ಪುನೀತ್ ರಾಜ್‍ಕುಮಾರ್ ರವರ ಗಂಧದ ಗುಡಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
ಪುನೀತ್ ನಿಧನ ಹೊಂದಿದ ಒಂದು ದಿನಾಂಕಕ್ಕಿಂತ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ಬಿಡುಗಡೆ ಆಗಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್‍ಕುಮಾರ್ , ‘ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ’ ಎಂದು ಬರೆದುಕೊಂಡಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರ ಪಿಆರ್ಕೆ ಸ್ಟುಡಿಯೋಸ್’ ಮೂಲಕ ‘ಗಂಧದಗುಡಿ’ ನಿರ್ಮಾಣ ಆಗಿದೆ.