ಬೆಂಗಳೂರು : ಜಾತಿ ಜನಗಣತಿಯ (Karnataka Caste Census) ವರದಿ ಸ್ವೀಕಾರದ ವಿಷಯ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ.
ವರದಿಯ ಮೂಲ ಪ್ರತಿ ಕಳೆದುಹೋಗಿದೆ ಎಂಬ ವರದಿ ಇದಕ್ಕೆ ಮತ್ತಷ್ಟು ತುಪ್ಪ ಸುರಿದಿದೆ.
ಇದರ ನಡುವೆ ವಿವಾದಿತ ಕಾಂತರಾಜು ವರದಿ ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿ ತೋರುತ್ತಿರುವುದು ಅನೇಕ ಅನುಮಾನಗಳನ್ನು ಹುಟ್ಟು ಹಾಕುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ವರದಿಯ ಮೂಲಪ್ರತಿ ಕಾಣೆಯಾಗಿದೆ, ಅದಕ್ಕೆ ಕಾರ್ಯದರ್ಶಿ ಸಹಿ ಇಲ್ಲ, ಇದೊಂದು ಅವೈಜ್ಞಾನಿಕ ವರದಿ ಎಂದು ಅನೇಕ ಸಮುದಾಯಗಳು ಆರೋಪಿಸಿವೆ, ಸಚಿವ ಸಂಪುಟದಲ್ಲೇ ಸಹಮತ ಇಲ್ಲ. ಇಂತಹ ಸಂದರ್ಭದಲ್ಲಿ ವಿವಾದಿತ ವರದಿ ಪಡೆಯಲು ಆತುರ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರಕಾರದ ಕೋಟಿಗಟ್ಟಲೇ ಹಣ ಕೊಟ್ಟು ಸಿದ್ಧಪಡಿಸಿದ ವರದಿ ಕಳುವಾಗಲು ಯಾರು ಕಾರಣ? ಅದರ ಹೊಣೆ ಯಾರದ್ದು? ಕಳುವು ಪ್ರಕರಣದ ಬಗ್ಗೆ ಏಕೆ ತನಿಖೆ ನಡೆಸಲಿಲ್ಲ. ಮೂಲ ವರದಿ ಕಳುವಾಗಿದ್ದರೂ ಅದರ ದತ್ತಾಂಶ ಇದೆ ಎಂದು ಪರಿಷ್ಕೃತ ವರದಿ ಸಿದ್ಧಪಡಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಹತ್ತು ವರ್ಷಗಳ ಹಿಂದಿನ ಜನಸಂಖ್ಯೆಗೂ, ಈಗಿನ ಜನಸಂಖ್ಯೆಗೂ ಸಾಕಷ್ಟು ವ್ಯತ್ಯಾಸ ಇದೆ. ಸಾರ್ವಜನಿಕರಿಂದಲೂ ತಮ್ಮ ಮನೆಗಳಿಗೆ ಸಮೀಕ್ಷೆ ನಡೆಸುವವರು ಬಂದಿರಲಿಲ್ಲ ಎಂದು ವ್ಯಾಪಕ ದೂರುಗಳು ಬಂದಿವೆ. ಇಷ್ಟಾದರೂ ವರದಿ ಸ್ವೀಕರಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಆತುರ ತೋರುತ್ತಿರುವುದು ಜನರಲ್ಲಿ ಸಂಶಯವನ್ನು ಹುಟ್ಟು ಹಾಕಿದೆ ಎಂದರು.
ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂಬ ವಿಷಯದಲ್ಲಿ ನಮ್ಮ ಸಹಮತವಿದೆ. ಆದರೆ ಅವೈಜ್ಞಾನಿಕ, ವಿವಾದಿತ ವರದಿ ಆಧರಿಸಿ ಕ್ರಮಕ್ಕೆ ಮುಂದಾದರೆ ನಮ್ಮ ವಿರೋಧವಿದೆ.ಒಂದು ವೇಳೆ ಇವರಿಗೆ ನಿಜವಾಗಿಯೂ ಮೀಸಲು ನೀಡುವ ವಿಷಯದಲ್ಲಿ ಬದ್ಧತೆ ಇದ್ದರೆ ಪಾರದರ್ಶಕವಾಗಿ ಮರು ಸಮೀಕ್ಷೆ ನಡೆಸಲಿ. ವಿರೋಧ ವ್ಯಕ್ತಪಡಿಸಿರುವ ಸ್ವಾಮೀಜಿಗಳು, ಮುಖಂಡರನ್ನು ಕರೆದು ಅಭಿಪ್ರಾಯ ಕೇಳಲಿ ಎಂದು ಆಗ್ರಹಿಸಿದರು.
ನಾಪತ್ತೆ ವಿಷಯ ಗೊತ್ತಿಲ್ಲ:
ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ತಮ್ಮ ನೇತೃತ್ವದ ಆಯೋಗದ ವರದಿ ಸದಸ್ಯ ಕಾರ್ಯದರ್ಶಿ ಅವರ ಬಳಿ ಇದೆ. ಅದನ್ನು ಸದಸ್ಯ ಕಾರ್ಯದರ್ಶಿಯಾದರೂ ಸರ್ಕಾರಕ್ಕೆ ತಲುಪಿಸಬೇಕು ಅಥವಾ ಸರ್ಕಾರವೇ ಪಡೆದುಕೊಳ್ಳಬೇಕು. ಮೂಲ ಪ್ರತಿ ನಾಪತ್ತೆಯಾದ ಬಗ್ಗೆ ತಮಗೆ ಮಾಹಿತಿ ಇಲ್ಲ. ನಾವು ಅವಧಿ ಮುಗಿಯುವ ಮುನ್ನವೇ ಸದಸ್ಯ ಕಾರ್ಯದರ್ಶಿ ಅವರಿಗೆ ವರದಿ ನೀಡಿ ಬಂದಿದ್ದೇವೆ. ಒಳಗಿನ ಮಾಹಿತಿಗಳು ತಮಗೆ ಗೊತ್ತಿಲ್ಲ ಎಂದು ತಿಳಿಸಿದರು.
ಸದಸ್ಯ ಕಾರ್ಯದರ್ಶಿ ಐಎಎಸ್ ಅಧಿಕಾರಿಯಾಗಿದ್ದು, ಆಯೋಗದ ಮುಖ್ಯಸ್ಥರಾಗಿದ್ದರು. ಸಮೀಕ್ಷೆಯ ಕಾರ್ಯತಂಡದ ಸದಸ್ಯರೂ ಆಗಿದ್ದರು. ಅಂತಿಮ ವರದಿಗೆ ಸದಸ್ಯ ಕಾರ್ಯದರ್ಶಿ ಅವರ ಸಹಿ ಇಲ್ಲ ಎಂಬುದು ಸತ್ಯ. ಆದರೆ, ಆಯೋಗದ ಕಾರ್ಯಕಾರಿ ಮಂಡಳಿ ಅಂತಿಮಗೊಂಡಿರುವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂಬ ನಿರ್ಣಯ ಕೈಗೊಂಡಿತ್ತು. ಅದಕ್ಕೆ ಸದಸ್ಯ ಕಾರ್ಯದರ್ಶಿ ಸಹಿ ಹಾಕಿದ್ದರು ಎಂದು ಹೇಳಿದರು.
ಸಮೀಕ್ಷೆ ನಡೆದು 8 ವರ್ಷಗಳಾಗಿದ್ದರೂ ಪ್ರಸ್ತುತ ಜಾರಿಗೊಳಿಸುವುದು ಸರಿಯಲ್ಲ ಎಂಬ ಆಕ್ಷೇಪಗಳು ಕೇಳಿ ಬರುತ್ತಿವೆ. ಸುಪ್ರೀಂಕೋರ್ಟ್‍ನ ತೀರ್ಪಿನ ಪ್ರಕಾರ 10 ವರ್ಷಗಳ ವರೆಗೂ ಯಾವುದೇ ಆಯೋಗದ ವರದಿಯನ್ನು ಜಾರಿಗೊಳಿಸುವ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದಲ್ಲಿ ನಡೆದಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಯಾಗಲು ಎಲ್ಲಾ ಅರ್ಹತೆಗಳನ್ನು ಹೊಂದಿದೆ ಎಂದು ತಿಳಿಸಿದರು.
ವರದಿಯನ್ನು ಇನ್ನೂ ಯಾರೂ ನೋಡಿಲ್ಲ. ಅದಕ್ಕೂ ಮುನ್ನವೇ ಅದು ಅವೈಜ್ಞಾನಿಕ, ಹಳೆಯದು ಎಂಬೆಲ್ಲಾ ಅಭಿಪ್ರಾಯಗಳು ಅಪ್ರಸ್ತುತ.ತಳ ಹಾಗೂ ಅವಕಾಶ ವಂಚಿತ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂಬ ಉದ್ದೇಶದಿಂದ 2013ರಲ್ಲಿ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ ನಡೆಸಲು ನಿರ್ಧರಿಸಿತ್ತು. ಅದರಂತೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಾಗಿದೆ. 55 ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಳ್ಳಲಾಗಿದೆ. ಇದನ್ನು ಜಾತಿ ಜನಗಣತಿ ಎಂದು ಬಿಂಬಿಸುವುದು ಸರಿಯಲ್ಲ ಎಂದು ಪ್ರತಿಪಾದಿಸಿದರು.
ಸಿಎಂ ಸ್ಪಷ್ಟನೆ:
ಎಲ್ಲಾ ಗೊಂದಲಗಳ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ ಊಹೆಗಳ ಮೇಲೆ ಮತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು
ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೇಳಿಕೆ ಬಗ್ಗೆ ಮಾತನಾಡಿ, ಅವರನ್ನು ಕರೆದು ಮಾತನಾಡುತ್ತೇನೆ ಎಂದರು.
4 Comments
индийский пасьянс гадать онлайн индийский пасьянс гадать онлайн .
электрокарниз цена электрокарниз цена .
вывод из запоя недорого вывод из запоя недорого .
заказать семена наложенным платежом https://semenaplus74.ru .