ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಹೃದಯಾಘಾತವಾಗಿ ಶಿವಮೊಗ್ಗ ಸುಬ್ಬಣ್ಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. 1979ರಲ್ಲಿ ‘ಕಾಡು ಕುದುರೆ’ ಚಲನಚಿತ್ರಕ್ಕೆ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ ರಾಷ್ಟ್ರ ಪ್ರಶಸ್ತಿ ಅವರಿಗೆ ಒಲಿದಿತ್ತು. ರಾಷ್ಟ್ರ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡಿಗ ಸುಬ್ಬಣ್ಣರಾಗಿದ್ದರು. 1985ರಲ್ಲಿ ರಾಜ್ಯೋತ್ಸವ ಪುರಸ್ಕಾರ, 1988ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪುರಸ್ಕಾರ, 1999ರಲ್ಲಿ ಸಂತ ಶಿಶುನಾಳ ಷರೀಫ ಪ್ರಶಸ್ತಿ , 2008ರಲ್ಲಿ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಸುಬ್ಬಣ್ಣ ಪಡೆದಿದ್ದರು.
ಸುಗಮ ಸಂಗೀತ ಕ್ಷೇತ್ರದ ಹಿರಿಯ ಚೇತನ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ
Previous Articleಮಳೆ ಹಾನಿ ಪ್ರದೇಶ ವೀಕ್ಷಣೆಗೆ ಟ್ರಾಕ್ಟರ್ ಏರಿ ಬಂದ MLC
Next Article ದಾರಿ ತಪ್ಪಿ ಕಾಡಿನಿಂದ ನಾಡಿಗೆ ಬಂದ ಕಾಡಾನೆ