Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS
    Bengaluru

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    vartha chakraBy vartha chakraSeptember 22, 20234 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಸೆ 22: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕೆಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಗಳಿಗೆ ಇದೀಗ ತೆರೆ ಬಿದ್ದಿದೆ.
    ಉಭಯ ಪಕ್ಷಗಳ ನಾಯಕರು ದೆಹಲಿಯಲ್ಲಿ ಮಾತುಕತೆ ನಡೆಸಿದರು. ಇದರ ಬಳಿಕ ಕರ್ನಾಟಕದ ಜಾತ್ಯತೀತ ಜನತಾದಳ ‌ಎನ್.ಡಿ‌.ಎ.ಮೈತ್ರಿ ಕೂಟದ ಭಾಗವಾಗಿರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಧಿಕೃತವಾಗಿ ಘೋಷಿಸಿದರು.
    ದೆಹಲಿಯಲ್ಲಿ ಬಿಜೆಪಿ ಹಿರಿಯ‌ ನಾಯಕ ಅಮಿತ್ ಶಾ,ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ .ಕುಮಾರಸ್ವಾಮಿ, ತಮ್ಮ ನಿಲುವನ್ನು ಅಧಿಕೃತವಾಗಿ ತಿಳಿಸಿದರು. ಈ ವೇಳೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಎಚ್ಡಿಕೆ ಪುತ್ರ ನಿಖಿಲ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

    ಇದಾದ ನಂತರ ಪ್ರತಿಕ್ರಿಯಿಸಿದ ಜೆ.ಪಿ.ನಡ್ಡಾ ಅವರು, ಜೆಡಿಎಸ್ (JDS) ನಾಯಕ ಕುಮಾರಸ್ವಾಮಿ ಅವರನ್ನು ನಾನು ಹಾಗೂ ಅಮಿತ್ ಷಾ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಎನ್ಡಿಎ ಮೈತ್ರಿಕೂಟದ ಭಾಗವಾಗಿರಲು ಜೆಡಿಎಸ್ ನಿರ್ಧರಿಸಿರುವುದು ನಮಗೆ ಸಂತೋಷದ ವಿಷಯವಾಗಿದೆ. ಇದು ಎನ್ಡಿಎ ಹಾಗೂ ಪ್ರಧಾನಿ ಮೋದಿ ಅವರ ದೂರದೃಷ್ಟಿಯನ್ನು ಬಲಗೊಳಿಸಲು ನೆರವಾಗಲಿದೆ ಎಂದು ತಿಳಿಸಿದರು.
    ಕುಮಾರಸ್ವಾಮಿ ಮಾತನಾಡಿ, ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, JDS ಗೆಲ್ಲುವುದೇ ನಮ್ಮ ಗುರಿ. ಬಿಜೆಪಿ, ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಂದೆ ಯಾವುದೇ ರೀತಿಯಲ್ಲೂ ಗೊಂದಲ ಇಲ್ಲದೆ ಮೈತ್ರಿ ನಡೆಯುತ್ತೆ. ಮೈತ್ರಿ ಸಂಬಂಧ ಚರ್ಚಿಸಲೆಂದೇ ಇಂದು ಬಿಜೆಪಿ ನಾಯಕರ ಭೇಟಿ ಮಾಡಿದ್ದೇವೆ ಎಂದು ಹೇಳಿದರು.
    ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ.ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಅದಕ್ಕಾಗಿ ನಾವಿಬ್ಬರೂ ಒಟ್ಟಾಗಿ ದುಡಿಯುತ್ತೇವೆ ಎಂದು ತಿಳಿಸಿದರು.

     

    ಸ್ವಾಗತ:
    ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ‌ಇದೊಂದು ಸ್ವಾಗತಾರ್ಹ ಬೆಳವಣಿಗೆ ಎರಡೂ ಪಕ್ಷಗಳ ಮೈತ್ರಿ ರಾಜ್ಯದಲ್ಲಿ ಹೊಸ ಅಧ್ಯಾಯ ಸೃಷ್ಟಿಸಲಿದೆ ಎಂದು ಹೇಳಿದ್ದಾರೆ.
    ಎನ್.ಡಿ.ಎ.ಮೈತ್ರಿ ಕೂಟದ ಭಾಗವಾಗಿ ಜೆಡಿ ಎಸ್ ಸೇರ್ಪಡೆ ಯಾಗಿರುವದರಿಂದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಮಾಡುವ ಸಂಕಲ್ಪಕ್ಕೆ ದೊಡ್ಡ ಬಲ ಸಿಕ್ಕಂತಾಗಿದೆ ಎಂದು ತಿಳಿಸಿದ್ದಾರೆ.
    ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್ ಡಿಎ ದೇಶಾದ್ಯಂತ ಬೃಹತ್, ಬಲಶಾಲಿ ಮತ್ತು ಅತ್ಯಂತ ವಿಶ್ವಾಸಾರ್ಹ ರಾಜಕೀಯ ಒಕ್ಕೂಟವಾಗಿ ಬೆಳೆಯುತ್ತಲೇ ಇದೆ. ಎನ್ ಡಿ.ಎ ಕುಟುಂಬಕ್ಕೆ ಜೆಡಿ ಎಸ್ ಸೇರ್ಪಡೆಯನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ನಾವು ಒಟ್ಟಾಗಿ ಬಲಿಷ್ಠ ಎನ್‌ಡಿಎ ಮತ್ತು ನವಭಾರತವನ್ನು ನಿರ್ಮಿಸುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಎಸ್ ತೆಗೆದು ಹಾಕಲಿ:
    ಮತ್ತೊಂದೆಡೆ ಪ್ರತಿಕ್ರಿಯೆ ನೀಡಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಬಿಜೆಪಿ ಜೆಡಿಎಸ್ ಮೈತ್ರಿ ಅವರ ಪಕ್ಷಗಳಿಗೆ ಬಿಟ್ಟಿದ್ದು, ನಮಗೇನು ಇಲ್ಲ. ಆದರೆ ಜನತಾದಳದಲ್ಲಿ ಇರುವ ಎಸ್ ತೆಗೆದುಬಿಡಿ ಎಂದರು.
    ಸೆಕ್ಯುಲರ್ ಎಂಬ ಪದ ಇಟ್ಟುಕೊಂಡು ಮೈತ್ರಿಗೆ ಹೋದರೆ ಅದು ಅಪಹಾಸ್ಯವಾಗುತ್ತದೆ. ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಮೇಲೆ ಯಾವ ಪರಿಣಾಮ ಬೀರಲ್ಲ ,ಎರಡು ಪಕ್ಷಗಳು ಮೊದಲು ಒಳಗೊಳಗಡೆ ಮೈತ್ರಿ ಮಾಡುತ್ತಿದ್ದರು, ನಾವು ಅದಕ್ಕೆ ಜೆಡಿಎಸ್ ನ್ನು ಬಿಜೆಪಿಯ ಬಿ.ಟೀಂ ಎಂದಿದ್ದೆವು. ಈಗ ಬಹಿರಂಗವಾಗಿ ಮೈತ್ರಿ ಮಾಡಿಕೊಂಡಿದ್ದಾರೆ ಇದರಲ್ಲಿ ವಿಶೇಷವೇನೂ ಇಲ್ಲ ಎಂದು ತಿರುಗೇಟು ನೀಡಿದರು

    Verbattle
    Verbattle
    Verbattle
    BJP Government JDS Karnataka NDA News ಕಾಂಗ್ರೆಸ್ Election ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleKS&DL ಗೆ ಕಾರ್ಪೊರೇಟ್ ರೂಪ
    Next Article ಪಂಗನಾಮ Expert ಅಭಿನವ ಹಾಲಶ್ರೀ | Abhinava Halashree
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Vpjvza on ಪ್ರಧಾನಿ ಮೋದಿಗೆ ಸವಾಲು
    • рутор даркнет on ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.