ಬೆಂಗಳೂರು : ದಕ್ಷಿಣ ಕನ್ನಡದಲ್ಲಿ ಮತ್ತೆ ನೆತ್ತರು ಹರಿದಿದೆ. ಮಂಗಳವಾರ ರಾತ್ರಿ ಹತ್ಯೆಯಾಗಿದ್ದ ಪ್ರವೀಣ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದ ವೇಳೆಯೇ ಮತ್ತೊಂದು ಹತ್ಯೆ ನಡೆದಿದೆ.
ಸುರತ್ಕಲ್ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಝಿಲ್ ಎಂಬುವವರು, ರಾತ್ರಿ 8 ಗಂಟೆಯ ಸುಮಾರಿಗೆ ಎಂಆರ್‌ಪಿಎಲ್ ರಸ್ತೆಯ ಸುರತ್ಕಲ್ ಮಾರುಕಟ್ಟೆ ಸನಿಹದ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಫಾಝಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಫಾಝಿಲ್ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು.
ಇದರಿಂದ ಮಂಗಳೂರು ಹೊರವಲಯದ ಸುರತ್ಕಲ್ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು ಈ ಹಿನ್ನೆಲೆಯಲ್ಲಿ ಶುಕ್ರವಾರ (ಜು.29) ಪಣಂಬೂರು, ಮೂಲ್ಕಿ, ಬಜಪೆ, ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Previous Articleಬಿಬಿಎಂಪಿ ಚುನಾವಣೆ: ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಿ…
Next Article ವಿಕ್ರಾಂತ್ ರೋಣ ಪ್ರದರ್ಶನ ವೇಳೆ ಮಾರಾಮಾರಿ: ಓರ್ವನಿಗೆ ಗಾಯ