ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಹೊಸ ಸಿನಿಮಾ ಟೈಟಲ್ ಘೋಷಣೆ ಮಾಡಿದ್ದಾರೆ. ಜಿ.ಓ.ಡಿ. ಎನ್ನೋ ಹೆಸರಿನ ಈ ಚಿತ್ರದ ಟೈಟಲ್ ಪೋಸ್ಟರ್ ಅನ್ನು ರಾಘವೇಂದ್ರ ರಾಜ್ ಕುಮಾರ್ ತಮ್ಮ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದ್ದು ರಾಮಾಚಾರಿ 2.0 ತಯಾರಕರು ಇದರ ನಿರ್ಮಾಣ ಮಾಡಲಿದ್ದಾರೆ. ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕು. ಆದರೆ ಪೋಸ್ಟರ್ ನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಧಾರ್ಮಿಕ ಚಿಹ್ನೆಗಳು ಇದ್ದು ಸಿನಿಮಾ ಹೆಸರು ಕುತೂಹಲ ಮೂಡಿಸಿದೆ.