ಬೆಂಗಳೂರು,ಜು.6-ನಗರದಲ್ಲಿ ಸಂಭವಿಸುವ ಬೈಕ್ ಅಪಘಾತಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುವುದನ್ನು ಗಂಭೀರವಾಗಿ ಪರಿಗಣಿಸಿ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವುದನ್ನು ನಿಷೇಧಿಸಲಾಗುವುದು ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ, ಏಕೆಂದರೆ ವಿದ್ಯಾರ್ಥಿಗಳು ಇನ್ನೂ ಡಿಎಲ್ ಪಡೆಯಲು ಅರ್ಹತೆ ಇರುವುದಿಲ್ಲ. ಹೀಗಾಗಿ ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಹೇಳಿದ್ದಾರೆ.
ಇನ್ನು ನಗರದಲ್ಲಿ ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಸಿಗುತ್ತಿವೆ. ನಕಲಿ ನಂಬರ್ ವಾಹನಗಳ ಮಾಲೀಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುತ್ತಿದೆ.
ಜೂನ್ ತಿಂಗಳಲ್ಲಿ 22 ವಾಹನ ಸವಾರರು ಮದ್ಯ ಸೇವಿಸಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾರೂ ಮದ್ಯ ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.