ಬೆಂಗಳೂರು,ಜು.11-ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಕಳೆದ ವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ಜಮೀರ್ ಆದಾಯಕ್ಕಿಂತ ಎರಡು ಸಾವಿರ ಪಟ್ಟು ಜಾಸ್ತಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ 87 ಕೋಟಿ ಹೆಚ್ಚುವರಿ ಆಸ್ತಿಯ ಸಮರ್ಪಕ ದಾಖಲೆಗಳನ್ನು ಒದಗಿಸುವಂತೆ ಎಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ದಾಳಿ ನಡೆದ ಮಾರನೇ ದಿನವೇ ಕಚೇರಿಗೆ ಬಂದು ದಾಖಲೆ ಒದಗಿಸುವಂತೆ ಎಸಿಬಿ ಅಧಿಕಾರಿಗಳು ತಿಳಿಸಿದ್ದು, ಬಕ್ರೀದ್ ಕಾರಣ ನೀಡಿ ಜಮೀರ್ ಕಾಲಾವಕಾಶ ಪಡೆದಿದ್ದರು. ಸದ್ಯ ಬಕ್ರೀದ್ ಮುಗಿದ ಕಾರಣ ಜಮೀರ್ ದಾಖಲೆ ಸಮೇತ ಎಸಿಬಿ ಅಧಿಕಾರಿಗಳ ಮುಂದೆ ಹಾಜರಾಗಬೇಕಿದೆ.
ಈ ನಡುವೆ ಆದಾಯಕ್ಕಿಂತ ಶೇ.2031 ಪಟ್ಟು ಹೆಚ್ಚು ಅಕ್ರಮ ಆಸ್ತಿಯನ್ನು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಸಂಪಾದಿಸಿದ್ದಾರೆ ಎಂದು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿತ್ತು.
ಇಡಿ ವರದಿ ಆಧರಿಸಿ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಎಸಿಬಿ, ಜಮೀರ್ ಅವರ ಸಾಮ್ರಾಜ್ಯದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆಗಳನ್ನು ಜಪ್ತಿ ಮಾಡಿತ್ತು. ಜಮೀರ್ ಅವರು .87.44 ಕೋಟಿ (ಶೇ.2031) ಅಕ್ರಮ ಆಸ್ತಿ ಹೊಂದಿರುವ ಬಗ್ಗೆ ಇಡಿ ಉಲ್ಲೇಖಿಸಿದ್ದು, ಈ ವರದಿ ಆಧರಿಸಿ ಶಾಸಕರ ವಿರುದ್ಧ ತನಿಖೆ ನಡೆಸಲು ಮುಂದಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಸಮೀಪ ಬಂಬೂ ಬಜಾರ್‌ನಲ್ಲಿರುವ ಜಮೀರ್ ಅವರ ವೈಭವೋಪೇತ ಮನೆ, ಸದಾಶಿವ ನಗರದಲ್ಲಿರುವ ಅತಿಥಿ ಗೃಹ, ಕಲಾಸಿಪಾಳ್ಯದಲ್ಲಿನ ಅವರ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಂಪನಿಯ ಕಚೇರಿ, ಓಕಾ ಅಪಾರ್ಚ್‌ಮೆಂಟ್ ಫ್ಲ್ಯಾಟ್ ಹಾಗು ಬನಶಂಕರಿಯ ಜಿ.ಕೆ.ಅಸೋಸಿಯೇಟ್ಸ್ ಕಚೇರಿ ಸೇರಿ ಐದು ಸ್ಥಳಗಳ ಮೇಲೆ ಎಸಿಬಿ ದಾಳಿ ನಡೆಸಿತ್ತು. ಐಎಂಐ ಬಹುಕೋಟಿ ವಂಚನೆ ಪ್ರಕರಣದ ತನಿಖೆ ವೇಳೆ ಶಾಸಕ ಜಮೀರ್ ಅವರ ಆಸ್ತಿ ಬಗ್ಗೆ ಇಡಿ ಪತ್ತೆ ಹಚ್ಚಿತ್ತು.
ಆಸ್ತಿಯ ಶೋಧ:
ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ವಿರುದ್ಧ ತನಿಖೆ ಮುಂದುವರೆಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಈಗ ಜಮೀರ್ ಅವರ 16 ವರ್ಷ ಶಾಸಕರಾಗಿರುವ ಅವಧಿಯಲ್ಲಿ ಗಳಿಸಿದ ಸಂಪತ್ತಿನ ಬಗ್ಗೆ ಶೋಧನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
2006ರಲ್ಲಿ ಉಪಚುನಾವಣೆ ಮೂಲಕ ಮೊದಲ ಬಾರಿಗೆ ಚಾಮರಾಜಪೇಟೆ ಕ್ಷೇತ್ರದ ಶಾಸಕರಾದ ಜಮೀರ್, ಅಂದಿನಿಂದ ಸತತವಾಗಿ ನಾಲ್ಕು ಬಾರಿ ಚುನಾಯಿತರಾಗಿದ್ದಾರೆ. ತಮ್ಮ ಶಾಸಕ ಸ್ಥಾನ ಬಳಸಿಕೊಂಡು ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಎಸಿಬಿ ಅನುಮಾನಿಸಿದೆ. ಈ ಹಿನ್ನೆಲೆಯಲ್ಲಿ 2006ರ ಚುನಾವಣೆಗೆ ಸ್ಪರ್ಧಿಸಿದಾಗ ಸಲ್ಲಿಸಿದ್ದ ಆಸ್ತಿ ಪ್ರಮಾಣವನ್ನು ಕಲೆ ಹಾಕಿರುವ ಎಸಿಬಿ, ಆ ಮಾಹಿತಿ ಆಧರಿಸಿ ಈಗಿನ ಸಂಪತ್ತಿನ ಮೌಲ್ಯವರ್ಧನೆ ಮಾಡುತ್ತಿದೆ ಎನ್ನಲಾಗಿದೆ.
ಶಾಸಕರಾಗುವ ಮುನ್ನವೇ ಸಾರಿಗೆ (ನ್ಯಾಷನಲ್ ಟ್ರಾವೆಲ್ಸ್ ಏಜೆನ್ಸಿ) ಹಾಗು ರಿಯಲ್ ಎಸ್ಟೇಟ್ ಸೇರಿದಂತೆ ಇತರೆ ಉದ್ಯಮದಲ್ಲಿ ಜಮೀರ್ ತೊಡಗಿದ್ದರು. ನ್ಯಾಷನಲ್ ಟ್ರಾವೆಲ್ಸ್ ದೇಶ ವ್ಯಾಪ್ತಿ ಸಂಪರ್ಕ ಜಾಲ ಹೊಂದಿದೆ. ಅಲ್ಲದೆ ಅಗರ್ಭ ಶ್ರೀಮಂತಿಕೆಗೆ ಜಮೀರ್ ಹೆಸರು ವಾಸಿಯಾಗಿದ್ದರು. ಶಾಸಕ ಸ್ಥಾನ ಅವರ ಸಾರಿಗೆ ಹಾಗು ರಿಯಲ್ ಎಸ್ಟೇಟ್ ಸೇರಿದಂತೆ ಸ್ವಂತ ವ್ಯವಹಾರಗಳ ಬೆಳವಣಿಗೆಗೆ ನೆರವಾಗಿದೆಯೇ ಎಂಬುದು ಎಸಿಬಿ ತನಿಖೆಗೆ ಒಳಪಡಿಸಿದೆ. ತಮ್ಮ ಶಾಸಕ ಸ್ಥಾನ ದುರ್ಬಳಕೆ ಮಾಡಿದರೆ ಚುನಾಯಿತ ಪ್ರತಿನಿಧಿ ಕಾಯ್ದೆಯಡಿ ಕ್ರಮ ಜರುಗಿಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಲೆಕ್ಕ ಪರಿಶೋಧನೆ:
ಜಮೀರ್ ಅವರು ದಾಳಿ ವೇಳೆ ತಮ್ಮ ಆಸ್ತಿ ಪಾಸ್ತಿ ಕುರಿತು ಸತ್ಯಾಸತ್ಯತೆ ಪರಿಶೀಲನೆಗೆ ಪ್ರತ್ಯೇಕವಾಗಿ ಲೆಕ್ಕಪರಿಶೋಧನೆಗೆ ಎಸಿಬಿ ಕಳುಹಿಸಿದೆ ಎಂದು ಮೂಲಗಳು ಹೇಳಿವೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

