ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಸೋಂಕು ತಗುಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ