Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಕು ಹಾಕಿದವರಿಗೆ ಗುಂಡೇಟು..
    ಸುದ್ದಿ

    ಚಾಕು ಹಾಕಿದವರಿಗೆ ಗುಂಡೇಟು..

    vartha chakraBy vartha chakraAugust 16, 2022Updated:August 16, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ,ಆ.16- ಸ್ವಾತಂತ್ರ್ಯ ಹೋರಾಟಗಾರ ವೀರ್​ ಸಾವರ್ಕರ್ ಹಾಗು ಟಿಪ್ಪು ಸುಲ್ತಾನ್​ ಫೋಟೋ ವಿವಾದ ಭುಗಿಲೆದ್ದು, ಎರಡು ಸಮುದಾಯದ ನಡುವೆ ಕಿಚ್ಚು ಹಚ್ಚಿಸಿ, ಹಿಂಸಾಚಾರ ನಡೆದು, ಇಬ್ಬರು ಹಿಂದೂ ಯುವಕರಿಗೆ ಚಾಕು ಇರಿದ ಕೃತ್ಯದ ಸಂಬಂಧ ಓರ್ವನಿಗೆ ಗುಂಡು ಹೊಡೆದಿದ್ದು ಆತ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
    ಪೊಲೀಸರ ಗುಂಡೇಟು ಕಾಲಿಗೆ ತಗುಲಿರುವ ಬುದ್ಧ ನಗರದ ಮಹಮ್ಮದ್ ಜಬೀವುಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
    ಜೆಸಿ ನಗರದ ನದೀಮ್ ಹಾಗು ಬುದ್ಧ ನಗರದ ಅಬ್ದುಲ್ ರೆಹಮಾನ್ ಸೇರಿ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ‌ ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದ್ದು ನಿಷೇದಾಜ್ಞೆ ಮುಂದುವರೆಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.
    ಆರೋಪಿ ಮೊಹಮ್ಮದ್ ಜಬೀವುಲ್ಲಾ ಬಂಧಿಸಲು ಬೆನ್ನತ್ತಿ ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿ ಓಡಿಹೋಗಲು ಯತ್ನಿಸುತ್ತಿದ್ದಾಗ ಆತ್ಮ ರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ. ಆತನಿಗೆ ಈಗಾಗಲೇ ಚಿಕಿತ್ಸೆ ನೀಡಲಾಗಿದ್ದು, ಜೈಲಿನ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದೆ ಎಂದರು.
    ಹಲ್ಲೆಗೊಳಗಾದ ಪ್ರೇಮ್‌ಸಿಂಗ್, ಹಾಗು ಗುಂಡೇಟು ತಿಂದ ಮಹಮ್ಮದ್ ಜಭೀವುಲ್ಲಾ ನಿಂದ ಮಾಹಿತಿ ಪಡೆದಿದ್ದೇನೆ. ಪ್ರೇಮ್ ಸಿಂಗ್ ಅಣ್ಣ ಅತನ ಜೊತೆ ಇದ್ದು ನೋಡಿಕೊಳ್ಳುತ್ತಿದ್ದಾರೆ. ರಾಜಸ್ಥಾನದಲ್ಲಿರುವ ಅವರ ತಂದೆ ತಾಯಿಗೆ ಮಾಹಿತಿ ನೀಡಲಾಗಿದೆ ಎಂದರು.
    ಹಿನ್ನಲೆಯ ಬಗ್ಗೆ ತನಿಖೆ:
    ಚಾಕು ಇರಿತಕ್ಕೊಳಗಾಗಿರುವ ಇಬ್ಬರ ಆರೋಗ್ಯವೂ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆಯಲಿದೆ.
    ಗುಂಡೇಟು ತಿಂದಿರುವ ಆರೋಪಿ ಮೊಹಮ್ಮದ್‌ ಜಬಿಯಿಂದಲೂ ಮಾಹಿತಿ ಪಡೆದಿದ್ದೇನೆ ಎಂದು ತಿಳಿಸಿದರು.
    ನಗರದ ಎಎ ಸರ್ಕಲ್‌ ನಲ್ಲಿ ಫ್ಲೆಕ್ಸ್ ತೆರವು ವೇಳೆ ನಡೆದ ಗಲಭೆಯಲ್ಲಿ ಜಬೀವುಲ್ಲಾ ಪಾಲ್ಗೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದ್ದು ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದರು‌.
    ಆರೋಪಿಗಳ ಹಿನ್ನೆಲೆ, ಅವರು ಯಾವ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಲಿದೆ. ಅವರ ವಿರುದ್ಧ ಅವರ ವಿರುದ್ಧ ದಾಖಲಿಸುವುದರ ಜೊತೆಗೆ ಆಸ್ತಿ ಮುಟ್ಟುಗೋಲು ಹಾಕುವ ವಿಚಾರವಾಗಿ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
    3 ದಿನ ನಿಷೇದಾಜ್ಞೆ:
    ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮೂರು ದಿನಗಳ ಕಾಲ ನಿಷೇದಾಜ್ಞೆ ಜಾರಿ ಮಾಡಲಾಗಿದೆ.
    ಮೂರು ದಿನಗಳವರೆಗೆ 40 ವರ್ಷ ಕಡಿಮೆ ವಯಸ್ಸಿನ ಗಂಡಸರನ್ನು ಹಿಂಬದಿಯಲ್ಲಿ ಬೈಕ್​ನಲ್ಲಿ ಕೂರಿಸಿಕೊಂಡು ಸಂಚರಿಸುವಂತಿಲ್ಲ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
    ನಗರದ ಎಲ್ಲೆಡೆ ವಾಹನಗಳ ತಪಾಸಣೆ ನಡೆಸುತ್ತೇವೆ. ಭದ್ರತೆಗಾಗಿ 15 ಪ್ಲಟೂನ್​ ಬಂದಿದ್ದು, ಇನ್ನೂ 6 ಪ್ಲಟೂನ್ ಬರಲಿವೆ. ಹೆಚ್ಚುವರಿಯಾಗಿ ಓರ್ವ ಎಸ್​ಪಿ, ಮೂವರು ಹೆಚ್ಚುವರಿ ಎಸ್​ಪಿ ಸಿಐಡಿಯ ಮೂವರು ಡಿವೈಎಸ್​ಪಿ, 10 ಇನ್ಸ್​ಪೆಕ್ಟರ್ ಅವರನ್ನು​ ನಿಯೋಜನೆ ಮಾಡಲಾಗಿದೆ ಎಂದರು.
    ಪೋಟೋ ವಿವಾದ:
    ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ನಿನ್ನೆ ವೀರ್​ ಸಾವರ್ಕರ್​ ಅವರ ಫೋಟೋ ಅನ್ನು ಹಿಂದೂ ಸಂಘಟನೆಯ ಕೆಲವು ಯುವಕರು ಅಳವಡಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಆ ಫೋಟೋ ಕಿತ್ತೆಸೆದು ಅಲ್ಲಿ ಟಿಪ್ಪು ಫೋಟೋ ಇಡಲು ಮುಂದಾಗಿದ್ದೇ ಈ ಘಟನೆಗೆ ಕಾರಣವಾಗಿತ್ತು.
    ಈ ಫೋಟೋ ವಿವಾದ ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ಕಿಚ್ಚು ಹಚ್ಚಿಸಿ ಹಿಂಸಾಚಾರಕ್ಕೆ ತಿರುಗಿ ನಿಷೇದಾಜ್ಞೆ
    ಜಾರಿ ಮಾಡಲಾಗಿತ್ತು. ಇದರ ಹೊರತಾಗಿಯೂ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಮನೆಗೆ ಹೊರಟಿದ್ದ ಪ್ರೇಮ್​ ಸಿಂಗ್​ ಮತ್ತು ಪ್ರವೀಣ್​ ಕುಮಾರ್​ ಎನ್ನುವವರಿಗೆ ಚಾಕುವಿನಿಂದ ಇರಿದು ಇನ್ನಷ್ಟು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ ಘಟನೆ ನಡೆದಿತ್ತು.

    Verbattle
    Verbattle
    Verbattle
    shimoga karnataka ಆರೋಗ್ಯ ಕಲೆ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನವರು ಇತಿಹಾಸ ಸರಿಯಾಗಿ ಓದಿಲ್ಲ: ಮಾಜಿ ಸಿಎಂ
    Next Article ಅಮೀರ್ ಖಾನ್, ಸಲ್ಮಾನ್ ಖಾನ್ ಪಾಕಿಸ್ತಾನದ ಏಜೆಂಟರಾ…?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Daviddek on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Bryandiz on ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.