ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ನಡೆದ ಹಿನ್ನೆಲೆ ಜಿಲ್ಲೆಯಲ್ಲಿ ಈಗಾಗಲೇ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಮದ್ಯ ಮಾರಾಟವನ್ನು ಕೂಡ ನಿಷೇಧಿಸಲಾಗಿತ್ತು. ಇದೀಗ ಪರಿಸ್ಥಿತಿ ಇನ್ನೂ ಕೂಡ ಬೂದಿ ಮುಚ್ಚಿದ ಕೆಂಡದಂತಿದೆ ಈ ಹಿನ್ನೆಲೆ ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧವನ್ನು ಆಗಸ್ಟ್ 5ರವರೆಗೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.
ಬೆಳ್ಳಾರೆ ಪ್ರವೀಣ್ ಹಾಗು ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ, ಜಿಲ್ಲಾಡಳಿತ ಈ ಹಿಂದೆ ಅಗಸ್ಟ್ 3 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿತ್ತು. ಇದೀಗ ಪರಿಸ್ಥಿತಿ ಇನ್ನೂ ತಿಳಿಯಾಗದ ಕಾರಣ ಮತ್ತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕೋರಿಕೆ ಮೆರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು, ಜಿಲ್ಲೆಯಾದ್ಯಂತ ಮದ್ಯಮಾರಾಟ ನಿಷೇಧವನ್ನು ಅಗಸ್ಟ್ 5 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.