Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ Congressಗೆ ಸರಳ ಬಹುಮತ. Hyderabad ಮೂಲದ ಸಂಸ್ಥೆಯ ಸಮೀಕ್ಷೆ.
    ಸುದ್ದಿ

    ರಾಜ್ಯದಲ್ಲಿ Congressಗೆ ಸರಳ ಬಹುಮತ. Hyderabad ಮೂಲದ ಸಂಸ್ಥೆಯ ಸಮೀಕ್ಷೆ.

    vartha chakraBy vartha chakraJanuary 24, 2023Updated:January 24, 2023No Comments4 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ವೇದಿಕೆ ಸಜ್ಜುಗೊಂಡಿಲ್ಲ‌.ಆದರೆ ಈಗಾಗಲೇ ಚುನಾವಣೆ ಜ್ವರ ತೀವ್ರಗೊಂಡಿದೆ.ಈ ಬಾರಿ ರಾಜ್ಯದ ಅಧಿಕಾರ ಗದ್ದುಗೆ ಯಾರ ಪಾಲಾಗಲಿದೆ? ಮುಖ್ಯಮಂತ್ರಿ ಯಾರಾಗಲಿದ್ದಾರೆ? ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಲಭ್ಯವಾಗಲಿವೆ? ಯಾವ ಪ್ರದೇಶದಲ್ಲಿ ಯಾರಿಗೆ ಹೆಚ್ಚು ಒಲವು? ಎಂಬ ಬಗ್ಗೆ ಕೇವಲ ರಾಜಕೀಯ ಪಕ್ಷಗಳು ಮಾತ್ರವಲ್ಲ, ರಾಜಕೀಯದ ಬಗ್ಗೆ ಆಸಕ್ತಿಯಿರುವ ಜನ ಸಾಮಾನ್ಯರ ಚರ್ಚೆಯ ಪ್ರಮುಖ ವಿಷಯವಾಗಿದೆ.
    ರಾಜಕೀಯ ಪಕ್ಷಗಳು, ಚುನಾವಣೆಯಲ್ಲಿ ತಮ್ಮ ಪಕ್ಷದ ಸಾಧ್ಯತೆಗಳೇನು? ಯಾವ ಪ್ರದೇಶ ತಮಗೆ ಅನುಕೂಲಕರ? ಎಲ್ಲಿ ಹಿನ್ನಡೆಯಿದೆ? ಇದನ್ನು ಯಾವ ರೀತಿ ಸರಿಪಡಿಸಿಕೊಳ್ಳಬೇಕು ಎಂಬ ಬಗ್ಗೆ ಖಾಸಗಿಯಾಗಿ ಸಮೀಕ್ಷೆ ಮಾಡಿಸಿಕೊಂಡು ಅದರನ್ವಯ ಚುನಾವಣೆಗೆ ಸಿದ್ಧತೆಗಳನ್ನು ನಡೆಸುತ್ತಿವೆ.

    ಈ ನಡುವೆ ಹಲವು ಚುನಾವಣಾ ತಜ್ಞ ಸಂಸ್ಥೆಗಳು ರಾಜ್ಯದಲ್ಲಿ ಸಮೀಕ್ಷೆ ಮಾಡಿ ತಮ್ಮದೇ ಆದ ಫಲಿತಾಂಶ ನೀಡುತ್ತಿವೆ. ಮುಂಬರುವ ಲೋಕಸಭಾ ಚುನಾವಣೆಗೆ ಒಂದು ರೀತಿಯಲ್ಲಿ ಸೆಮಿಫೈನಲ್ ರೀತಿಯಲ್ಲಿರುವ ಕರ್ನಾಟಕದ ವಿಧಾನಸಭೆ ಚುನಾವಣೆ ಎಲ್ಲಾ ಪಕ್ಷಗಳಿಗೂ ತೀವ್ರ ಪ್ರತಿಷ್ಠೆಯ ವಿಷಯವಾಗಿದೆ.
    ಮೂರನೆ ಬಾರಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿರುವ ಬಿಜೆಪಿಗೆ ಇದೊಂದು ಪ್ರಯೋಗಶಾಲೆಯಾಗಿದೆ.ಪ್ರಧಾನಿ ಮೋದಿಯವರ ಜನಪ್ರಿಯತೆ, ಅಭಿವೃದ್ಧಿ ಮತ್ತು ಭಾವನಾತ್ಮಕ ವಿಷಯ ಮೂರೂ ಅಂಶಗಳನ್ನು ಪ್ರಯೋಗ ಮಾಡಲು ಸಿದ್ಧತೆ ನಡೆಸಿರುವ ಕಮಲ ಪಡೆ ತನಗೆ ಯಾವ ಅಂಶ ಅನುಕೂಲಕರ ಎಂಬುದನ್ನು ಈ ಚುನಾವಣೆ ಮೂಲಕ ಖಚಿತ ಪಡಿಸಿಕೊಂಡು ಅದರ ಆಧಾರದಲ್ಲಿ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಲಿದೆ.

    ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಗುಜರಾತ್ ಮತ್ತು ಉತ್ತರ ಪ್ರದೇಶ ಹೊರತುಪಡಿಸಿ ಬೇರೆ ಯಾವುದೇ ರಾಜ್ಯದಲ್ಲಿ ಬಿಜೆಪಿ ತನ್ನದೇ ಸ್ವಂತ ಬಲದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ಕರ್ನಾಟಕದಲ್ಲಿ ಚುನಾವಣೆ ಗೆಲ್ಲಲೇಬೇಕು ಎಂಬ ಹಟ ತೊಟ್ಟಿದೆ. ಅದೇ ರೀತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ಗೆ ಕರ್ನಾಟಕದ ಚುನಾವಣೆ ಒಂದು ಅವಕಾಶ. ಪಕ್ಷದ ಪುನಃಶ್ಚೇತನಕ್ಕೆ ರಾಹುಲ್ ಗಾಂಧಿ ನಡೆಸಿದ‌ ಭಾರತ್ ಜೋಡೋ‌ ಯಾತ್ರೆಯ ಫಲಿತಾಂಶ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆಯ ಲಾಭ ಹೇಗೆ ಪಡೆಯಬೇಕು ಎಂಬ ಲೆಕ್ಕಾಚಾರದಲ್ಲಿದೆ.

    ಇನ್ನು ಜೆಡಿಎಸ್, ನೆರೆಯ ತೆಲಂಗಾಣದ ಬಿಆರ್‌ಎಸ್ ನೆರವಿನಲ್ಲಿ ತೃತೀಯ ರಂಗದ ಕನಸು ಕಾಣುತ್ತಿದೆ.

    ಈ ಲೆಕ್ಕಾಚಾರದ ನಡುವೆ ಹೈದರಾಬಾದ್ ಮೂಲದ ರಾಜಕೀಯ ಪರಿಣತ ಸಂಸ್ಥೆ ನಡೆಸಿದ ಕ್ಷೇತ್ರಾವಾರು ಚುನಾವಣಾ ಪೂರ್ವ ಸಮೀಕ್ಷೆಯ ವಿವರ ಬಿಡುಗಡೆಯಾಗಿದೆ.
    ಇದರನ್ವಯ ಕಾಂಗ್ರೆಸ್ ಆಡಳಿತ ವಿರೋಧಿ ಅಲೆಯನ್ನು ಯಶಸ್ವಿಯಾಗಿ ಬಳಸಿಕೊಂಡು ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಒಟ್ಟಾರೆ ಕಾಂಗ್ರೆಸ್ ಗೆ ಶೇಕಡಾ 40ರಷ್ಟು ಮತ ಲಭ್ಯವಾಗಲಿದ್ದು,ಬಿಜೆಪಿ ಶೇಕಡಾ 34 ರಷ್ಟು ಮತಗಳಿಸಲಿದ್ದರೆ, ಜೆಡಿಎಸ್ ಶೇಕಡಾ 17 ರಷ್ಟು ಮತ ಗಳಿಸಲಿದೆ ಎಂದು ಹೇಳಿದೆ.
    ಪಕ್ಷೇತರರು ಶೇಕಡಾ 6 ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.
    ಹಳೇ ಮೈಸೂರು ಪ್ರದೇಶದ ಒಟ್ಟು 66 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 24-25 ಸ್ಥಾನ ಗಳಿಸಿದರೆ, ಇಲ್ಲಿ ಜೆಡಿಎಸ್ 21-21 ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಎರಡನೇ ಸ್ಥಾನಗಳಿಸಲಿದೆ. ಬಿಜೆಪಿ ಸಾಕಷ್ಟು ಬೆವರು ಹರಿಸಿದರೂ ಪ್ರಯೋಜನವಾಗಿಲ್ಲ. ಮತಗಳಿಕೆ ಪ್ರಮಾಣ ಹೆಚ್ಚಳವಾಗಿದೆ. ಆದರೆ ಇದು ಅಭ್ಯರ್ಥಿ ಆಯ್ಕೆಗೆ ಸಹಕಾರಿಯಾಗಿಲ್ಲ ಎಂದು ಹೇಳಿದೆ. ಒಟ್ಟಾರೆ ಬಿಜೆಪಿ ಇಲ್ಲಿ‌ 10 ರಿಂದ14 ಸ್ಥಾನಗಳಿಸಲಿದ್ದು, ಎರಡು ಕ್ಷೇತ್ರಗಳಲ್ಲಿ ನೇರಾ ನೇರ ಹಣಾಹಣಿಯಿದ್ದು, ಫಲಿತಾಂಶ ಏನು ಬೇಕಾದರೂ ಆಗಬಹುದು ಎಂದು ಹೇಳಿದೆ.
    ರಾಜಧಾನಿ ಬೆಂಗಳೂರಿನ 28 ಕ್ಷೇತ್ರಗಳ ಪೈಕಿ ಬಿಜೆಪಿ 9 ರಿಂದ10 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು, ಕಾಂಗ್ರೆಸ್ 13 ರಿಂದ 14 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಜೆಡಿಎಸ್ 1 ರಿಂದ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಒಂದು ಕ್ಷೇತ್ರದಲ್ಲಿ ಪಕ್ಷೇತರರು ಗೆಲುವು ಸಾಧಿಸಲಿದ್ದು, ಇನ್ನೆರಡು ಕ್ಷೇತ್ರದಲ್ಲಿ ಫಲಿತಾಂಶ ಏನು ಬೇಕಾದರೂ ಆಗಲಿದೆ ಎಂದು ಅಂದಾಜಿಸಿದೆ.
    ಮುಂಬೈ ಕರ್ನಾಟಕ ಬಿಜೆಪಿಯ ಭದ್ರಕೋಟೆ. ಕಳೆದ ಬಾರಿ ಇಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳಿಸಿತ್ತು. ಆದರೆ ಈ ಬಾರಿ ಈ ಭದ್ರಕೋಟೆಗೆ ತೂತು ಬೀಳುವ ಸಾಧ್ಯತೆಯಿದೆ ಒಟ್ಟು 44 ಕ್ಷೇತ್ರಗಳ ಪೈಕಿ ಬಿಜೆಪಿ 14 ರಿಂದ 16 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು, ಕಾಂಗ್ರೆಸ್ 27 ರಿಂದ 28 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಜೆಡಿಎಸ್ 1 ರಿಂದ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಒಂದು ಕ್ಷೇತ್ರದಲ್ಲಿ ಪಕ್ಷೇತರರು ಗೆಲುವು ಸಾಧಿಸಲಿದ್ದು, ಇನ್ನೆರಡು ಕ್ಷೇತ್ರಗಳಲ್ಲಿ ಫಲಿತಾಂಶ ಏನು ಬೇಕಾದರೂ ಆಗಲಿದೆ ಎಂದು ಅಂದಾಜಿಸಿದೆ.
    ಹೈದರಬಾದ್ ಕರ್ನಾಟಕ ಒಂದು ರೀತಿಯಲ್ಲಿ ಕಾಂಗ್ರೆಸ್ ನ ಭದ್ರಕೋಟೆ ಎನ್ನಬಹುದು ಆದರೂ ಸರಿ ಸುಮಾರು ಕಳೆದ ಬಾರಿಯ ಫಲಿತಾಂಶ ಮರುಕಳಿಸುವಂತಿದೆ. ಆಡಳಿತ ವಿರೋಧಿ ಅಲೆಯಿದ್ದರೂ ಇಲ್ಲಿ ಬಿಜೆಪಿ ಕಳೆದ ಬಾರಿ ಗಳಿಸಿದ ಸ್ಥಾನಗಳನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಒಟ್ಟು 40 ಕ್ಷೇತ್ರಗಳ ಪೈಕಿ ಬಿಜೆಪಿ 12 ರಿಂದ14 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು, ಕಾಂಗ್ರೆಸ್ 21 ರಿಂದ 22 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಜೆಡಿಎಸ್ 1 ರಿಂದ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. 3 ಕ್ಷೇತ್ರದಲ್ಲಿ ಪಕ್ಷೇತರರು ಗೆಲುವು ಸಾಧಿಸಲಿದ್ದು, ಇನ್ನೆರಡು ಕ್ಷೇತ್ರಗಳಲ್ಲಿ ಫಲಿತಾಂಶ ಏನು ಬೇಕಾದರೂ ಆಗಲಿದೆ ಎಂದು ಅಂದಾಜಿಸಿದೆ.
    ಕೇಂದ್ರ ಕರ್ನಾಟಕದ ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗದಲ್ಲಿ ಮಿಶ್ರ ಅಭಿಪ್ರಾಯ ವ್ಯಕ್ತವಾಗುತ್ತಿದೆ.ಕಳೆದ ಬಾರಿ ಬಿಜೆಪಿ ಇಲ್ಲಿ ಹೆಚ್ಚಿನ ಸ್ಥಾನ ಗಳಿಸಿತ್ತು. ಈ ಬಾರಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಲಿದೆಯಾದರೂ ಬಿಜೆಪಿ ಕೂಡ ಉತ್ತಮ ಸ್ಪರ್ಧೆ ನೀಡುತ್ತಿದೆ. ಇಲ್ಲಿನ ಒಟ್ಟು 27 ಕ್ಷೇತ್ರಗಳ ಪೈಕಿ ಬಿಜೆಪಿ 8 ರಿಂದ 9 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು, ಕಾಂಗ್ರೆಸ್ 16 ರಿಂದ 17 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಜೆಡಿಎಸ್ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. 2 ಕ್ಷೇತ್ರದಲ್ಲಿ ಪಕ್ಷೇತರರು ಗೆಲುವು ಸಾಧಿಸಲಿದ್ದು, ಇನ್ನೊಂದು ಕ್ಷೇತ್ರದಲ್ಲಿ ಫಲಿತಾಂಶ ಏನು ಬೇಕಾದರೂ ಆಗಲಿದೆ ಎಂದು ವಿವರಿಸಿದೆ.
    ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಮುಂದುವರೆಸಲಿದೆ. ಇಲ್ಲಿ ರಾಜ್ಯ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆಗಿಂತ ಕೋಮು ಧೃವೀಕರಣ ಪ್ರಮುಖ ಪಾತ್ರ ವಹಿಸಿದೆ. ಪ್ರಧಾನಿ ಮೋದಿಯವರ ಅಲೆ ಇಲ್ಲಿ ಬಿಜೆಪಿಯ ಪ್ಲಸ್ ಪಾಯಿಂಟ್ ಆಗಿದೆ. ಯಾವುದೇ ಅಭ್ಯರ್ಥಿ ಅಥವಾ ಅಭಿವೃದ್ಧಿಗೆ ಬದಲಾಗಿ ಬಿಜೆಪಿ ಪ್ರಮುಖವಾಗಿದೆ. ಜೆಡಿಎಸ್ ಬಗ್ಗೆ ಇಲ್ಲಿ ಸಂಪೂರ್ಣ ನಕರಾತ್ಮಕ ಅಭಿಪ್ರಾಯವಿದೆ. ಇಲ್ಲಿನ ಒಟ್ಟು 19 ಕ್ಷೇತ್ರಗಳ ಪೈಕಿ ಬಿಜೆಪಿ 12 ರಿಂದ13 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು, ಕಾಂಗ್ರೆಸ್ 7 ರಿಂದ 8 ಕ್ಷೇತ್ರಗಳಲ್ಲಿ ಜಯಗಳಿಸಲಿದೆ .ಇನ್ನೊಂದು ಕ್ಷೇತ್ರದಲ್ಲಿ ಫಲಿತಾಂಶ ಏನು ಬೇಕಾದರೂ ಆಗಲಿದೆ ಎಂದು ಸಮೀಕ್ಷೆ ತಿಳಿಸಿದೆ.
    ಒಟ್ಟಾರೆಯಾಗಿ ಈ ಚುನಾವಣೆಯಲ್ಲಿ ಕಾಂಗ್ರೆಸ್ 108-114 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಳ ಬಹುಮತ ಪಡೆದುಕೊಂಡು ಸರ್ಕಾರ ರಚನೆ ಮಾಡುತ್ತದೆ ಎಂದು ಸಮೀಕ್ಷೆ ತಿಳಿಸಿದೆ.
    ಆಡಳಿತ ರೂಡ ಬಿಜೆಪಿ 65-76 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವ ಸಾಧ್ಯತೆಯಿದ್ದು, ಜೆಡಿಸ್ 24-30 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಹಾಗೂ 7 ಕ್ಷೇತ್ರಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಲಿದ್ದಾರೆ ಎಂದು ವರದಿ ತಿಳಿಸಿದೆ.
    ಒಟ್ಟಾರೆಯಾಗಿ ಈ ಫಲಿತಾಂಶಕ್ಕೆ ಹಣದುಬ್ಬರ, ಕೃಷಿ ಸಾಲ, ಬೆಳೆ ಹಾನಿ, ಕೃಷಿ ಉತ್ಪನ್ನಗಳ ಬೆಲೆ ಕುಸಿತ, ಭ್ರಷ್ಟಾಚಾರ, ಅಡುಗೆ ಅನಿಲ ಸೇರಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ, ಅಕ್ರಮ ಮರಳು ಗಣಿಗಾರಿಕೆ, ರಿಯಲ್ ಎಸ್ಟೇಟ್, ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅವ್ಯವಹಾರ, ಗಡಿ ಮತ್ತು ಜಕ ವಿವಾದಗಳ ಆಧಾರದಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ಈ ಸಮೀಕ್ಷಾ ವರದಿ ಸಿದ್ಧ ಪಡಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

    Verbattle
    Verbattle
    Verbattle
    Bangalore Congress Election hyderabad Politics ಕಾಂಗ್ರೆಸ್ Election ರಾಜಕೀಯ ವ್ಯವಹಾರ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಭ್ರಷ್ಟಾಚಾರದ ಗಂಗೋತ್ರಿ ಯಾರು ಗೊತ್ತಾ..
    Next Article ಬಿಸಿಯೂಟದ ಜೊತೆ ಮೊಟ್ಟೆ ಕೊಡಿ.
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter on ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Eguqga on ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಖಚಿತ.
    • StephenVor on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.