ಇದೇ 18ರಿಂದ ಮೂರು ದಿನಗಳ ಕಾಲ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ (ಟಿಪಿಎಲ್)ನಡೆಯಲಿದೆ. ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿಮಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ನಡೆಯಲಿದೆ, ಇದೇ ತಿಂಗಳ 18, 19 ಹಾಗು 20 ಈ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ ಕಿರುತೆರೆ ಕಲಾವಿದರು ಭಾಗಿಯಾಗಲಿದ್ದಾರೆ. ಹಿರಿಯ ಕಲಾವಿದರಿಗೆ ನೆರವು ನೀಡುವುದು ಇದರ ಮುಖ್ಯ ಧ್ಯೇಯವಾಗಿದೆ
ಕ್ರಿಕೆಟ್ ಪಂದ್ಯಾವಳಿಯ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್ ಮಾತನಾಡಿ, ಒಳ್ಳೆ ಉದ್ದೇಶ ಇಟ್ಕೊಂಡು ಈ ಪಂದ್ಯಾವಳಿ ಏರ್ಪಡಿಸಲಾಗಿದ್ದು. ಆರು ಜನ ಓನರ್ಸ್ ಗೆ ಧನ್ಯವಾದ ತಿಳಿಸುತ್ತೇನೆ. 16ರಂದು ಜರ್ಸಿ ಲಾಂಚ್ ಹಾಗೂ ಟ್ರೋಫಿ ಲಾಂಚ್ ಮಾಡಲಾಗಿದೆ. 18, 19 ಹಾಗೂ 20 ಈ ಮೂರು ದಿನಗಳ ಕಾಲ ಕ್ರಿಕೆಟ್ ನಡೆಯಲಿದೆ ಎಂದು ತಿಳಿಸಿದರು. ದಿ ಬುಲ್ ಸ್ಕ್ವಾಡ್, ಭಜರಂಗಿ ಬುಲ್ಸ್, ಎಂಜೆಲ್ ಎಸ್ಐ, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ.
Previous Articleಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗದಲ್ಲಿ ಮೀಸಲಾತಿ…
Next Article ಮುಸ್ಲಿಂ ಗೂಂಡಾಗಳೇ ಎಚ್ಚರ…!!