ಬೆಂಗಳೂರು.ಜು, 22- ಬಾಗಲಕೋಟೆ ಯ ಭಗವತಿ ಏತ ನೀರಾವರಿ ಯೋಜನೆ ಮತ್ತು ಭಗವತಿ, ಹಳ್ಳೂರು, ಬೇವೂರು ಹಾಗು ಸಂಗಾಪುರ ಕೆರೆಗಳಿಗೆ ಆಲಮಟ್ಟಿ ಅಣೆಕಟ್ಟಿನ ಹಿನ್ನೀರಿನಿಂದ ನೀರನ್ನು ಎತ್ತಿ ತುಂಬಿಸುವ 346 ಕೋಟಿ ರೂಪಾಯಿ ಅಂದಾಜು ಮೊತ್ತದ ಹರಿ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೃಷ್ಣಾ ಮೇಲ್ದಂಡೆ ಯೋಜನೆಗೆ ಹಂಚಿಕೆ ಆಗಿರುವ ಒಟ್ಟಾರೆ 303 ಟಿ.ಎಂ.ಸಿ. ಅಡಿ ನೀರಿನಲ್ಲಿ ಈ ಯೋಜನೆಯ 1.563 ಟಿ.ಎಂ.ಸಿ. ನೀರನ್ನು ಎತ್ತುವಳಿ ಮೂಲಕ ತುಂಬಿಸಲು ಅನುಮೋದನೆ ದೊರೆತಿದೆ ಎಂದು ಹೇಳಿದರು.