ಟೋಕಿಯೋ: ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಇನ್ನಿಲ್ಲ. ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ನಾರಾ ಎಂಬಲ್ಲಿ ಅವರ ಮೇಲೆ ಗುಂಡು ಹಾರಿಸಲಾಗಿತ್ತು.
ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಫಲಕಾರಿಯಾಗಲಿಲ್ಲ. ಜಪಾನ್ ನಲ್ಲಿ ಅತೀ ಹೆಚ್ಚಿನ ಅವಧಿಗೆ ಆಡಳಿತ ನಡೆಸಿದ ಕೀರ್ತಿ ಅಬೆ ಅವರದ್ದಾಗಿದೆ.
ಇದೀಗ ಜಪಾನ್ ಸರ್ಕಾರ ಅಬೆ ಮೃತಪಟ್ಟಿರುವುದನ್ನು ಅಧಿಕೃತವಾಗಿ ಘೋಷಿಸಿದೆ.