ಮೈಸೂರು : ಕೆರೆಯಲು ಈಜಲು ಹೋದ ಯುವಕ ನೀರುಪಾಲಾಗಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಚಿಕ್ಕ ಕೆರೆಯೂರು ಗ್ರಾಮದಲ್ಲಿ ನಡೆದಿದೆ.ಹರೀಶ (27) ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಈಜುಗಾರರ ಸಹಕಾರದಿಂದ ಮೃತದೇಹ ಪತ್ತೆಗೆ ಕಾರ್ಯಾಚರಣೆ ಆರಂಭವಾಗಿದೆ.
ಹೆಚ್.ಡಿ.ಕೋಟೆ ತಾಲೂಕಿನ ಚಿಕ್ಕೆರೆಯೂರು ಗ್ರಾಮದ ಹೊರವಲಯದಲ್ಲಿ ಘಟನೆ ಸಂಭವಿಸಿದ್ದು,
ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬದವರ ರೋಧನ ಮುಗಿಲು ಮುಟ್ಟಿದೆ.