Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ನಂಬರ್ ಪ್ಲೇಟ್ ಅವಾಂತರ…
    ಸುದ್ದಿ

    ನಕಲಿ ನಂಬರ್ ಪ್ಲೇಟ್ ಅವಾಂತರ…

    vartha chakraBy vartha chakraAugust 18, 2022Updated:August 18, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.18- ಬೈಕ್​ ಮಾಲೀಕ ಮಾಡಿದ ಎಡವಟ್ಟಿನಿಂದಾಗಿ ಯಾರೋ ಮಾಡಿದ ತಪ್ಪಿಗೆ ಇನ್ಯಾರೋ​ ಪ್ರಕರಣ ಎದುರಿಸುವಂತಾಯಿಗಿದ್ದು ಕೊನೆಗೂ ನಗರದ ಸಂಚಾರ ಪೊಲೀಸರ ನಿಖರ ತನಿಖೆಯಿಂದ ನಕಲಿ ನಂಬರ್ ಪ್ಲೇಟ್ ಅವಾಂತರದಿಂದ ನಡೆದಿರುವ ಸತ್ಯಾಂಶ ಹೊರಬಂದಿದೆ.
    ಕಳೆದ ಮೇ ತಿಂಗಳಲ್ಲಿ ಶಾಲಾ ಬಸ್ ಮತ್ತು ಬೈಕ್ ನಡುವೆ ಬನಶಂಕರಿ ಠಾಣಾ ವ್ಯಾಪ್ತಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿ ಬಾಲಕಿಯೊಬ್ಬಳು ಮೃತಪಟ್ಟಿದ್ದಳು.
    ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ವೇಳೆ ಬೈಕ್ ಮಾಲೀಕನ ಮಹಾ ಎಡವಟ್ಟು ಬಯಲಾಗಿದೆ. ಅಸಲಿಗೆ ಬೈಕ್​ ಮಾಲೀಕ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಬೈಕ್ ಓಡಿಸುತ್ತಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಸ್ಪ್ಲೆಂಡರ್ ಪ್ಲಸ್ ಬೈಕ್​ಗೆ ಕರ್ನಾಟಕ ನೋಂದಣಿ ನಂಬರ್ ಪ್ಲೇಟ್ ಬಳಸಿ ರೈಡಿಂಗ್ ಮಾಡುತ್ತಿದ್ದ. ಅಸಲಿಗೆ ಮಾಲೀಕ ಆ ಬೈಕ್​ ಅನ್ನು ಪೊಲೀಸರ ವಾಹನ ಹರಾಜಿನಲ್ಲಿ ಖರೀದಿ ಮಾಡಿದ್ದ.
    ಮಾಲೀಕನ ಹೆಸರು ಅನಂತರಾಮು ಎಂದು. ಬೈಕ್ ಖರೀದಿ ಬಳಿಕ ಬೈಕ್ ದಾಖಲಾತಿಗಳನ್ನು ರೆಡಿ ಮಾಡಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದ. ಆತ ಖರೀದಿಸಿದ್ದು ಎಂಹೆಚ್ 31ಬಿ ಎಕ್ಸ್ 8023 ನೋಂದಣಿಯ ಬೈಕ್ ಆಗಿತ್ತು. ಆದರೆ, ಹೊರರಾಜ್ಯದ ಬೈಕ್ ಅನ್ನು ನಗರದಲ್ಲಿ ಓಡಿಸಿದರೆ ಟ್ರಾಫಿಕ್ ಪೊಲೀಸರು ಬೈಕ್ ಹಿಡಿಯಬಹುದು ಎಂದು ನಕಲಿ ನಂಬರ್ ಪ್ಲೇಟ್ ಬಳಕೆ ಮಾಡಿದ್ದ.
    ಎಂಹೆಚ್ 31ಬಿ ಎಕ್ಸ್ 8023 ನಂಬರ್​ ಪ್ಲೇಟ್​ ತೆಗೆದು ಕೆಎ04 ಹೆಚ್ ಇ-5475 ನೋಂದಣಿಯ ನಂಬರ್ ಬಳಸಿ ಬೈಕ್ ಸವಾರಿ ಮಾಡುತ್ತಿದ್ದ. ದುರಾದೃಷ್ಟವಶಾತ್ ಮೇ ತಿಂಗಳಲ್ಲಿ ಈ ಬೈಕ್​ನಿಂದ ಅಪಘಾತವಾಗಿತ್ತು. ಅಪಘಾತದಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಓರ್ವ ಬಾಲಕಿ ಮೃತಪಟ್ಟಿದ್ದಳು. ಈ ವೇಳೆ ಬೈಕ್​ ನಂಬರ್​ ಜಾಡು ಹಿಡಿದು ಮಾಲೀಕನನ್ನು ವಿಚಾರಣೆ ನಡೆಸಲಾಗಿತ್ತು. ಆದರೆ, ಅಪಘಾತಕ್ಕೂ ನನಗೂ ಸಂಬಂಧವಿಲ್ಲ ಎಂದಿದ್ದ.
    ಇದೀಗ ಅಸಲಿ ಬೈಕ್​ ಮಾಲೀಕ ಸಿಕ್ಕಿಬಿದ್ದಿದ್ದಾನೆ. ಸರಿಯಾದ ದಾಖಲಾತಿ ಇಲ್ಲದೆ ಮತ್ತು ನಕಲಿ ನಂಬರ್ ಪ್ಲೇಟ್ ಬಳಕೆಯಿಂದ ಎಲ್ಲರಿಗೂ ಸಂಕಷ್ಟ. ನಕಲಿ ನಂಬರ್ ಪ್ಲೇಟ್ ಬಳಸಿ ವಂಚನೆ ಹಿನ್ನಲೆಯಲ್ಲಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಮಾಲೀಕನ ವಿರುದ್ಧ ಕೇಸ್ ದಾಖಲಲಾಗಿದೆ. ಇದೇ ರೀತಿ ಕಳೆದ 2 ತಿಂಗಳಲ್ಲಿ 12 ನಕಲಿ ನಂಬರ್ ಪ್ಲೇಟ್ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ ನಾಲ್ಕು ಪ್ರಕರಣಗಳು ಅಪಘಾತ ಎಸಗಿ ಸಿಕ್ಕಿಬಿದ್ದಿದ್ದಾರೆ.

    Bangalore ಅಪಘಾತ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಕಂಬ್ಳಿಹುಳ ಚಿತ್ರದ ಮೊದಲ ಹಾಡು ರಿಲೀಸ್
    Next Article ಶೂಟಿಂಗ್ ವೇಳೆ ಅವಘಡ: ಬಾಹುಬಲಿ ನಟ ಆಸ್ಪತ್ರೆಗೆ ದಾಖಲು
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup on BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    • Ralphhow on ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    • Jamesfluts on ಬಾಟಲಿ ನೀರು ಸುರಕ್ಷಿತವಲ್ಲ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe