ನಟ ಚೇತನ್ ಕುಮಾರ್ ಅವರು ತಮ್ಮ ಸಿದ್ಧಾಂತಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಅವರು ಈ ರೀತಿ ವಿಚಾರಗಳನ್ನು ಓಪನ್ ಆಗಿ ಹೇಳಿಕೊಳ್ಳಲು ಯಾವುದೇ ಹಿಂಜರಿಕೆ ತೋರುವುದಿಲ್ಲ. ಇದರಿಂದ ಸಾಕಷ್ಟು ವಿವಾದಗಳು ಹುಟ್ಟಿಕೊಂಡ ಉದಾಹರಣೆ ಇದೆ. ಈಗ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಕುರಿತು ಅವರು ಹೇಳಿದ ಮಾತುಗಳು ಕೂಡ ಚರ್ಚೆಗೆ ಗ್ರಾಸವಾಗಿದೆ ‘ವಿಕ್ರಾಂತ್ ರೋಣ ಚಿತ್ರ ತಾಂತ್ರಿಕವಾಗಿ ಮತ್ತು ಅಭಿನಯದ ದೃಷ್ಟಿಯಿಂದ ನೋಡಿದರೆ ಉತ್ತಮವಾಗಿದೆ. ಆದರೆ, ದಲಿತರನ್ನು-ಬಹುಜನರನ್ನು ದುಷ್ಟ, ಪೈಶಾಚಿಕರಂತೆ ಬಿಂಬಿಸಿ ಮುಸ್ಲಿಮರನ್ನು ಸ್ಟೀರಿಯೋಟೈಪ್ ಮಾಡಿದ್ದಾರೆ, ಈ ಸೂಕ್ಷ್ಮವಿಲ್ಲದ ಚಿತ್ರಣದಿಂದ ನಾನು ನಿರಾಶೆಗೊಂಡಿದ್ದೇನೆ. ಚಲನಚಿತ್ರ ನಿರ್ಮಾಣ ಮಾಡುವವರು ಐತಿಹಾಸಿಕ ಅನ್ಯಾಯಗಳನ್ನು ಸೂಕ್ಷ್ಮವಾಗಿ ಗಮನಿಸದೆ ಕೇವಲ ಲಾಭಕ್ಕಾಗಿ ಜಾತಿ/ಧರ್ಮವನ್ನು ತಮ್ಮ ಚಿತ್ರಗಳಲ್ಲಿ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು’ ಎಂದಿದ್ದಾರೆ. ಚೇತನ್ ಹೇಳಿಕೆಗೆ ನೆಟ್ಟಿಗರು ಪರ, ವಿರೋಧ ನಿಲುವು ವ್ಯಕ್ತಪಡಿಸಿದ್ದಾರೆ.
ವಿಕ್ರಾಂತ್ ರೋಣದಲ್ಲಿ ದಲಿತರು, ಮುಸ್ಲಿಮರ ಅವಹೇಳನ: ನಟ ಚೇತನ್ ಕುಮಾರ್ ತಗಾದೆ
Previous Articleಸಿದ್ದರಾಮಯ್ಯ ಜೀವನ ತೆರೆಗೆ ತರಲು ಸಿದ್ಧತೆ..??
Next Article ಚುನಾವಣೆಗೆ ಸಜ್ಜಾಗಲು ಅಮಿತ್ ಶಾ ಸೂಚನೆ