Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯ ರಾತ್ರಿಯೇ ಫಾಝಿಲ್ ಕೊಲೆಗೆ ಸಂಚು: ಆತನೇ ಟಾರ್ಗೆಟ್ ಏಕೆ?
    ಸುದ್ದಿ

    ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯ ರಾತ್ರಿಯೇ ಫಾಝಿಲ್ ಕೊಲೆಗೆ ಸಂಚು: ಆತನೇ ಟಾರ್ಗೆಟ್ ಏಕೆ?

    vartha chakraBy vartha chakraAugust 2, 2022Updated:August 2, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿ ಬಂಧಿಸುತ್ತಿದ್ದು, ಇದೀಗ ಸುರತ್ಕಲ್ ನ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಕಂಬಿ ಹಿಂದೆ ಕಳುಹಿಸಿದ್ದಾರೆ‌.

    ಬಜ್ಪೆ ನಿವಾಸಿ ಸುಹಾಸ್ ಶೆಟ್ಟಿ(29), ಕುಳಾಯಿ ಕಾವಿನಕಲ್ಲು ನಿವಾಸಿ ಮೋಹನ್ ಸಿಂಗ್(26), ಕುಳಾಯಿ ವಿದ್ಯಾನಗರ ನಿವಾಸಿ ಗಿರಿಧರ್(23), ಕಾಟಿಪಳ್ಳ ನಿವಾಸಿಗಳಾದ ಅಭಿಷೇಕ್(21), ಶ್ರೀನಿವಾಸ(23), ದೀಕ್ಷಿತ್(21) ಬಂಧಿತ ಆರೋಪಿಗಳು. ಈ ಕೃತ್ಯದಲ್ಲಿ ಬಳಸಲಾಗಿರುವ ಕಾರಿನ ಮಾಲಕ ಅಜಿತ್ ಕ್ರಾಸ್ತಾನನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಿದಾಗ ಆರೋಪಿಗಳ ಬಗ್ಗೆ ಆತ ಬಾಯಿ ಬಿಟ್ಟಿದ್ದಾನೆ. ಆರೋಪಿಗಳು ಕೃತ್ಯ ಎಸಗುವ ಬಗ್ಗೆ ಮಾಹಿತಿ ಇದ್ದರೂ ಆತ ಹಣದಾಸೆಗೆ ಕಾರು ನೀಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

    ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಯ ರಾತ್ರಿಯೇ ಯಾರನ್ನಾದರೂ ಕೊಲೆ ಮಾಡಬೇಕೆಂದು ಸುಹಾಸ್ ಶೆಟ್ಟಿ ಹಾಗು ಅಭಿಷೇಕ್ ನಡುವೆ ಚರ್ಚೆ ನಡೆದಿದೆ. ಮರುದಿನವೂ ಈ ಬಗ್ಗೆ ಚರ್ಚೆಯಾಗಿದ್ದು, ಅಲ್ಲಿ ಮೋಹನ್ ಸಿಂಗ್ ಇವರಿಗೆ ಜೊತೆಯಾಗುತ್ತಾನೆ. ಆತ ತನ್ನ ಬಳಗದ ಗಿರಿಧರ್, ಶ್ರೀನಿವಾಸ ಹಾಗು ದೀಕ್ಷಿತ್ ಎಂಬವರನ್ನು ಈ ಕೃತ್ಯಕ್ಕೆ ಸೇರ್ಪಡಿಸುತ್ತಾನೆ. ಗಿರಿಧರ್ ಕೃತ್ಯ ಎಸಗಲು ಅಜಿತ್ ಕ್ರಾಸ್ತಾನಿಂದ ಕಾರು ಬಾಡಿಗೆ ಪಡೆದಿದ್ದಾನೆ. ಫಾಝಿಲ್ ಹತ್ಯೆ ನಡೆದ ಜುಲೈ 28ರಂದು ಬೆಳಗ್ಗೆ ಕಾರಿನಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಸುಹಾಸ್ ಶೆಟ್ಟಿ ಹಾಗು ತಂಡ ಬಂಟ್ವಾಳದ ಕಾರಿಂಜೇಶ್ವರ ದೇವಸ್ಥಾನಕ್ಕೆ ತೆರಳಿತ್ತು. ಅಲ್ಲಿಂದ ಬರುವ ವೇಳೆ ಮಂಕಿಕ್ಯಾಪ್ ಗಳನ್ನು‌ ರೆಡಿ ಮಾಡಿಕೊಂಡಿದ್ದಾರೆ.

    ಈ ನಡುವೆ ಯಾರನ್ನು ಹತ್ಯೆ ಮಾಡಬೇಕೆಂದು ಆರೂ ಮಂದಿಯ ನಡುವೆ ಚರ್ಚೆ ನಡೆದಿದೆ. ಕೊನೆಗೆ ಫಾಝಿಲ್ ಕೊಲೆಗೆ ಸ್ಕೆಚ್ ಹಾಕಲಾಗಿದೆ. ಕೊಲೆ ನಡೆದ ದಿನ ಕಿನ್ನಿಗೋಳಿ ಬಾರ್ ನಲ್ಲಿ ಊಟ ಮಾಡಿದ ತಂಡ ಫಾಝಿಲ್ ಹೆಚ್ಚಾಗಿ ಇರುವ ಸುರತ್ಕಲ್, ಮಂಗಳಪೇಟೆ ಪರಿಸರದಲ್ಲಿ ಕಾರಿನಲ್ಲಿ ಸುತ್ತಾಡಿದೆ‌. ಈ ವೇಳೆ ಸುರತ್ಕಲ್ ಫಾಝಿಲ್ ಅಂಗಡಿ ಮುಂಭಾಗ ಇರುವುದು ತಿಳಿದು ಬಂದಿದೆ. ಈ ವೇಳೆ ಗಿರಿಧರ್ ಕಾರು ಚಾಲಕನಾಗಿದ್ದ, ದೀಕ್ಷಿತ್ ಕಾರಿನಲ್ಲಿದ್ದ, ಶ್ರೀನಿವಾಸ ಯಾರಾದರೂ ಬರುತ್ತಾರೆಯೇ ಎಂದು ಪರಿಶೀಲನೆ ನಡೆಸುತ್ತಿದ್ದ. ಸುಹಾಸ್ ಶೆಟ್ಟಿ, ಮೋಹನ್ ಸಿಂಗ್ ಹಾಗು ಅಭಿಷೇಕ್ ಮಾರಣಾಸ್ತ್ರಗಳನ್ನು ಹಿಡಿದು ಫಾಝಿಲ್ ಮೇಲೆ ಮಾರಣಾಂತಿಕ ದಾಳಿ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾರೆ‌. ಅಲ್ಲಿಂದ ಕಾರಿನಲ್ಲಿ ಪರಾರಿಯಾದ ಹಂತಕರು ಪಲಿಮಾರು ಮೂಲಕ ಹೋಗಿ ಇನ್ನಾದಲ್ಲಿ ಆ ಕಾರನ್ನು ಇಟ್ಟು ಮತ್ತೊಂದು ಕಾರು ತರಿಸಿಕೊಂಡು ಅದರಲ್ಲಿ ತಲೆ ಮರೆಸಿಕೊಂಡಿದ್ದರು.

    ಪೊಲೀಸ್ ಇಲಾಖೆ 8 ತಂಡಗಳನ್ನು ಮಾಡಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಇಂದು ಉದ್ಯಾವರದ ಬಳಿ ಆರೂ ಮಂದಿಯನ್ನು ಬಂಧಿಸಿದ್ದಾರೆ. ಎಸಿಪಿ ಮಹೇಶ್ ಕುಮಾರ್ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    crime News ಕಾರು ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleದೊಣ್ಣೆಯಿಂದ ಹೊಡೆದು ಮಹಿಳೆ ಭೀಕರ ಕೊಲೆ
    Next Article ಇಡೀ ದೇಶದ ಉದ್ದಗಲಕ್ಕೆ ಬಾಂಬ್ ಸಿಡಿತಾ ಇತ್ತು ಎಂದು ಬಾಂಬ್ ಸಿಡಿಸಿದ ಆರಗ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zsesuf on ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕು.
    • LinwoodGah on ಎದೆ ನಡುಗಿಸಿದ ಭೀಕರ ಹತ್ಯೆ.
    • Hemkef on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.