ಬೆಂಗಳೂರು – ಲೋಕಸಭಾ Electionಯ ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಬಿಜೆಪಿಗೆ ರಾಜ್ಯದಲ್ಲಿ ದೊಡ್ಡ ಆಘಾತ ಎದುರಾಗಿದೆ. ಹೈದರಾಬಾದ್ ಕರ್ನಾಟಕದ ಬಿಜೆಪಿಯ ಪ್ರಭಾವಿ ನಾಯಕ ಹಾಗೂ ಹಾಲಿ ಸಂಸದ ಕರಡಿ ಸಂಗಣ್ಣ ಪಕ್ಷಕ್ಕೆ ಗುಡ್ ಬೈ ಹೇಳಿದ್ದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದ ಕಾರಣಕ್ಕೆ ಬೇಸರಗೊಂಡಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ಸಂಸದ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ಸಂಜೆ ರಾಜೀನಾಮೆ ಕೊಟ್ಟಿದ್ದಾರೆ.
ಈ ಕುರಿತಂತೆ ಕೊಪ್ಪಳದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಕರಡಿ ಸಂಗಣ್ಣ ಅವರು ‘ಲೋಕಸಭೆ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರಿಗೆ ಈ ಮೇಲ್ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.
ಹಿಂದಿನ ಎರಡು ಅವಧಿಗೆ ಸತತವಾಗಿ ಸಂಸದರಾಗಿದ್ದ ಅವರು ಟಿಕೆಟ್ ಸಿಗದ ಕಾರಣಕ್ಕೆ ಅಸಮಾಧಾನಗೊಂಡಿದ್ದರಲ್ಲದೇ, ಪಕ್ಷದ ರಾಜ್ಯ ನಾಯಕರ ವಿರುದ್ಧ ಆಕ್ರೋಶಗೊಂಡಿದ್ದರು. ಅವರನ್ನು ಬಿ.ಎಸ್. ಯಡಿಯೂರಪ್ಪ, ಪ್ರಲ್ಹಾದ ಜೋಶಿ, ಬಸವರಾಜ ಬೊಮ್ಮಾಯಿ, ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಬೆಂಗಳೂರಿಗೆ ಕರೆಯಿಸಿ ಸಮಾಧಾನಪಡಿಸಿ ಪಕ್ಷ ಘೋಷಿಸಿದ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪರ ಪ್ರಚಾರ ಮಾಡುವಂತೆ ಹೇಳಿದ್ದರು.
ಬೆಂಗಳೂರಿನ ಸಭೆ ಬಳಿಕ ಕ್ಷೇತ್ರಕ್ಕೆ ಮರಳಿ ಬಿಜೆಪಿ ಅಭ್ಯರ್ಥಿ ಪರ ಕುಷ್ಟಗಿ ಮತ್ತು ಕೊಪ್ಪಳದಲ್ಲಿ ನಡೆದಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ‘ಮೋದಿ ಮತ್ತೆ ಪ್ರಧಾನಿಯಾಗಲು ಬಸವರಾಜ ಅವರಿಗೆ ಮತ ನೀಡಿ’ ಎಂದು ಕೋರಿದ್ದರು. ಅದಾದ ಬಳಿಕ ಬಿಜೆಪಿಯ ಎಲ್ಲ ಚಟುವಟಿಕೆಯಿಂದ ಅವರು ಅಂತರ ಕಾಯ್ದುಕೊಂಡಿದ್ದರು.
ಇದಾದ ನಂತರ ಕಾಂಗ್ರೆಸ್ ನಾಯಕರು ಕರಡಿ ಸಂಗಣ್ಣ ಅವರನ್ನು ಸಂಪರ್ಕಿಸಿದ್ದು ಪಕ್ಷ ಸೇರುವಂತೆ ಆಹ್ವಾನ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಕೆಲವು ದಿನಗಳು ಬಾಕಿ ಇರುವಂತೆ ಕರಡಿ ಸಂಗಣ್ಣ ರಾಜೀನಾಮೆ ನೀಡಿರುವುದು ಬಿಜೆಪಿಗೆ ಹೈದರಾಬಾದ್ ಕರ್ನಾಟಕದಲ್ಲಿ ದೊಡ್ಡ ಹಿನ್ನಡೆ ಎಂದು ಹೇಳಲಾಗುತ್ತಿದೆ.
9 Comments
индийские карты гадание https://www.indiyskiy-pasyans-online.ru .
электрокарниз купить в москве электрокарниз купить в москве .
электрический карниз для штор электрический карниз для штор .
вывод из запоя ростовская область https://www.vyvod-iz-zapoya-rostov11.ru .
снятие ломки наркомана снятие ломки наркомана .
лучшие онлайн казино лучшие онлайн казино .
Selector
Попробуйте Купить бюстгальтер онлайн
алкоголь круглосуточно https://dostavka-alkogolya-moskva-world-1.ru/