ಬೆಂಗಳೂರು – ಕಾಂಗ್ರೆಸ್ ಪಕ್ಷ ವಿಧಾನಸಭೆ Electionಗೆ ಮುನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿ ಭರವಸೆಗಳು (Congress Guarantee Schemes) ಇದೀಗ ಯೋಜನೆಗಳ ಮೂಲಕ ಅನುಷ್ಠಾನಕ್ಕೆ ಬಂದಿವೆ.ಆರು ತಿಂಗಳ ಅವಧಿಯಲ್ಲಿ ಇವುಗಳ ಸಾಧನೆ ಮುಖ್ಯಮಂತ್ರಿಗಳಿಗೆ ಅತೀವ ಹರ್ಷ ತಂದಿದೆ.
ಶಕ್ತಿ ಯೋಜನೆ
ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ ಏಪ್ರಿಲ್ 2023 ರಲ್ಲಿ 84.17 ಲಕ್ಷ ದಿಂದ ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಅನ್ನಭಾಗ್ಯ
ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ.
7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಯಿತು. ಡಿಸೆಂಬರ್ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು
ಗೃಹ ಜ್ಯೋತಿ
ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್ ನಿಂದ ಈ ವರೆಗೆ 2900 ಕೋಟಿ ರೂ. ಭರಿಸಲಾಗಿದೆ.
ಗೃಹ ಜ್ಯೋತಿ ಯೋಜನೆಯಡಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳು ಇಲಾಖೆಯ ದತ್ತಾಂಶದಲ್ಲಿಯೇ ಗೃಹ ಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗಬಾರದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು*
ಗೃಹಲಕ್ಷ್ಮಿ ಯೋಜನೆ
ನವೆಂಬರ್ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ. ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಲು ಸೂಚಿಸಿದರು.
ಡಿಸೆಂಬರ್ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರಿ ಪಡಿಸಲು ಸೂಚಿಸಿದರು.
ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
7 Comments
виагра москва [url=http://viagramsk.org]виагра москва[/url] .
Раскраски для детей онлайн Раскраски для детей онлайн .
оценка труда соут [url=https://sout213.ru/]оценка труда соут[/url] .
лучшие игровые автоматы лучшие игровые автоматы .
Привет, друзья!
Приобретение официального диплома через надежную фирму дарит множество преимуществ. Это решение позволяет сберечь как дорогое время, так и значительные денежные средства. Однако, на этом выгоды не ограничиваются, плюсов намного больше.Мы можем предложить дипломы психологов, юристов, экономистов и любых других профессий. Дипломы производят на оригинальных бланках государственного образца. Доступная цена сравнительно с большими затратами на обучение и проживание. Приобретение диплома об образовании из российского университета будет выгодным шагом.
Заказать диплом о высшем образовании: rant.li/diplomygroup/kupit-attestat
Мы предлагаем дипломы любой профессии по выгодным тарифам. — flashboot.ru/profile/diplomygroup
seo продвижение в интернете москва seo продвижение в интернете москва .