ಬೆಂಗಳೂರು : ಸೇವೆ ಖಾಯಾಮಾತಿ ಸೇರಿದಂತೆ ತಮ್ಮ ಹಲವು ಬೇಡುಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಪೌರಕಾರ್ಮಿಕರ ಬಗ್ಗೆ ಸರ್ಕಾರ ಸಹಾನುಭೂತಿ ಹಾಗೂ ಮಾನವೀಯಕತೆಯಿಂದ ಕ್ರಮ ಕೈಗೊಳ್ಳಬೇಕು ಎಂಬ ತೀರ್ಮಾನ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೂರು ತಿಂಗಳಲ್ಲಿ ಸೇವೆ ಖಾಯಂ ಮಾಡಬೇಕು ಎಂಬ ಬಗ್ಗೆ ತಾತ್ವಿಕವಾಗಿ ಒಪ್ಪಿಕೊಂಡಿದ್ದೇವೆ ತಾಂತ್ರಿಕ ಹಾಗೂ ಕಾನೂನಾತ್ಮಕವಾಗಿ ಏನು ಕ್ರಮ ಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಪೌರ ಕಾರ್ಮಿಕರು ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು ಮಾಡಿದ್ದೇವೆ. ಕಾನೂನು ನೋಡಿಕೊಂಡು ಪ್ರಕ್ರಿಯೆ ಶುರು ಮಾಡುತ್ತೇವೆ ಎಂದು ತಿಳಿಸಿದರು.
ಪೌರ ಕಾರ್ಮಿಕರ ಸಂರಕ್ಷಣೆ, ಆರೋಗ್ಯ ಮತ್ತು ಶಿಕ್ಷಣಕ್ಕೆ ಖಾಯಂ ಆಗಿ ಸುರಕ್ಷತೆ ಕೊಡುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಹೈದರಾಬಾದ್ ನಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು ಇದರಲ್ಲಿ ಭಾಗಿಯಾಗುತ್ತಿದ್ದೇನೆ.ಅವಕಾಶ ದೊರೆತರೆ ಅಮಿತ್ ಶಾ ಮತ್ತು ನಡ್ಡಾ ಅವರನ್ನು ಭೇಟಿಯಾಗಿ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.