುಖಂಡರು ಸಂಯುಕ್ತ ಪಾಟೀಲ್ ಅವರ ಹೆಸರನ್ನು ಮಾತ್ರ ಹೇಳುವಂತೆ ನೋಡಿಕೊಂಡರು ಎಂದು ಆರೋಪಿಸಲಾಗಿದೆ.
    ಹೀಗಾಗಿ ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ ಎಲ್ಲಾ ನಾಯಕರು ಬಿಟ್ಟು ನೆರೆಯ ಜಿಲ್ಲೆಯ ಯಾವುದೇ ಅರ್ಜಿ ಸಲ್ಲಿಸದ ಸಂಯುಕ್ತ ಪಾಟೀಲ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದೆ.
    ಇಲ್ಲಿ ಶಿವಾನಂದ ಪಾಟೀಲ್ ಅವರ ಸಂಚಿನ ರಾಜಕಾರಣ ಅತ್ಯಂತ ಯಶಸ್ವಿಯಾಗಿ ಕೆಲಸ ಮಾಡಿದೆ ಎಂಬ ಆರೋಪ ಕೇಳಿಬಂದಿದೆ .ಆದರೆ ಚುನಾವಣೆಯಲ್ಲಿ ಸಂಯುಕ್ತ ಪಾಟೀಲ್ ಯಶಸ್ವಿಯಾಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ಯಾಕೆಂದರೆ ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಸಂಯುಕ್ತಾ ಪಾಟೀಲ ಕ್ಷೇತ್ರಕ್ಕೇ ಹೊಸಬರು. ನಾಲ್ಕಾರು ವೇದಿಕೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು ಬಿಟ್ಟರೆ, ಕ್ಷೇತ್ರದ ಪರಿಚಯ ಕಡಿಮೆ. ಸಂಯುಕ್ತಾ ಅವರ ತಂದೆ ಶಿವಾನಂದ ಪಾಟೀಲ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದರು. ಆ ಅನುಭವದ ಆಧಾರದ ಮೇಲೆಯೇ ಪುತ್ರಿಯನ್ನು ಕಣಕ್ಕಿಳಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎನ್ನುವುದು ಕುತೂಹಲದ ಪ್ರಶ್ನೆ

    Verbattle
    Verbattle
    Verbattle
    Government Karnataka News Politics shiva ಕಾಂಗ್ರೆಸ್ ಕಾರು Election ರಾಜಕೀಯ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅದಾನಿ ಬಿಜೆಪಿ ಟಿಕೆಟ್ ಕೊಡಿಸಿದ್ದು ಯಾರಿಗೆ ಗೊತ್ತಾ | Adani
    Next Article ಬಿಜೆಪಿ ಭಿನ್ನಮತ ಬೂದಿ ಮುಚ್ಚಿದ ಕೆಂಡ | BJP
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • dxrqzrz on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • DavidTep on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.