ತುಮಕೂರು: ತ್ರಿವರ್ಣ ಧ್ವಜಕ್ಕಿಂತ ಮೇಲೆ ಕೇಸರಿ ಧ್ವಜ ಹಾರಿಸಿದ ಆರೋಪದಡಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ತವರಿನಲ್ಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಬುಧವಾರ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಅಂಗವಾಗಿ ಸಾವಿರ ಮಕ್ಕಳು ಪಾಲ್ಗೊಂಡಿದ್ದರು. ಈ ವೇಳೆ 180 ಅಡಿ ಉದ್ದದ ತಿರಂಗ ಯಾತ್ರೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪಾಲ್ಗೊಂಡಿದ್ದರು. ಈ ತಿರಂಗ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಮೇಲೆ ಕೇಸರಿ ಧ್ವಜ ಹಾರಾಟ ಮಾಡಲಾಗಿತ್ತು. ಇದು ರಾಷ್ಟ್ರದ್ರೋಹಕ್ಕೆ ಸಮಾನಾದ ಅಪರಾಧವಾಗಿದೆ. ಶಾಲಾ ಮಕ್ಕಳನ್ನು ಇಂತಹ ದೇಶವಿರೋಧಿ ಚಟುವಟಿಕೆಗಳಿಗೆ ಬಳಸಿಕೊಂಡಿರುವುದು ದುರ್ದೈವದ ಸಂಗತಿ. ಹಾಗಾಗಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ವಿ ಹರಿಪ್ರಸಾದ್ ತಿಪಟೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

