ಬೆಂಗಳೂರು : ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮ ಆರೋಪದಲ್ಲಿ ಬಂಧಿಯಾಗಿರುವ ಎಡಿಜಿಪಿ ಅಮ್ರಿತ್ ಪೌಲ್, ಈ ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಗರಣದಲ್ಲಿ ಐಪಿಎಸ್ ಅಧಿಕಾರಿಗಳು, ರಾಜಕಾರಣಿಗಳು, ಮಂತ್ರಿಗಳು ಭಾಗಿಯಾಗಿದ್ದಾರೆ. ಸಚಿವರೇ ನಮ್ಮ ಜಿಲ್ಲೆಯ ಅಭ್ಯರ್ಥಿಗಳಿಗೆ ಶರಣಾಗುವಂತೆ ಹೇಳಿದ್ದಾರೆ. ಇದುವರೆಗೂ 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು, ಅವರ ಹೇಳಿಕೆ, ಬಂಧನವಾಗಿರುವ ಎಡಿಜಿಪಿ ಅವರ ಹೇಳಿಕೆಯನ್ನು ಪೂರ್ಣ ಪ್ರಮಾಣದಲ್ಲಿ ತನಿಖಾಧಿಕಾರಿಗಳು ದಾಖಲೆ ಮಾಡಿಕೊಳ್ಳುತ್ತಿಲ್ಲ. ತನಿಖೆಯಲ್ಲಿ ಆಂತರಿಕವಾಗಿ ಏನೆಲ್ಲಾ ಆಗುತ್ತಿದೆ ಎಂಬುದು ಗೊತ್ತಿದೆ’ ಎಂದರು.
ಇಂತಹ ತನಿಖೆಯಿಂದ ನ್ಯಾಯ ಸಿಗುವುದಿಲ್ಲ. ಹೈಕೋರ್ಟ್ ಹಾಲಿ ನ್ಯಾಯಮೂರ್ತಿಯ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.
Previous ArticleLaptop ಕಳ್ಳರ ಬಂಧನ..!!
Next Article ಪುನೀತ್ ಗಂಧದ ಗುಡಿ ಬಗ್ಗೆ ಬಿಗ್ ಅಪ್ಡೇಟ್!