ರಾಜ್ಯದ ಹಲವಾರು ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗುರುಲಿಂಗಸ್ವಾಮಿ ಹೊಳಿಮಠ ಇನ್ನಿಲ್ಲ ಗುರುಲಿಂಗ ಸ್ವಾಮಿ ಹೊಳಿಮಠ (45) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು. ಬೆಳಿಗ್ಗೆ ಜಿಮ್‌ಗೆ ಹೋಗಿದ್ದ ಅವರು ಕುಸಿದುಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ ಎಂದು ಮೂಲಗಳು ತಿಳಿಸಿವೆ. ಕನ್ನಡಪ್ರಭ, ಈಟಿವಿ, ನ್ಯೂಸ್ 18, ಟಿವಿ5 ಸೇರಿದಂತೆ ವಿವಿಧ ಪತ್ರಿಕೆ, ನ್ಯೂಸ್ ಚಾನೆಲ್‌ಗಳಲ್ಲಿ ಗುರುಲಿಂಗಸ್ವಾಮಿ ಕಾರ್ಯನಿರ್ವಹಿಸಿದ್ದರು. ಮೃತರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರು ರಾಮದುರ್ಗದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಾಂತ್ವನ
ಇಂದು ನಿಧನರಾದ ಸಿಎಂ ಮಾಧ್ಯಮ ಸಂಯೋಜಕರಾದ ಗುರುಲಿಂಗಸ್ವಾಮಿ ಹೊಳಿಮಠ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನಗಳನ್ನು ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತರ ಕುಟಂಬದ ಸದಸ್ಯರಿಗೆ ಸಾಂತ್ವನ ಹೇಳಿದರು..
Previous Articleಬ್ಯಾಟರಿಗಳ ಕಳವು ಗುಜರಿ ಅಂಗಡಿ ಮಾಲೀಕ ಸೇರಿ ನಾಲ್ವರು ಸೆರೆ
Next Article ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ