ಮೈಸೂರಿನಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ನಡೆದು ಅಪಘಾತ ಸಂಭವಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಓರ್ವ ವ್ಯಕ್ತಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಕಾರು ಚಾಲಕನಿಂದ ಅತೀ ವೇಗದ ಚಾಲನೆ ಎಂಬ ಆರೋಪ ಕೇಳಿ ಬಂದಿದೆ.ಪಿರಿಯಾಪಟ್ಟಣದ ಯಶೋಧಪುರದ ಬಿಎಂ ರಸ್ತೆಯಲ್ಲಿ ಘಟನೆ ನಡೆದಿದ್ದು,
ರಸ್ತೆ ಬದಿಯಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.
ಅರಣ್ಯ ವೀಕ್ಷಕನಾಗಿದ್ದ ಚೇತನ್ ಗೆ ಕಾರು ಡಿಕ್ಕಿ ಹೊಡೆದಿದೆ.
ತೀವ್ರ ಸ್ವರೂಪದ ಗಾಯಗೊಂಡಿರುವ ಚೇತನ್ ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಕಾರು ರಭಸವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಈ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತ ತಡೆಗಟ್ಟಲು ಗ್ರಾಮಸ್ಥರ ಆಗ್ರಹ ಮಾಡಿದ್ದಾರೆ.
Previous Articleಲಾಲ್ ಬಾಗ್ ನಲ್ಲಿ ಅಪ್ಪು ನೆನಪಿನ ಫಲಪುಷ್ಪ ಪ್ರದರ್ಶನ ಉದ್ಘಾಟನೆ
Next Article ಮಳೆಗೆ ಮಾರಣ ಹೋಮವಾದ ಕೋಳಿಗಳು