Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಡಿ ವಿಚಾರಣೆ ಖಂಡಿಸಿ ಮೌನ ಪ್ರತಿಭಟನೆ
    ಸುದ್ದಿ

    ಇಡಿ ವಿಚಾರಣೆ ಖಂಡಿಸಿ ಮೌನ ಪ್ರತಿಭಟನೆ

    vartha chakraBy vartha chakraJuly 26, 2022Updated:July 26, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.26-ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ನಗರದಲ್ಲಿ ಇಂದು ಮೌನ ಪ್ರತಿಭಟನೆ ನಡೆಸಿದರು.
    ನಗರದ ಆನಂದರಾವ್ ವೃತ್ತದ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ನಡೆದ ಮೌನ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ,ಹರಿಪ್ರಸಾದ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮ್ಮದ್ ಸೇರಿದಂತೆ ಹಲವು ಮುಖಂಡರು ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
    ಸೋನಿಯಾಗಾಂಧಿ ಅವರ ಜಾರಿ ನಿರ್ದೇಶನಾಲಯ ವಿಚಾರಣೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದು ಅದರ ಭಾಗವಾಗಿ ನಗರದಲ್ಲಿ ಮೌನ ಪ್ರತಿಭಟನೆ ನಡೆಸಲಾಗಿದೆ.
    ಮೌನ ಪ್ರತಿಭಟನೆ ಅನಿರ್ದಿಷ್ಟಾವವರೆಗೂ ನಡೆಯಲಿದೆ. ಸೋನಿಯಾಗಾಂಧಿ ಅವರನ್ನು ವಿಚಾರಣೆ ನಡೆಸಿ ಬಿಡುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಮುಖಂಡರು ಘೋಷಿಸಿದ್ದಾರೆ.
    ಸೋನಿಯಾಗಾಂಧಿ ಅವರನ್ನು ಮೊದಲ ದಿನ ವಿಚಾರಣೆಗೊಳಪಡಿಸಿದಾಗಲೂ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಗಳಿಂದ ದೆಹಲಿಯಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.
    ಈ ನಡುವೆ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾಗಾಂಧಿ ಅವರನ್ನು ವಿಚಾರಣೆ ನಡೆಸಲು ಎರಡನೇ ಬಾರಿ ನೋಟಿಸ್ ನೀಡಿದೆ.
    ಕಳೆದ ವಾರ ಸುಮಾರು 3 ಗಂಟೆಗಳ ಕಾಲ ಸೋನಿಯಾ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಅಷ್ಟಕ್ಕೆ ಬಿಡದೆ ಮತ್ತೆ ಸಮನ್ಸ್ ನೀಡಿತ್ತು. ಇದು ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ.
    ಸಂಸತ್ ಅವೇಶನ ನಡೆಯುವಾಗ ಸಂಸದರಿಗೆ ಸಮನ್ಸ್ ನೀಡಿ ವಿಚಾರಣೆ ನಡೆಸುವುದು ಪ್ರಜಾಪ್ರಭುತ್ವಕ್ಕೆ ಅಗೌರವವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
    ನ್ಯಾಷನಲ್ ಹೆರಾಲ್ಡ್ ಪ್ರಕರಣ ಮುಗಿದ ಅಧ್ಯಯವಾಗಿದೆ ಎಂದು ಕೇಂದ್ರ ಸಚಿವರಾಗಿದ್ದ ಬಿಜೆಪಿ ನಾಯಕ ಅರುಣ್ ಜೈಟ್ಲಿ ಸಂಸತ್‍ನಲ್ಲಿ ಹೇಳಿಕೆ ನೀಡಿದ್ದರು. ಅದರ ಹೊರತಾಗಿಯೂ ಬಿಜೆಪಿ ದುರುದ್ದೇಶ ಪೂರಕವಾಗಿ ನೋಟಿಸ್ ನೀಡಿ ಕಾಂಗ್ರೆಸ್ ನಾಯಕರನ್ನು ವಿಚಾರಣೆ ನಡೆಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ. ಈ ಮೊದಲು ರಾಹುಲ್‍ಗಾಂಧಿ ಅವರನ್ನು ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐದು ದಿನ 50 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು.
    ಪದೇ ಪದೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸಿಗರನ್ನು ಮುಜುಗರಕ್ಕೀಡು ಮಾಡುವ ಪ್ರಯತ್ನವನ್ನು ಬಿಜೆಪಿ ನಡೆಸುತ್ತಿದೆ ಎಂದು ಕಾಂಗ್ರೆಸಿಗರು ದೂರಿದ್ದಾರೆ.
    ರಾಹುಲ್‍ಗಾಂಧಿ ವಿಚಾರಣೆ ವೇಳೆ ಕಾಂಗ್ರೆಸಿಗರು ದೆಹಲಿ ಸೇರಿದಂತೆ ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದರು.
    ಈಗ ಸೋನಿಯಾಗಾಂಧಿರನ್ನು ಮೊದಲ ದಿನ ವಿಚಾರಣೆಗೊಳಪಡಿಸಿದಾಗಲೂ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಗಳಿಂದ ದೆಹಲಿಯಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿನಲ್ಲೂ ಕಾಂಗ್ರೆಸಿಗರು ರಾಜಭವನ ಮುತ್ತಿಗೆ ಹಾಕಲು ಯತ್ನಿಸಿದರು. ಮರುದಿನ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.

    Verbattle
    Verbattle
    Verbattle
    News Politics ಇಡಿ ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಕಾರ್ಗಿಲ್ ವಿಜಯೋತ್ಸವ
    Next Article ಕಾಮನ್ ವೆಲ್ತ್ ಗೇಮ್ಸ್ ನಿಂದ ಹೊರಗುಳಿದ ನೀರಜ್
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Fneypy on ವಿಜಯೇಂದ್ರ ಹಠಾವೋ ಹಿಂದೆ ಯಾರಿದ್ದಾರೆ ಗೊತ್ತಾ..
    • about on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.