ಆಗಸ್ಟ್ 26ಕ್ಕೆ ರಾಮ್ ಕುಮಾರ್ ಪುತ್ರ ಧೀರೇನ್ ರಾಮ್ ಕುಮಾರ್ ಅಭಿನಯದ ಚೊಚ್ಚಲ ಚಿತ್ರ ಶಿವ 143 ಬೆಳ್ಳಿತೆರೆಗೆ ಲಗ್ಗೆ ಇಡಲಿದೆ. ಈ ಮೂಲಕ ಸ್ಯಾಂಡಲ್ ವುಡ್ ಗೆ ಮತ್ತೊಬ್ಬ ನಾಯಕ ನಟನ ಗ್ರ್ಯಾಂಡ್ ಎಂಟ್ರಿ ಆಗಲಿದೆ. ಇದಾಗಲೇ ಧೀರೇನ್ ಹಾಗು ಮಾನ್ವಿತಾ ಕಾಮತ್ ಅಭಿನಯದ ‘ಶಿವ 143′ ಚಿತ್ರದ ಟ್ರೈಲರ್ ಬಿಡುಗಡೆ ಆಗಿ ಮೆಚ್ಚುಗೆ ಗಳಿಸಿದೆ ‘ಶಿವ 143′ ಚಿತ್ರಕ್ಕೆ ಅನಿಲ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಜಯಣ್ಣ, ಭೋಗೇಂದ್ರ ಮತ್ತು ಡಾ. ಸೂರಿ ಬಂಡವಾಳ ಹೂಡಿದ್ದಾರೆ.ಬಹಳ ಹಿಂದೆಯೇ ಸೆಟ್ಟೇರಿದ್ದ ‘ಶಿವ 143’ ಚಿತ್ರ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾದ ಕೆಲಸಗಳು ವಿಳಂಬ ಆಗಿದ್ದವು. ಇದೀಗ ಅಂತಿಮವಾಗಿ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದೆ.