ಹೊಂಬಾಳೆ ಪ್ರೊಡಕ್ಷನ್ ಸಂಸ್ಥೆ ಹೂಡಿಕೆ ಮಾಡಿರುವ, ತುಳುನಾಡ ಸಂಸ್ಕೃತಿಯನ್ನು ಬಿಂಬಿಸುವ, ರಿಷಭ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಮೂವಿ ಟೀಸರ್ ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿತ್ತು. ಇಂದು ರಿಷಭ್ ಶೆಟ್ಟಿ ಜನ್ಮದಿನದ ಅಂಗವಾಗಿ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಪೋಸ್ಟರ್ ನಲ್ಲಿ ರಿಷಭ್ ಶಿವ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. “ಕಾಂತಾರ” – ಒಂದು ದಂತಕಥೆ’ ಚಿತ್ರ ಇದೇ ಸೆಪ್ಟೆಂಬರ್ ೩೦ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.ಈ ಚಿತ್ರದಲ್ಲಿ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂತಾರ ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತ ಮತ್ತು ಅರವಿಂದ್ ಎಸ್ ಕಶ್ಯಪ್ ಅವರ ಛಾಯಾಗ್ರಹಣವಿದೆ.
Previous Articleಅಪಘಾತ ತುಮಕೂರು ಜಿಲ್ಲೆಯ ಮೂವರ ಸಾವು
Next Article ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ…