ಬೆಂಗಳೂರು : ರಾಜ್ಯಸಭೆ ಸದಸ್ಯರಾಗಿ ನಾಮಕರಣಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಮನ ಸೆಳೆದರು.
ಸೋಮವಾರದಿಂದ ಸಂಸತ್ ಅಧಿವೇಶನ ಆರಂಭಗೊಂಡಿದ್ದು, ಗುರುವಾರ ವೀರೇಂದ್ರ ಹೆಗ್ಗಡೆ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕಾಗಿ ಹೆಗ್ಗಡೆ ಅವರು ಬುಧವಾರವೇ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಅಧಿವೇಶನ ಮುಗಿಯುವವರೆಗೂ ಅವರು ದೆಹಲಿಯಲ್ಲಿ ಇರಲಿದ್ದಾರೆ ಎಂದು ಹೆಗಡೆ ಅವರ ಕಚೇರಿ ತಿಳಿಸಿದೆ.
ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಹೆಗ್ಗಡೆ ಅವರಿಗೆ ಪ್ರಧಾನಿ ಮೋದಿ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ, ಬಿಜೆಪಿ ಅಧ್ಯಕ್ಷ ಕಟೀಲ್ ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ.