ಮಂಗಳೂರು: ಸುರತ್ಕಲ್ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಫಾಝಿಲ್ ಹತ್ಯೆ ಪ್ರಕರಣದ ಆರು ಜನ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದೇವೆ. ಶ್ರೀನಿವಾಸ ಕಾಟಿಪಳ್ಳ(23), ಅಭಿಷೇಕ್(23) ದೀಕ್ಷಿತ್ ಕಾಟಿಪಳ್ಳ(21), ಸುಹಾಸ್( 29), ಮೋಹನ್(23) ಮತ್ತು ಗಿರೀಶ್(27) ಬಂಧಿತ ಆರೋಪಿಗಳು. ಪ್ರಕರಣಕ್ಕೆ ಬಳಸಲಾಗಿರುವ ಕಾರು ಹಾಗು ಕಾರಿನ ಮಾಲೀಕರನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಇನ್ನು ಬಜ್ಪೆಯ ಸುಹಾಸ್ ಶೆಟ್ಟಿ ಹಾಗು ಅಭಿಷೇಕ್ ಜುಲೈ 27ರಂದು ಸುರತ್ಕಲ್ನ ಒಂದು ಜಾಗದಲ್ಲಿ ಎಲ್ಲಾ ಆರೋಪಿಗಳನ್ನು ಒಗ್ಗೂಡಿಸಿ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ. ಬಳಿಕ ಮೂರು ದಿನಕ್ಕೆ 15 ಸಾವಿರ ಹಣ ನೀಡುವುದಾಗಿ ಅಜಿತ್ ಕ್ರಾಸ್ತಾ ಎನ್ನುವವರಿಂದ ಕಾರು ಬಾಡಿಗೆಗೆ ಪಡೆದಿದ್ದಾರೆ. ಅಜಿತ್ಗೆ ವಿಚಾರ ಗೊತ್ತಿದ್ದರೂ ಹಣದ ಆಸೆಗೆ ಕಾರು ನೀಡಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.