Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಕ್ಷಿಣ ಕನ್ನಡ ಉದ್ವಿಗ್ನ ಕಲ್ಲುತೂರಾಟ
    ಸುದ್ದಿ

    ದಕ್ಷಿಣ ಕನ್ನಡ ಉದ್ವಿಗ್ನ ಕಲ್ಲುತೂರಾಟ

    vartha chakraBy vartha chakraJuly 27, 2022Updated:July 27, 2022No Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ದಕ್ಷಿಣ ಕನ್ನಡ,ಜು.27-ಕರಾವಳಿಯಲ್ಲಿ ಮತ್ತೆ ಉದ್ವಿಗ್ನತೆಯ ಕಾರ್ಮೋಡ ಕವಿದಿದ್ದು ಆತಂಕಕ್ಕೆ ಕಾರಣವಾಗಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಭೀಕರ ಕೊಲೆ‌ಯಿಂದ ಮಂಗಳೂರು ಭಾಗದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.
    ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31)ನನ್ನು ನಿನ್ನೆ ರಾತ್ರಿ ಕೊಲೆಗೈದ ಘಟನೆಯು ಕಾಡ್ಗಿಚ್ಚಿನಂತೆ ಹರಡಿ ಅಲ್ಲಲ್ಲಿ ಪ್ರತಿಭಟನೆ ಬಂದ್ ಆಚರಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
    ಪರಿಸ್ಥಿತಿ ಉದ್ವಿಗ್ನವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾದ್ಯಂತ ಎರಡು ದಿನಗಳ‌ ಕಾಲ‌ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
    ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಿ 5ಕ್ಕಿಂತ ಹೆಚ್ಚು ಮಂದಿ ಗುಂಪು ಸೇರದಂತೆ ನಿಗಾ ವಹಿಸಲಾಗಿದೆ.
    ಕಡಬದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರಿ ಶಾಲಾ -ಕಾಲೇಜು​ಗಳಿಗೆ ರಜೆ ನೀಡಲಾಗಿದ್ದರೆ.
    ಪುತ್ತೂರಿನ ವಿವೇಕಾನಂದ, ಅಂಬಿಕಾ ಶಿಕ್ಷಣ ಸಂಸ್ಥೆಗಳು ಸೇರಿ ಇತರ ಖಾಸಗಿ ಶಾಲೆಗಳು ರಜೆ ಘೋಷಿಸಿವೆ.
    ಜಿಲ್ಲೆಯ ಸುಳ್ಳ, ಕಡಬ ಹಾಗು ಪುತ್ತೂರು ತಾಲುಕುಗಳಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು ಮುನ್ನೆಚ್ಚರಿಕೆ ಕ್ರಮವಾಗಿ
    ಮಂಗಳೂರು, ಉಡುಪಿಯಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
    ಭದ್ರತೆಯ ನಡುವೆಯೂ ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ಪುತ್ತೂರಿನ ಬೊಳುವಾರಿನಲ್ಲಿ ಸರ್ಕಾರಿ ಬಸ್​ವೊಂದರ ಕಲ್ಲು ತೂರಾಟ ನಡೆಸಲಾಗಿದೆ. ಮಂಗಳೂರಿಗೆ ಹೋಗುತ್ತಿದ್ದ ಬಸ್​ ಮೇಲೆ ಕೆಲ ಯುವಕರು ಕಲ್ಲೆಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಈ ನಡುವೆ ನೆಟ್ಟಾರು ಕೊಲೆ ಖಂಡಿಸಿ ಜಿಲ್ಲೆಯ ಹಲವೆಡೆ ಪ್ರತಿಭಟನೆ ನಡೆಸಲು ಮುಂದಾಗಿದ್ದವರನ್ನು ತಡೆಯಲಾಗಿದ್ದು, ಪೊಲೀಸರು ಗುಂಪು ಸೇರದಂತೆ ನಿಗಾ‌ ವಹಿಸಿದ್ದಾರೆ.
    ಬೆಳ್ಳಾರೆಯಲ್ಲಿ ಬೂದಿ ಮುಚ್ಚಿದ ಕೆಂಡದಂಥ ಪರಿಸ್ಥಿತಿಯಿದ್ದು ಒಂದೇ ವಾರದ ಅವಧಿಯಲ್ಲಿ ಬೆಳ್ಳಾರೆ ಎರಡು ಕೊಲೆಗೆ ಸಾಕ್ಷಿಯಾದಂತೆ ಆಗಿದೆ. ಪ್ರವೀಣ್ ಹತ್ಯೆ ನಡೆದ ಸ್ಥಳವನ್ನು ಪೊಲೀಸರು ಕಾವಲು ಕಾಯುತ್ತಿದ್ದು, ವಿಧಿವಿಜ್ಞಾನ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.
    ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿನ್ನೆ ರಾತ್ರಿ ಸ್ಥಳಕ್ಕೆ ಆಗಮಿಸುವ ತನಕವೂ ಮೃತದೇಹವನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಆಸ್ಪತ್ರೆ ಮುಂಭಾಗ ನೆರೆದಿದ್ದ ಸಂಬಂಧಿಕರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ.
    ತಡರಾತ್ರಿ 1.30 ರ ಸುಮಾರಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆಗಮಿಸಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು. ದುಷ್ಕೃತ್ಯ ಎಸಗಿದವರನ್ನು ಬಂಧಿಸಿ ಕಠಿಣ ಶಿಕ್ಷೆ ಕೊಡಿಸಲಾಗುವುದು. ಈಗಾಗಲೇ ಪೊಲೀಸ್ ಇಲಾಖೆ ತನಿಖೆಯಲ್ಲಿ ತೊಡಗಿದೆ.
    ಜಿಲ್ಲಾಧಿಕಾರಿ ಮನವಿ:
    ಮೃತರ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ನೀಡಬೇಕೆಂಬ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದರು.
    ಜಿಲ್ಲಾಧಿಕಾರಿ ನೀಡಿದ ಭರವಸೆಯ ಬಳಿಕ ಪ್ರತಿಭಟನೆ ಹಿಂತೆಗೆದುಕೊಂಡರು. ಪ್ರವೀಣ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಸಿದ ಬಳಿಕ‌ ಮೆರವಣಿಗೆಯಲ್ಲಿ ಇಂದು ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ದು ಮನೆಯ ಬಳಿಯಲ್ಲಿಯೇ ಅಂತ್ಯಕ್ರಿಯೆ ನಡೆಸಲಾಯಿತು.
    15 ಮಂದಿ ವಿಚಾರಣೆ:
    ಈ‌ ಮಧ್ಯೆ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಶಂಕಿತರು ಸೇರಿದಂತೆ 15ಮಂದಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ
    ಸ್ಥಳೀಯನೊಬ್ಬ ಪ್ರವೀಣ್ ಚಲನವಲನದ ಬಗ್ಗೆ ಮಾಹಿತಿ ನೀಡಿದ್ದಾನೆ. ಒಟ್ಟಿನಲ್ಲಿ ಸ್ಥಳೀಯರೊಬ್ಬರ ಸಹಾಯದಿಂದ ಹತ್ಯೆಯಾಗಿದೆ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ ಸ್ಥಳೀಯ ಪೊಲೀಸರು ಒಟ್ಟಾರೆ 15ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
    ಶಂಕಿತರ ಮಾಹಿತಿಯ ಬಳಿಕ ಹತ್ಯೆ ಮಾಡಿದವರು ಸ್ಥಳೀಯರು ಎಂದು ತಿಳಿದುಬಂದಿದ್ದು, ಬೇರೆ ರಾಜ್ಯದಿಂದ ಬಂದವರಾ ಅನ್ನೋದನ್ನು ತಿಳಿಯಬೇಕಿದೆ. ಒಬ್ಬ ಮಾತ್ರ ಸ್ಥಳೀಯವಾಗಿ ಸಹಾಯ ಮಾಡಿದ್ದು ದೃಢವಾಗಿದೆ.
    ಬೆದರಿಕೆ ಕರೆ:
    ಪ್ರವೀಣ್ ಗೆ ಬೆದರಿಕೆ ಕರೆಯೂ ಬಂದಿರುವ ಬಗ್ಗೆ ಮಾಹಿತಿ ಇದೆ. ಹತ್ಯೆಗೂ ಮೂರು ದಿನದಿಂದ ಬೆದರಿಕೆ ಕರೆ ಬಂದಿದೆ ಎಂದಿದ್ದಾರೆ. ಆದರೆ ಬೆದರಿಕೆ ಕರೆಯ ಬಗ್ಗೆ ಪ್ರವೀಣ್ ಪೊಲೀಸರಿಗೆ ದೂರು ಕೊಟ್ಟಿಲ್ಲ. ಸ್ನೇಹಿತರ ಮಾಹಿತಿಯ ಮೇರೆಗೆ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
    ವಿಶೇಷ ತಂಡ ರಚನೆ:
    ನೆಟ್ಟಾರು ಭೀಕರ ಕೊಲೆ ಪ್ರಕರಣದ ಹಂತಕರ ಪತ್ತೆಗೆ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳ ಬೆನ್ನು ಹತ್ತಿ ಕೇರಳ, ಮಡಿಕೇರಿ, ಹಾಸನಕ್ಕೆ ಪೊಲೀಸರು ಮೂರು ತಂಡಗಳು ತೆರಳಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರುಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ.
    ಪ್ರಕರಣದ ಹಿನ್ನೆಲೆ:
    ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದಾಗ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
    ತಕ್ಷಣವೇ ಸ್ಥಳೀಯರು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.
    ಕೇವಲ ಮೂರು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಪ್ರವೀಣ್ ಹಲವು ಹಿಂದುತ್ವಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು.
    ಪ್ರತಿಕಾರದ ಕೊಲೆ:
    ಕೆಲ ದಿನಗಳ ಹಿಂದಷ್ಟೇ ಬೆಳ್ಳಾರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾಸರಗೋಡು ನಿವಾಸಿ ಮಸೂದ್ ಎಂಬಾತನ ಕೊಲೆಯಾಗಿತ್ತು. ಮಸೂದ್ ಮೇಲೆ ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಎನ್ನುವವರು ಹಲ್ಲೆ ಮಾಡಿದ್ದರು. ಜುಲೈ 19ರಂದು ಸುಧೀರ್ ಎಂಬಾತನಿಗೆ ಮಸೂದ್ ಕೈ ತಾಗಿದ ಕಾರಣ ಉಂಟಾದ ಗಲಾಟೆ ಮಸೂದ್ ಸಾವಿನಲ್ಲಿ ಪರ್ಯಾಸನಗೊಂಡಿತ್ತು.
    ಬಾಟಲಿಯಿಂದ ತಲೆಗೆ ಏಟು ಬಿದ್ದಿದ್ದ ಮಸೂದ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದ. ಈ ಸಾವಿಗೆ ಪ್ರತೀಕಾರವಾಗಿ ಬಿಜೆಪಿ ಮುಖಂಡನ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

    News praveen nettaru murder ಉಡುಪಿ ಕೊಲೆ ಮದುವೆ ಶಾಲೆ ಶಿಕ್ಷಣ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleನವರಸಗಳನ್ನಾಧರಿಸಿದ 9 ಸುಳ್ಳು ಕಥೆಗಳು!
    Next Article ರ‍್ಯಾಗಿಂಗ್‌: ದಿಂಬಿನೊಂದಿಗೆ ಲೈಂಗಿಕ ಚಟುವಟಿಕೆ ನಡೆಸಲು ಬಲವಂತ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts on ವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    • Ralphhow on ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    • Briancaugs on ಬಾಟಲಿ ನೀರು ಸುರಕ್ಷಿತವಲ್ಲ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe