ಬೆಂಗಳೂರು, ಫೆ.17-
ಸಂಪನ್ಮೂಲ ಕ್ರೋಡೀಕರಣಕ್ಕೆ ಒತ್ತು ನೀಡಿರುವ ಮುಖ್ಯಮಂತ್ರಿ ತಮ್ಮ budget ನಲ್ಲಿ GST ಪೂರ್ವ ತೆರಿಗೆ (pre-GST) ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆ (Karasamadhana Scheme)ಯನ್ನು ಪ್ರಕಟಿಸಿದ್ದಾರೆ.
ಈ ಕರಸಮಾಧಾನ ಯೋಜನೆಯ ಮೂಲಕ ತೆರಿಗೆ ಬಾಕಿಗಳನ್ನು ಯಾವುದೇ ದಾವೆಯಿಲ್ಲದೇ ಕ್ಷಿಪ್ರವಾಗಿ ಸಂಗ್ರಹಿಸಲು ಸಾಧ್ಯವಾಗುತ್ತದೆ ಹಾಗೂ ಈ ಯೋಜನೆಯಡಿ ಎಲ್ಲಾ GST-ಪೂರ್ವ ಅಧಿನಿಯಮಗಳ ಅಡಿಯಲ್ಲಿ ಬಾಕಿ ಇರುವ ಪೂರ್ಣ ತೆರಿಗೆಯನ್ನು 2023 ರ ಅ.30 ರ ಒಳಗೆ ಪಾವತಿಸುವವರಿಗೆ ಬಡ್ಡಿ ಮತ್ತು ದಂಡಬಡ್ಡಿ ಪಾವತಿಯಲ್ಲಿ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ವೃತ್ತಿ ತೆರಿಗೆ ಅಧಿನಿಯಮವನ್ನು ತಿದ್ದುಪಡಿ ಮಾಡಿ ಸರಳೀಕರಣಗೊಳಿಸಿ ಕಡಿಮೆ ವರಮಾನದ ವರ್ಗಕ್ಕೆ ಪರಿಹಾರ ನೀಡಲು ಸಂಬಳ ಅಥವಾ ಮಜೂರಿಯನ್ನು ಪಡೆವ ನೌಕರರಿಗೆ ತೆರಿಗೆ ವಿನಾಯಿತಿ ಮಿತಿಯನ್ನು ಮಾಸಿಕ 15ರಿಂದ 25೦೦೦ ರೂ. ಗಳಿಗೆ ಏರಿಕೆ ಮಾಡಲಾಗುವುದೆಂದು ಹೇಳಿದ್ದಾರೆ.