ಫೆಮಿನಾ ಮಿಸ್ ಇಂಡಿಯಾ 2022 ಕಿರೀಟ ಮುಡಿಗೇರಿಸಿಕೊಂಡಿರುವ ಸಿನಿ ಶೆಟ್ಟಿ ಹುಟ್ಟೂರಿಗೆ ಆಗಮಿಸಿದ್ದಾರೆ. ಸೋಮವಾರ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಕುಟುಂಬಸ್ಥರು ಆಪ್ತರು ಅದ್ದೂರಿ ಸ್ವಾಗತ ನೀಡಿದ್ದಾರೆ. ಮಿಸ್ ಇಂಡಿಯಾ ಕಿರೀಟ ಧರಿಸಿಯೇ ವಿಮಾನ ನಿಲ್ದಾಣದಿಂದ ಆಗಮಿಸಿದ ಸಿನಿ ಶೆಟ್ಟಿ ಅವರನ್ನು ಭವ್ಯ ಸಾರೋಟಿನ ಮೇಲೆ ಮೆರವಣಿಗೆ ಮೂಲಕ ಸ್ವಾಗತ ಕೋರಲಾಯಿತು.