ಚಿಕ್ಕಮಗಳೂರು,ನ.17-ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಇಂದು ಆದಾಯ ತೆರಿಗೆ(ಐಟಿ) ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ
ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ ಮುಂಜಾನೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಬಂದ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳು ಬಂದಿರುವ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಮದುವೆ ಬೋರ್ಡ್ ಇದೆ. ಯಾರಿಗೂ ಅನುಮಾನ ಬಾರದಿರಲೆಂದು ಅಭಿನವ್ ವೆಡ್ಸ್ ದೀಪಿಕಾ ಎಂಬ ಪೋಸ್ಟರ್ ಅಂಟಿಸಿಕೊಂಡಿರುವ ವಾಹನಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದಾರೆ.
ಗಾಯತ್ರಿ ಅವರ ಪತಿ ಶಾಂತೇಗೌಡರು ಗುತ್ತಿಗೆದಾರರು. ಕಳಸಾಪುರ ರಸ್ತೆಯಲ್ಲಿರುವ ಅವರ ಮಾಲೀಕತ್ವದ ಕ್ರಷರ್ ಮೇಲೆಯೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ.
ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಅಳಿಯ ಸಂತೋಷ್ ಅವರ ಮನೆಯ ಮೇಲೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಬೇಲೂರು ಪಟ್ಟಣದ ಚನ್ನಕೇಶವಗೌಡರು ಬೀದಿಯಲ್ಲಿರು ಸಂತೋಷ್ ಅವರ ಮನೆಯಿದೆ.
ಸಂತೋಷ್ ಅವರಿಗೆ ಸೇರಿದ ಮನೆ, ಕಲ್ಯಾಣ ಮಂಟಪದಲ್ಲಿಯೂ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
Previous Articleಸೂಪ್‍ನಲ್ಲಿ ಅನ್ನ ಕಂಡಿದ್ದಕ್ಕೆ ಹೀಗಾ ಮಾಡೋದು!
Next Article ಹೀಗೆ ಸಿಕ್ಕಿಬಿದ್ದ ನೋಡಿ