ಬೆಂಗಳೂರು, ಜು.5-ಹಿರಿಯ ವಕೀಲ ಬಿ.ಡಿ.ಹಿರೇಮಠ ರವರ ಮೇಲೆ ಸುಳ್ಳು ಆರೋಪ ಮಾಡಿ ಜಾತಿ ನಿಂದನೆ (ಆಟ್ರೋಸಿಟಿಸ್ ಕೇಸ್) ದಾಖಲು ಮಾಡಿರುವುದನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಹೋದ ನೂರಾರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಹಿರಿಯ ವಕೀಲ ಬಿ.ಡಿ.ಹಿರೇಮಠ ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ನೂರಾರು ಮಂದಿ ಸೇರಿ ಪ್ರತಿಭಟನೆ ನಡೆಸಿ ಅಲ್ಲಿಂದ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆ ಹೊರಟಿದ್ದು ಮಾರ್ಗ ಮಧ್ಯದಲ್ಲಿ ಅವರನ್ನು ಬಂಧಿಸಿ ಪೊಲೀಸರು ಕರೆದೊಯ್ದರು.
ಇದಕ್ಕೂ ಮುನ್ನ ಪ್ರತಿಭಟನೆಯಲ್ಲಿ ಪಾಲ್ಗೊಂಡ ನೂರಾರು ಮಂದಿ ಕೂಡಲೇ ಆಟ್ರೋಸಿಟಿಸ್ ಕೇಸ್ ವಾಪಸ್ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಕಾನೂನುಬಾಹಿರವಾಗಿ ಬಿ.ಡಿ.ಹಿರೇಮಠ ರವರ ಮೇಲೆ ಸುಳ್ಳು ಆರೋಪ ಮಾಡಿ ‘ಆಟ್ರೋಸಿಟಿಸ್ ಕೇಸ್’ ದಾಖಲಿಸಿರುವುದನ್ನು ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.