ಬೆಂಗಳೂರು,ಜು.8– ಸಾಮಾಜಿಕ ಜಾಲತಾಣದಿಂದ ಪರಿಚಯವಾದ ಯುವಕನ ಜತೆ ಪ್ರೀತಿಗೆ ಬಿದ್ದು ನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಲವ್ ಫೇಲ್ಯೂರ್ ಎಂದು ವಿದ್ಯಾರ್ಥಿನಿ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಿಂತಾಮಣಿ ತಾಲೂಕಿನ ಕುರಬೂರು ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಅಗ್ರೀಕಲ್ಚರ್ ಓದುತ್ತಿದ್ದ ಪವಿತ್ರಾ ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಪ್ರೀತಿಯ ಬಲೆಗೆ ಬಿದ್ದು ಜೀವ ಕಳೆದುಕೊಂಡಿದ್ದಾಳೆ.
ಕಾಲೇಜಿನ ವಸತಿ ನಿಲಯದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.
ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿಟ್ಟು ಭಗ್ನಪ್ರೇಮದ ಕುರಿತು ಮಾಹಿತಿ ನೀಡಿದ್ದಾಳೆ. ಜತೆಗೆ ಡೆತ್ನೋಟ್ ಕೂಡ ಬರೆದಿಟ್ಟಿದ್ದಾಳೆ.
ಇನ್ಟಾಗ್ರಾಂ ನಲ್ಲಿ ಪರಿಚಯವಾದ ಯುವಕನ ಜೊತೆ ಪ್ರೀತಿ ಮಾಡಿದ್ದು, ಈಗ ಲವ್ ಫೇಲ್ಯೂರ್ ಆಗಿದೆ. ಈ ಹಿನ್ನೆಲೆಯಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯಾರ್ಥಿನಿ ಹೇಳಿದ್ದಾಳೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಲವ್ ಫೇಲ್ಯೂರ್ ಎಂದು ವಿಡಿಯೋ ಮಾಡಿ ವಿದ್ಯಾರ್ಥಿನಿ ನೇಣಿಗೆ ಶರಣು
Previous Articleಗುಜರಾತ್ ನ ಆರು ಜನರ ಸೆರೆ..
Next Article ಉಡಾಫೆ ಉತ್ತರ ನೀಡಿದ ಉಪನ್ಯಾಸಕಿಗೆ ವಾರ್ನಿಂಗ್!!