Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದೆಲ್ಲೆಡೆ ಹೈ ಅಲರ್ಟ್..
    ಸುದ್ದಿ

    ರಾಜ್ಯದೆಲ್ಲೆಡೆ ಹೈ ಅಲರ್ಟ್..

    vartha chakraBy vartha chakraJune 11, 2022Updated:June 11, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.10: ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ಮಹಮದ್ ಪೈಗಂಬರ್ ಬಗ್ಗೆ ನೀಡಿದ್ದ
    ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ಗಲಾಟೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಹೈಅಲರ್ಟ್ ಘೋಷಿಸಿ ಕಟ್ಟೆಚ್ಚರ ವಹಿಸಲಾಗಿದೆ
    ದೇಶದ ಹಲವು ರಾಜ್ಯಗಳಲ್ಲಿ ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ಪ್ರತಿಭಟನೆ ಹಿಂಸಾಚಾರ ನಡೆದಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯಗಳಿಗೂ ಎಚ್ಚರ ವಹಿಸುವಂತೆ ಸೂಚನೆಯನ್ನು ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಹೈಲರ್ಟ್ ಘೋಷಿಸಿ ಬಿಗಿ ಪೊಲೀಸ್ ಬಂದೋಬಸ್ಥ್ ಕೈಗೊಳ್ಳಲಾಗಿದೆ. ರಾಜ್ಯದ ಅತಿ ಸೂಕ್ಷ್ಮ, ಸೂಕ್ಷ್ಮ ಪ್ರದೇಶಗಳು, ಮಸೀದಿಗಳು,ದೇವಾಲಯಗಳು,ಪ್ರಮುಖ ಪೂಜಾ ಮಂದಿರಗಳ ಬಳಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ.
    ರಾಜ್ಯದ ಕಮೀಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿಗಳು ಜಿಲ್ಲೆಯಲ್ಲಿ ಎಸ್ ಪಿಗಳು ಭದ್ರತೆಯ ನೇತೃತ್ವ ವಹಿಸಿದ್ದರೆ, ಕಮೀಷನರ್ ಗಳು ಐಜಿಗಳು ಭದ್ರತೆಯ ನಿಗಾ ವಹಿಸಿ ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದು ರಾಜ್ಯದ ಯಾವುದೇ ಭಾಗದಲ್ಲೂ‌ ಅಹಿತಕರ ಘಟನೆಗಳು ನಡೆದಿರುವ ವರದಿಗಳು ಬಂದಿಲ್ಲ.
    ಕೇಂದ್ರ ಸರ್ಕಾರದ ಎಚ್ಚರಿಕೆ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಜಿಪಿ ಪ್ರವೀಣ್ ಸೂದ್, ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿಯನ್ನು ವಿಧಾನಸೌಧಕ್ಕೆ ಕರೆಸಿ ಸಭೆ ನಡೆಸಿ ಅತಿ ಸೂಕ್ಷ್ಮ, ಸೂಕ್ಷ್ಮ ಪ್ರದೇಶಗಳನ್ನು ಪಟ್ಟಿಮಾಡಿ ಭದ್ರತೆಯನ್ನು ಬಿಗಿಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
    ರಾಜ್ಯದಲ್ಲಿಯೂ ಕಾನೂನು ಸುವ್ಯವಸ್ಥೆ ಹಾಳಾಗದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕೋಮು ಜ್ವಾಲೆ ಹಬ್ಬದಂತೆ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳಲು ಸೂಚನೆಯನ್ನು ನೀಡಿದ್ದಾರೆ.
    ಪ್ರವಾದಿ ವಿವಾದ ತೀವ್ರಗೊಳ್ಳಬಹುದು ಮತ್ತಷ್ಟು ಗಲಭೆ, ದೊಂಬಿಗಳು, ಶಾಂತಿ ಕದಡುವ ಕೆಲಸ ಆಗಬಹುದು. ಹೀಗಾಗಿ ಇದನ್ನು ತಡೆಯಲು ರಾಜ್ಯಗಳು ಸನ್ನದ್ಧರಾಗಬೇಕು. ಅಗತ್ಯ ಬಿದ್ದಲ್ಲಿ ಅರೆಸೇನಾ ತುಕಡಿಗಳನ್ನು ಬಳಸಿಕೊಳ್ಳಿ. ಉದ್ರೇಕಕಾರಿ ಭಾಷಣ ಮಾಡುವ ವ್ಯಕ್ತಿಗಳು, ಸೋಶಿಯಲ್ ಮಿಡಿಯಾ ಪೋಸ್ಟ್‌ಗಳ ಮೇಲೆ ನಿಗಾ ವಹಿಸಿ ಸಮಾಜದ ಶಾಂತಿ ಕದಡುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
    ಮುಖ್ಯಮಂತ್ರಿಗಳ ಸಭೆಯ ನಂತರ ರಾಜ್ಯದ ಸೂಕ್ಷ್ಮಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಂಡು ಸ್ಥಳೀಯ ಪೊಲೀಸರ ಜೊತೆಗೆ ಕೆಎಸ್‍ಆರ್‌ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಕೋಮು ಸಂಘರ್ಷ ಹೆಚ್ಚಾಗುವ , ಕಾನೂನು ಸುವ್ಯವಸ್ಥೆ ಹದಗೆಡುವಂತಹ ಪ್ರದೇಶಗಳಲ್ಲಿ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತೆಯನ್ನು ಕೈಗೊಳ್ಳುವುದು. ಅಪಾಯದ ಮುನ್ಸೂಜನೆ ಸಿಕ್ಕ ಪಕ್ಷದಲ್ಲಿ ಆಯಾ ಡಿವಿಷನ್‌ನಿಂದ ಹೆಚ್ಚುವರಿ ಪೊಲೀಸರನ್ನು ಭದ್ರತೆ ನಿಯೋಜನೆ ಮಾಡಲು ನಗರ ಪೊಲೀಸ್ ಆಯುಕ್ತರು ಡಿಸಿಪಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
    ನಗರದ ಯಶವಂತಪುರ ಸರ್ಕಲ್, ಗೋರಿಪಾಳ್ಯ, ಪಾದರಾಯನಪುರ, ಅಜಾದ್ ನಗರ, ಶಿವಾಜಿ ನಗರ, ನಿಲಸಂದ್ರ, ಬಕ್ಷಿ ಗಾರ್ಡನ್, ಕೆ.ಆರ್ ಮಾರ್ಕೆಟ್ ಸೇರಿದಂತೆ ಹಲವು ಕಡೆ ಬೀಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
    ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸ್ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

    Government
    Share. Facebook Twitter Pinterest LinkedIn Tumblr Email WhatsApp
    Previous Articleಹಿಂದಿ ವೆಬ್ ಸರಣಿಯಲ್ಲಿ ರಂಗಿತರಂಗ ಬೆಡಗಿ!
    Next Article ಕೆಎಟಿಗೆ ಔರಾದ್ಕರ್..
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    May 2, 2025

    ವಕೀಲ್ ಸಾಬ್ ಜೈಲಿಂದ ಬಿಡುಗಡೆ

    April 30, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Martinboorn on ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    • CASHBACK VANGPOKER on ಕುಂಭಮೇಳದಲ್ಲಿ ಕಿನ್ನರ ಕಲರವ
    • MarvinPraft on ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    May 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಆಪರೇಷನ್ ಸಿಂಧೂರ

    May 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe