ಬೆಂಗಳೂರು: ಬಿಜೆಪಿ ಸರ್ಕಾರ ಜಿಎಸ್‌ಟಿ ಮೂಲಕ ಜೀವಂತವಾಗಿರುವಾಗಲೇ ಜನರಿಗೆ ವಿಷ ಕೊಟ್ಟು ಸಾಯಿಸಲು ಮುಂದಾಗಿದೆ. ಇದರ ವಿರುದ್ಧ ತಾಲೂಕು ಹಾಗು ಹೊಬಳಿ ಮಟ್ಟದಲ್ಲಿ ಪಕ್ಷ ಹೋರಾಟ ಮಾಡಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಇರುವುದು ಜನ ಸಂತೋಷವಾಗಿರುವಂತೆ ನೋಡಿಕೊಳ್ಳಲು ಆದರೆ ಸರ್ಕಾರಿ ಉದ್ಯೋಗಿಗಳು, Businessಸ್ಥರು, ಜನಸಾಮಾನ್ಯರ ಆದಾಯ ಹೆಚ್ಚು ಮಾಡದೆ, ಎಲ್ಲ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡಿ ಅವರನ್ನು ದಿನನಿತ್ಯ ಪಿಕ್ ಪಾಕೆಟ್ ಮಾಡುತ್ತಿದೆ. ಜಿಎಸ್ ಟಿ ಹಾಕಿ ಜನರನ್ನು ಜೀವಂತವಾಗಿ ಸಾಯಿಸುತ್ತಿದೆ. ಪೆಟ್ರೋಲ್, ಡೀಸೆಲ್, ಹಾಲು ಮೊಸರು ಎಲ್ಲವೂ ದುಬಾರಿಯಾಗಿದೆ. ಇದರ ಹೊರೆಯನ್ನು ಜನರು ಹೇಗೆ ಹೊರುತ್ತಾರೆ ಎಂದು ಪ್ರಶ್ನಿಸಿದರು
ಹಾಲು ಉತ್ಪಾದನೆ ಮಾಡುವ ರೈತರಿಗೆ ಪ್ರತಿ ಲೀಟರ್ ಗೆ 28 ರೂ. ನೀಡುತ್ತಿದ್ದಾರೆ. ಹಾಲಿಗೆ 5 ರೂ. ಹೆಚ್ಚು ಮಾಡಲಿಲ್ಲ. ಆದರೆ ಹಸುಗಳಿಗೆ ಹಾಕುವ ಮೇವು, ನೀಡುವ ಚಿಕಿತ್ಸೆ ಬೆಲೆ ಹೆಚ್ಚಿದೆ. ರೈತ ಪಶುಸಂಗೋಪನೆ ಮೂಲಕ ತಾನೇ ಉದ್ಯೋಗ ಸೃಷ್ಟಿಸಿಕೊಂಡು ಬದುಕುತ್ತಿದ್ದರೂ ಈ ಸರ್ಕಾರ ಆತನ ಬಗ್ಗೆ ಯೋಚಿಸುತ್ತಿಲ್ಲ ಎಂದು ಕಿಡಿಕಾರಿದರು.
ಸಹಕಾರಿ ಸಂಸ್ಥೆಗಳು ಎಂದರೆ ಅದು ರೈತರ ಸಂಸ್ಥೆ. ಸರ್ಕಾರದ ಈ ತೀರ್ಮಾನದಿಂದ ಜನ ಮುಂದೆ ಯಾವುದೇ ಪ್ಯಾಕೇಜ್ ಮಾಡುವಂತಿಲ್ಲ. ಕಳ್ಳ ದಾರಿಯಲ್ಲಿ ವ್ಯಾಪಾರ ಮಾಡಲಿ ಎಂದು ಈ ರೀತಿ ಮಾಡುತ್ತಿದೆಯೆ ಎಂದು ಪ್ರಶ್ನಿಸಿದರು.
ಶವ ಸುಡಲು ತೆರಿಗೆ ಕಟ್ಟುವ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ನಲ್ಲಿ ಯಾರಿಗೂ ಪರಿಹಾರ ನೀಡಲಿಲ್ಲ. ಹೊರ ದೇಶಗಳಲ್ಲಿ ಜನರು ಸಾಯುವ ಮುನ್ನವೇ ಹಣ ಕಟ್ಟಬೇಕು ಎಂದು ಕೇಳಿದ್ದೆ. ಈಗ ಇಲ್ಲೂ ಶವಸಂಸ್ಕಾರಕ್ಕೂ ತೆರಿಗೆ ವಸೂಲಿ ಮಾಡುತ್ತಿದ್ದೀರಿ. ಜನರಿಗೆ ಇಷ್ಟು ಕಿರುಕುಳ ನೀಡುತ್ತಿರುವುದು ಸರಿಯೇ? ಮುಖ್ಯಮಂತ್ರಿಗಳೂ ಇಂದೇ ಸಭೆ ಕರೆದು, ಸರ್ಕಾರದಿಂದಲೇ ಈ ತೆರಿಗೆ ಭರಿಸಿ ಈ ಹೊರೆಯನ್ನು ಜನರಿಗೆ ಹಾಕದಂತೆ ತಡೆಯಬೇಕು. ಆ ಮೂಲಕ ಬಡವರ ಪಿಕ್ ಪಾಕೆಟ್ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಪ್ರತಿ ತಾಲೂಕು ಮಟ್ಟದಿಂದ ಹೋಬಳಿ ಮಟ್ಟದವರೆಗೂ ಈ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ಬಿಜೆಪಿ ಸರ್ಕಾರ ಈಗಾಗಲೇ ಭ್ರಷ್ಟ ಸರ್ಕಾರ ಎಂದು ಹೆಸರು ಪಡೆದುಕೊಂಡಿದೆ ಎಂದರು.
Previous Articleಯಾರು ಯಾರೋ ಸಿಎಂ ಹುದ್ದೆ ಕೇಳುತ್ತಿದ್ದಾರೆ..?
Next Article ಮಾಜಿ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್..?