Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನ ಕಳ್ಳಸಾಗಣೆ ಕೋರ್ಟ್ ವಿಚಾರಣೆ ಕರ್ನಾಟಕಕ್ಕೆ ರವಾನೆ
    ಸುದ್ದಿ

    ಚಿನ್ನ ಕಳ್ಳಸಾಗಣೆ ಕೋರ್ಟ್ ವಿಚಾರಣೆ ಕರ್ನಾಟಕಕ್ಕೆ ರವಾನೆ

    vartha chakraBy vartha chakraJuly 23, 2022Updated:July 23, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.23-ರಾಜಕೀಯ ಪ್ರಭಾವ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ 14 ಕೋಟಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದ ಕೋರ್ಟ್ ವಿಚಾರಣೆಯನ್ನು ಕರ್ನಾಟಕಕ್ಕೆ ವರ್ಗಾಯಿಸುವಂತೆ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ತ್ವರಿತ ಹಾಗು ಪಾರದರ್ಶಕ ವಿಚಾರಣೆ ನಡೆಯುವ ದೃಷ್ಟಿಯಿಂದ ಬೆಂಗಳೂರು ವಿಶೇಷ ಕೋರ್ಟ್​ಗೆ ವರ್ಗಾವಣೆ ಮಾಡುವಂತೆ ಮನವಿ ಮಾಡಿದೆ.
    ಸ್ಯಾಂಡಲ್​ವುಡ್ ಡ್ರಗ್ಸ್ ದಂಧೆಯಲ್ಲಿ ಬಂಧಿತರಾಗಿರುವವರ ಜತೆ ಕೇರಳದ ಸ್ಮಗ್ಲಿಂಗ್ ರಾಣಿ ಎಂದೇ ಕುಖ್ಯಾತಿಯಾಗಿರುವ ಸ್ವಪ್ನಾ ಸುರೇಶ್ ಗ್ಯಾಂಗ್ ಸಂಪರ್ಕದಲ್ಲಿತ್ತು. ಅಷ್ಟೇ ಅಲ್ಲ ಚಿನ್ನದ ಕಳ್ಳಸಾಗಣೆಗೆ ಚಂದನವನದ ಡ್ರಗ್ಸ್ ದಂಧೆಯಲ್ಲಿರುವ ಪ್ರಭಾವಿಗಳೂ ಸ್ವಪ್ನಾಗೆ ನೆರವು ನೀಡಿದ್ದರು ಎಂಬ ಸಂಗತಿ ಈ ಹಿಂದೆ ಇಡಿ ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈಗ ಇಡಿ ಅಧಿಕಾರಿಗಳು, ಇಡೀ ಪ್ರಕರಣದ ವಿಚಾರಣೆಯನ್ನು ಕರ್ನಾಟಕಕ್ಕೆ ವರ್ಗಾಯಿಸಲು ಕೋರಿರುವುದರಿಂದ ಸುಪ್ರೀಂಕೋರ್ಟ್ ಪುರಸ್ಕರಿಸಿದರೆ ಸ್ಯಾಂಡಲ್​ವುಡ್ ಡ್ರಗ್ಸ್ ದಂಧೆಯ ರಹಸ್ಯ ಮಾಹಿತಿಗಳೂ ವಿಚಾರಣೆ ವೇಳೆ ಹೊರಬರುವ ನಿರೀಕ್ಷೆ ಇದೆ.
    ಕಳೆದ ಜು.5ರಂದು ತಿರುವನಂತಪುರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 14.82 ಕೋಟಿ ರೂ ಮೌಲ್ಯದ 30 ಕೆ.ಜಿ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದರು. ತಿರುವನಂತಪುರಂನಲ್ಲಿರುವ ಯುಎಇ ಕಾನ್ಸುಲೇಟ್ ಕಚೇರಿಯ ವಿಳಾಸ ಹೊಂದಿದ್ದ ಆ ಪಾರ್ಸಲ್ ಅನ್ನು ಯುಎಇಯಿಂದ ರಾಜತಾಂತ್ರಿಕ ಮಾರ್ಗದ ಮೂಲಕ ಕಳುಹಿಸಿರುವುದು ಬಹಿರಂಗಗೊಂಡಿತ್ತು. ಎನ್​ಐಎ ತನಿಖೆ ನಡೆಸಿದಾಗ ಗೋಲ್ಡ್ ಸ್ಮಗ್ಲಿಂಗ್​ನಿಂದ ಬಂದ ಹಣವನ್ನು ಉಗ್ರ ಚಟುವಟಿಕೆಗೆ ಬಳಸುತ್ತಿರುವ ವಿಚಾರವೂ ದೃಢಪಟ್ಟಿದೆ. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಸ್ವಪ್ನಾ ಸುರೇಶ್, ಸರಿತಾ, ಫಾಜಿಲ್ ಫರೀದ್ ಮತ್ತು ಸಂದೀಪ್ ನಾಯರ್ ಪ್ರಮುಖ ಆರೋಪಿಗಳಾಗಿದ್ದಾರೆ. ಇವರ ವಿಚಾರಣೆ ವೇಳೆ ಸ್ಯಾಂಡಲ್​ವುಡ್ ಡ್ರಗ್ಸ್ ಮಾಫಿಯಾ ಜತೆ ನಂಟಿರುವ ವಿಚಾರವನ್ನೂ ಬಾಯ್ಬಿಟ್ಟಿದ್ದರು. ಅಲ್ಲದೆ, ಇದೇ ಜು.12ರಂದು ಪ್ರಕರಣದ ಸಂಬಂಧ ಬೆಂಗಳೂರು ಸೇರಿ ವಿವಿಧೆಡೆ ಹೊಂದಿರುವ 16 ಕೋಟಿ ಮೌಲ್ಯದ ಚರ ಮತ್ತು ಸ್ಥಿರಾಸ್ತಿಯನ್ನು ಪತ್ತೆಹಚ್ಚಿದ್ದ ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದರು.
    ಕೋರ್ಟ್​ಗೆ ಹೇಳಿದ್ದ ಇಡಿ:
    ಚಿನ್ನದ ಸ್ಮಗ್ಲಿಂಗ್ ಹಗರಣ ಬೆಳಕಿಗೆ ಬಂದ ಸಂದರ್ಭದಲ್ಲಿ ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್ ಹಾಗು ಸಂದೀಪ್ ನಾಯರ್ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದರು. ಆರೋಪಿಗಳ ಫೋನ್ ಕರೆ ಬೆನ್ನತ್ತಿದ್ದ ಎನ್​ಐಎ ತಂಡ ಕೋರಮಂಗಲದ ಖಾಸಗಿ ಹೋಟೆಲ್​ವೊಂದರಲ್ಲಿ ಬಂಧಿಸಿತ್ತು.
    ಇಡಿ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡ ನಂತರ ಬೆಂಗಳೂರು ಡ್ರಗ್ಸ್ ದಂಧೆಗೂ ಚಿನ್ನ ಸ್ಮಗ್ಲಿಂಗ್​ಗೂ ನಂಟಿದೆ ಎಂಬುದು ಗೊತ್ತಾಗಿತ್ತು. ಕೊಚ್ಚಿಯ ವಿಶೇಷ ಕೋರ್ಟ್​ಗೆ ಮಾಹಿತಿ ಈ ಹಿಂದೆ ಮಾಹಿತಿ ನೀಡಿದ್ದರು.

    Verbattle
    Verbattle
    Verbattle
    Bangalore court high court special news ಇಡಿ ಉಗ್ರ ಡ್ರಗ್ಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗೊರವನಹಳ್ಳಿ ದೇವಾಲಯದ ಪ್ರಧಾನ ಅರ್ಚಕ ಇನ್ನಿಲ್ಲ
    Next Article BSY ನಿವೃತ್ತಿ ಘೋಷಣೆ ಮಾಡಿದ್ದು ಬೇಸರದ ಸಂಗತಿ!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on May 3, 2023 51st Year Free Mass Marriage at Sri Kshetra Dharmasthala
    • LeonardReawn on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Tracymix on ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.